ಮನೋರಂಜನೆ

ಪುನೀತ್ ರಾಜಕುಮಾರ್ ಮುಂದಿನ ಚಿತ್ರದ ಟೈಟಲ್ ‘ಯುವರತ್ನ’.

ಕನ್ನಡದ ಸ್ಟಾರ್ ನಿರ್ದೇಶಕರ ಸಾಲಿನಲ್ಲಿ ಸ್ಥಾನ ಪಡೆದುಕೊಂಡಿರುವ ಸಂತೋಷ್ ಆನಂದ್‌ರಾಮ್ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳಿಗೆ ಸಿಹಿ ನೀಡಿದ್ದಾರೆ. ರಾಜಕುಮಾರದಂತಹ ಪರಿಪೂರ್ಣ ಹಿಟ್ ಸಿನಿಮಾವನ್ನು ಕನ್ನಡ ಚಿತ್ರರಂಗಕ್ಕೆ ಕೊಟ್ಟ ಪುನೀತ್ ರಾಜಕುಮಾರ್ ಮತ್ತು ಸಂತೋಷ್ ಆನಂದರಾಮ್ ಅವರ ಕಾಂಬಿನೇಷನ್ ನಲ್ಲಿ ಮತ್ತೊಂದು ಕನ್ನಡ ಚಿತ್ರ ಮೂಡಿಬರುತ್ತಿದ್ದು ಚಿತ್ರಕ್ಕೆ ‘ಯುವರತ್ನ’ಎಂಬ ಟೈಟಲ್ ಫಿಕ್ಸ್ ಮಾಡಲಾಗಿದೆ. ಈ ಚಿತ್ರ ಸೆಟ್ಟೇರುವುದಕ್ಕೂ ಮುಂಚೆಯೇ ನಾನಾ ಬಗೆಯ ನಿರೀಕ್ಷೆಗಳು, ವಿಪರೀತ ಕುತೂಹಲಗಳು ಚಿತ್ರದ ಮೇಲೆ ಬೆಟ್ಟ ಮಾಡುತ್ತಿವೆ.

ನಗರದ ಕಾವೇರಿ ಸಿನಿಮಾ ಮಂದಿರದಲ್ಲಿ ಪುನೀತ್ ಅಭಿನಯದ 29ನೇ ಸಿನಿಮಾದ ಟೈಟಲ್ `ಯುವರತ್ನ’ ಬಿಡುಗಡೆ ಕಾರ್ಯಕ್ರಮ ನಡೆಯಿತು..ಅಂಧ ಅಭಿಮಾನಿಯಾದ ವಿನುತಾ ಹಾಗೂ ಮಹೇಶ್ ಅವರಿಂದ ಯವರತ್ನ ಟೈಟಲ್ ಲಾಂಚ್ ಮಾಡಿಸಿದ ಸಿನಿಮಾ ತಂಡ ಇದೇ ವೇಳೆ ಖುಷಿ ಹಂಚಿಕೊಂಡಿತು. 16 ವರ್ಷದ ಬಳಿಕ ಚಿತ್ರದ ಕಾಲೇಜು ಹುಡುಗನ ಪಾತ್ರದಲ್ಲಿ ಪುನೀತ್ ನಟಿಸಲಿದ್ದಾರೆ ಎಂದು ನಿರ್ದೇಶಕ ಸಂತೋಷ್ ಆನಂದ್ ರಾಮ್ ತಿಳಿಸಿದರು.

ಅಂದಹಾಗೆ ರಾಜಕುಮಾರ ಚಿತ್ರವನ್ನು ನಿರ್ಮಾಣ ಮಾಡಿದ್ದ ಹೊಂಬಾಳೆ ಪ್ರೊಡಕ್ಷನ್ ಅವರ ವಿಜಯ್ ಕಿರಂಗದೂರು ಅವರೇ ಮತ್ತೆ ಪುನೀತ್ ಮತ್ತು ಸಂತೋಷ್ ಜೋಡಿಯ ಚಿತ್ರಕ್ಕೆ ಬಂಡವಾಳ ಹಾಕುತ್ತಿದ್ದಾರೆ. ದೊಡ್ಡ ಬಜೆಟ್’ನಲ್ಲಿ ಚಿತ್ರ ನಿರ್ಮಾಣವಾಗಲಿದ್ದು ಚಿತ್ರಕ್ಕೆ ನಾಯಕಿ, ತಾರಾಗಣ ಮತ್ತು ತಾಂತ್ರಿಕ ವರ್ಗವನ್ನು ಇನ್ನಷ್ಟೇ ಫೈನಲ್ ಮಾಡಬೇಕಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top