ಮನೋರಂಜನೆ

#MeToo ವಿವಾದ- ಸರ್ಜಾ ಆಪ್ತ ಸಂಬರ್ಗಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿದ ನಟ ಚೇತನ್.

ಕನ್ನಡ ಚಿತ್ರರಂಗದಲ್ಲಿ ಬಿರುಗಾಳಿಯಂತೆ ಎದ್ದಿರುವ #MeToo ಅಭಿಯಾನ ವಿವಾದದ ಕೇಂದ್ರ ಬಿಂದುವಾಗುತ್ತಿವೆ. ಅರ್ಜುನ್ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿರುವ ಲೈಂಗಿಕ ದೌರ್ಜನ್ಯ ಆರೋಪ ಸ್ಯಾಂಡಲ್‍ವುಡ್‌ನಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಕೆಲವರು ಶ್ರುತಿ ಪರ ಧ್ವನಿಯೆತ್ತಿದರೆ, ಕೆಲವರು ಅರ್ಜುನ್ ಬೆಂಬಲಕ್ಕೆ ನಿಂತಿದ್ದಾರೆ.. ಅರ್ಜುನ್ ಸರ್ಜಾ ಅವರನ್ನು ಸಮರ್ಥಿಸುವ ಭರದಲ್ಲಿ ಶೃತಿ ಹರಿಹರನ್ ನಡತೆ ಸರಿಯಿಲ್ಲ ಎನ್ನುವಷ್ಟರ ಮಟ್ಟಿಗೆ ಕೆಲವು ನಿರ್ಮಾಪಕರು, ನಟರು, ಜನಸಾಮಾನ್ಯರು ಮಿತಿಮೀರಿ ವರ್ತಿಸುತ್ತಿದ್ದಾರೆ. ಅಂತೆಯೇ ಶೃತಿಯನ್ನು ಸಮರ್ಥಿಸುವ ಭರದಲ್ಲಿ ಅರ್ಜುನ್ ಸರ್ಜಾ ಅವರಿಗೆ ಸ್ರೀಪೀಡಕನ ಪಟ್ಟ ಕಟ್ಟುವ ಕೆಲಸವೂ ಚಾಲ್ತಿಯಲ್ಲಿದೆ.

ಈ ಎಲ್ಲಾ ವಿಚಾರಗಳು ಚಾಲ್ತಿಯಲ್ಲಿರುವಾಗಲೇ ಮೀಟೂ ಅಭಿಯಾನದಲ್ಲಿ ನಟ ಅರ್ಜುನ್​ ಸರ್ಜಾ ವಿರುದ್ಧ ನಟಿ ಶ್ರುತಿ ಹರಿಹರನ್ ಮಾಡಿರುವ ಆರೋಪದ ಕುರಿತು ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ನಡೆದ ಸಂಧಾನ ಸಭೆ ವಿಫಲವಾದ ಬೆನ್ನಲ್ಲೇ ಇಬ್ಬರೂ ಕಾನೂನಿನ ಮೊರೆ ಹೋಗಿದ್ದಾರೆ. ನಿನ್ನೆಯಷ್ಟೇ ಶ್ರುತಿ ಹರಿಹರನ್​ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕಿದ್ದರು. ಇದರ ಬೆನ್ನಲ್ಲೇ ಶ್ರುತಿ ಹರಿಹರನ್​ ಕೂಡ ಅರ್ಜುನ್ ಸರ್ಜಾ ಆಪ್ತ ಪ್ರಶಾಂತ್ ಸಂಬರ್ಗಿ ವಿರುದ್ಧ ದೂರು ನೀಡಿದ್ದರು.. ಇದೀಗ ಸಂಬರ್ಗಿ ವಿರುದ್ಧ ಮತ್ತೊಂದು ಕೇಸು ಬುಕ್ ಆಗಿದೆ.

ನಟ ಹಾಗೂ ಫೈರ್ ಸಂಸ್ಥೆ ಮುಖ್ಯಸ್ಥ ಚೇತನ್ ಅವರು ಕೂಡ ಪ್ರಶಾಂತ್ ಸಂಬರಗಿ ವಿರುದ್ಧ ದೂರು ದಾಖಲಿಸಿದ್ದಾರೆ. ಚೇತನ್ ಅವರು ಪ್ರಶಾಂತ್ ಮೇಲೆ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. “ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಅಲ್ಲದೇ ನಾನು ಹುಟ್ಟು ಹಾಕಿದ ಫೈರ್ ಸಂಸ್ಥೆ ವಿರುದ್ಧ ಸಲ್ಲದ ಆರೋಪ ಮಾಡಿದ್ದಾರೆ. ” ಎಂದು ನಟ ಚೇತನ್ ದೂರು ನೀಡಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top