ಮನೋರಂಜನೆ

#MeToo ಬಗ್ಗೆ ಕಿರಿಕ್ ಹುಡುಗಿ ರಶ್ಮಿಕಾ ಮಂದಣ್ಣ ಹೇಳಿದ್ದೇನು?

ಸಿನಿಮಾ ಹೀರೋಯಿನ್ನುಗಳಿಗೆ ಥರಥರದ ಕಾಟ ಕೊಡುವ ಪ್ರವೃತ್ತಿಯ ಸರಣಿಗಳು ಈಗ ದೇಶದೆಲ್ಲೆಡೆ ಬಿಚ್ಚಿಕೊಳ್ಳುತ್ತಿವೆ, ಇತ್ತೀಚಿಗೆ ಬಾಲಿವುಡ್ ನಟಿ ತನುಶ್ರೀ ದತ್ತ ನಾನಾ ಪಾಟೇಕರ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಮಾಡಿದ್ದೇ ತಡ ಮೀಟೂ ಎಂಬ ಅಭಿಯಾನವೊಂದಕ್ಕೆ ಚಾಲನೆ ನೀಡಿದೆ. ಇದರ ಮೂಲಕ ಚಿತ್ರರಂಗದ ನಟಿಯರು ತಾವೇ ಕಂಡುಂಡ ನೋವುಗಳನ್ನ ಸಾಮಾಜಿಕ ಜಾಲತಾಣಗಳ ಮೂಲಕ ಜಾಹೀರು ಮಾಡಲಾರಂಭಿಸಿದ್ದಾರೆ. ಈ ಮೂಲಕ ಸಭ್ಯ ನಟರು ಎಂಬ ಲೇಬಲ್ಲು ಮೆತ್ತಿಕೊಂಡು ಓಡಾಡುತ್ತಿರುವ ಸ್ಟಾರ್ ನಟರ ಅಸಲಿ ಮುಖವಾಡಗಳು ಕಳಚಿ ಬೀಳಲಾರಂಭಿಸಿವೆ.

ಬಾಲಿವುಡ್‌ನಲ್ಲಿ ಹುಟ್ಟಿಕೊಂಡ ಮೀ ಟೂ ಅಭಿಯಾನ ಸ್ಯಾಂಡಲ್‌ವುಡ್‌ನತ್ತಲೂ ಬಂದಿದೆ. ಕನ್ನಡದ ನಟಿಯರನೇಕರು ಕೂಡ ತಮಗಾದ ಲೈಂಗಿಕ ಕಿರುಕುಳಗಳ ಅನುಭವದ ಬಗ್ಗೆ ಹೇಳಿಕೊಂಡಿದ್ದಾರೆ. ಮತ್ತೆ ಕೆಲವರು ಈ ಅಭಿಯಾನಕ್ಕೆ ಬೆಂಬಲ ಸೂಚಿಸಿ ನೊಂದವರ ಬೆನ್ನಿಗೆ ನಿಂತಿದ್ದಾರೆ. ಇದೀಗ ನಟ ಅರ್ಜುನ್‌ ಸರ್ಜಾ ವಿರುದ್ಧ ನಟಿ ಶೃತಿ ಹರಿಹರನ್‌ ಮತ್ತು ನಿರ್ದೇಶಕ ರವಿ ಶ್ರೀವತ್ಸ ವಿರುದ್ಧ ಸಂಜನಾ ಆಪಾದನೆ ಮಾಡಿದ್ದಾರೆ. ಮೀಟೂ ಅಭಿಯಾನವು ದಿನದಿಂದ ದಿನಕ್ಕೆ ತಿರುವು ಪಡೆಯುತ್ತಿದ್ದು, ಇದೇ ಮೊದಲ ಬಾರಿಗೆ ನಟಿ ರಶ್ಮಿಕಾ ಮಂದಣ್ಣ ಮೀಟೂ ಕುರಿತು ಮಾತನಾಡಿದ್ದಾರೆ.

ಮೀ ಟೂ ಅಭಿಯಾನದಿಂದಾಗಿಯೇ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಮೀ ಟೂ ಅಭಿಯಾನದಿಂದ ಎಲ್ಲರೂ ಅವರ ಅಭಿಪ್ರಾಯಗಳನ್ನು ತಿಳಿಸುತ್ತಿದ್ದಾರೆ. ಇದರಿಂದ ತುಂಬ ಖುಷಿ ಆಗುತ್ತಿದೆ ಮಹಿಳೆಯರು ತಮ್ಮ ಮೇಲಾದ ದೌರ್ಜನ್ಯ ವನ್ನ ಹೇಳಿಕೊಳ್ಳಲು ಇಂತಹದೊಂದು ಅಭಿಯಾನ ವೇದಿಕೆಯಾಗಿರೋದು ಉತ್ತಮ ಬೆಳವಣಿಗೆ ಎಂದಿದ್ದಾರೆ. ಜೊತೆಗೆ ಮೀಟೂಗೆ ನನ್ನ ಸಂಪೂರ್ಣ ಬೆಂಬಲವಿದೆ‌ ಎಂದಿದ್ದಾರೆ.

ನಟ ಅರ್ಜುನ್‌ ಸರ್ಜಾ ಹಾಗೂ ನಟಿ ಶೃತಿ ಹರಿಹರನ್‌ ವಿವಾದದ ಬಗ್ಗೆ ಪ್ರಶ್ನಿಸಿದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು, ನೋ ಕಾಮೆಂಟ್ಸ್ ಎನ್ನುವ ಮೂಲಕ ಉತ್ತರ ಕೊಡಲು‌ ನಿರಾಕರಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top