ಸಮಾಚಾರ

ರಾಮನಗರದ ಬಿಜೆಪಿ ಅಭ್ಯರ್ಥಿಯ ಯೂಟರ್ನ್ ಬಗ್ಗೆ ಸಿಎಂ ಹೆಚ್ಡಿಕೆ ಹೇಳಿದ್ದೇನು?

ರಾಮನಗರ ವಿಧಾನಸಭಾ ಉಪಚುನಾವಣೆ ಮತದಾನ ನಡೆಯುದಕ್ಕೂ ಮುನ್ನವೇ ಬಿಜೆಪಿ ಅಭ್ಯರ್ಥಿ ಎಲ್ ಚಂದ್ರಶೇಖರ್ ಪಕ್ಷಕ್ಕೆ ದೊಡ್ಡ ಶಾಕ್ ನೀಡಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಎಲ್ ಚಂದ್ರಶೇಖರ್ ಚುನಾವಣಾ ಕಣದಿಂದ ಹಿಂದೆ ಸರಿದಿದ್ದು, ಮತ್ತೆ ತಮ್ಮ ಮಾತೃ ಪಕ್ಷ ಕಾಂಗ್ರೆಸ್’ಗೆ ಸೇರ್ಪಡೆಗೊಳ್ಳ ನಿರ್ಧಾರ ಮಾಡಿದ್ದಾರೆ. ಇದರಿಂದ ಜೆಡಿಎಸ್ ಅಭ್ಯರ್ಥಿ ಅನಿತಾ ಕುಮಾರಸ್ವಾಮಿ ಗೆಲುವು ಖಚಿತವಾಗಿದೆ.

ಸಂಸದ ಡಿಕೆ ಸುರೇಶ್ ಜತೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿರುವ ಚಂದ್ರಶೇಖರ್ “ಬಿಜೆಪಿ ನಾಯಕರು ನನ್ನನ್ನ ಸರಿಯಾಗಿ ನಡೆಸಿಕೊಳ್ಳಲಿಲ್ಲ.,ನಾನು ಗೆಲ್ಲಬೇಕು ಎಂದು ಬಿಜೆಪಿ ನಾಯಕರಿಗೇ ಇಷ್ಟವಿಲ್ಲವೇನೋ ಗೊತ್ತಿಲ್ಲ. ನನಗೆ ಸರಿಯಾಗಿ ಸ್ಪಂದನೆ ಮಾಡುತ್ತಿಲ್ಲ., ನೀವು ಅಭ್ಯರ್ಥಿಯಾಗಿ ಸಾಕು, ನಮ್ಮ ಎಲ್ಲ ನಾಯಕರು ನಿಮ್ಮ ಪರವಾಗಿ ಬಂದು ಪ್ರಚಾರ ಮಾಡುತ್ತೇವೆ ಎಂದು ಹೇಳಿದ್ದರು. ನಾನು ಫೋನ್ ಮಾಡಿದ್ರೆ ಕಾಲ್ ರಿಸೀವ್ ಮಾಡಲ್ಲ ಅಂದ್ರೆ ನನ್ನನ್ನು ಎಷ್ಟು ನಿರ್ಲಕ್ಷ್ಯ ಮಾಡಿದ್ದಾರೆ. ಅದಕ್ಕಾಗಿಯೇ ನಾನು ಚುನಾವಣಾ ಕಣದಿಂದ ಹಿಂದೆ ಸರಿಯುತ್ತಿದ್ದೇನೆ. ಎಂದು ಆರೋಪಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಚಂದ್ರಶೇಖರ್ ಏಕಾಏಕಿ ನಾಮಪತ್ರ ಹಿಂದೆಗೆದುಕೊಂಡಿದ್ದರ ಮಾಹಿತಿ ನನಗೆ ಗೊತ್ತೇ ಇಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ನಾನು ಬುಧವಾರ ಬಳ್ಳಾರಿ ಉಪಚುನಾವಣೆ ಹಿನ್ನೆಲೆಯಲ್ಲಿ ಪ್ರಚಾರದಲ್ಲಿ ತೊಡಗಿ, ತಡರಾತ್ರಿ ಬೆಂಗಳೂರಿಗೆ ವಾಪಸ್ಸಾಗಿದ್ದೆ. ಇಂದು ಬೆಳಗ್ಗೆ ಕನ್ನಡ ರಾಜ್ಯೋತ್ಸವದ ಸಲುವಾಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡೆ. ಈ ವೇಳೆ ಪಕ್ಷದ ಕಾರ್ಯಕರ್ತರೊಬ್ಬರು ಚೀಟಿಯಲ್ಲಿ ಚಂದ್ರಶೇಖರ್ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ ಎಂದು ಬರೆದುಕೊಟ್ಟಿದ್ದರು. ಇವರು ಚೀಟಿ ಕೊಟ್ಟ ಬಳಿಕ ಚಂದ್ರಶೇಖರ್ ಬಿಜೆಪಿಯಿಂದ ಹಿಂದೆ ಸರಿದಿರುವ ಬಗ್ಗೆ ತಿಳಿಯಿತು. ಇದಕ್ಕೂ ಮುನ್ನ ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇರಲಿಲ್ಲ ಎಂದು ತಿಳಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top