ಸಮಾಚಾರ

“ಸಿದ್ದರಾಮಯ್ಯ ಬಳಿ ಜನಾರ್ದನ ರೆಡ್ಡಿ ಕ್ಷಮೆ ಕೇಳಬೇಕು” ಮಾಜಿ ಯಡಿಯೂರಪ್ಪ.

ಮಾಜಿ ಸಿಎಂ ಸಿದ್ದರಾಮಯ್ಯರ ಪುತ್ರನ ಸಾವಿನ ಬಗ್ಗೆ ಮಾಜಿ ಸಚಿವ ಜನಾರ್ದನ ರೆಡ್ಡಿ ನೀಡಿರುವ ಹೇಳಿಕೆಗೆ ಬಿಜೆಪಿ ನಾಯಕರಿಂದಲೇ ತೀವ್ರ ವಿರೋಧ ವ್ಯಕ್ತವಾಗಿದೆ. ಜನಾರ್ದನ ರೆಡ್ಡಿ ಹೇಳಿಕೆೆಯನ್ನ ಹಲವು ನಾಯಕರು ಖಂಡಿಸಿದ್ದಾರೆ.. ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಕೂಡ ಅಸಮಾಧಾನ ವ್ಯಕ್ತಪಡಿಸಿದ್ದು, ಖಾಸಗಿ ಮಾದ್ಯಮಕ್ಕೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಸಿದ್ದರಾಮಯ್ಯ ಪುತ್ರನ ಸಾವಿನ ಮತ್ತು ಅವ್ರ ಕುಟುಂಬದ ವಿಚಾರದ ಬಗ್ಗೆ ಜನಾರ್ದನ ರೆಡ್ಡಿ ಸಾರ್ವಜನಿಕವಾಗಿ ಈ ರೀತಿ ಮಾತನಾಡಿರುವುದು ತಪ್ಪು, ಇದು ಅವರಿಗೆ ಶೋಭೆ ತರುವಂತದ್ದಲ್ಲ ಕೂಡಲೇ ಸಿದ್ದರಾಮಯ್ಯ ಅವರ ಬಳಿ ಜನಾರ್ಧನ ರೆಡ್ಡಿ ಕ್ಷಮೆ ಯಾಚಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ರೆಡ್ಡಿ ಹೇಳಿದ್ದು ಏನು?
ಸಿದ್ದರಾಮಯ್ಯ ನನಗೆ ಮಾಡಿದ ಮೋಸಕ್ಕೆ ದೇವರು ಅವರ ಮಗನನ್ನ ದೂರ ಮಾಡಿದ್ದಾನೆ. ಅನ್ಯಾಯವಾಗಿ ಜೈಲಿಗೆ ಕಳುಹಿಸಿದರು. ಪೊಲೀಸನ ಮಗ ಅಕ್ರಮ ಮಾಡಲು ಸಾಧ್ಯವಿಲ್ಲ’ ಎಂದು ಜನಾರ್ದನ ರೆಡ್ಡಿ ಹೇಳಿಕೆ ನೀಡಿದ್ದರು.

ಪ್ರತಿಕ್ರಿಯೆ ನೀಡಿದ್ದ ಸಿದ್ದು:
ರೆಡ್ಡಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ್ದ ಸಿದ್ದರಾಮಯ್ಯ ‘ನನ್ನ ಮಗನ ಸಾವು ನನಗೆ ದೇವರು ಕೊಟ್ಟ ಶಿಕ್ಷೆ ಎಂದು ಜನಾರ್ದನ ರೆಡ್ಡಿ ಹೇಳಿದ್ದಾರೆ. ನಿಮ್ಮ ಪಾಪಗಳಿಗಾಗಿ ದೇವರು ನಿಮ್ಮ ಮಕ್ಕಳಿಗೆ ಶಿಕ್ಷೆ ನೀಡದಿರಲಿ ಎಂದು ಆ ದೇವರಲ್ಲಿ ಬೇಡಿಕೊಳ್ಳುತ್ತೇನೆ’ ಎಂದು ಟ್ವೀಟ್ ಮಾಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top