ಮನೋರಂಜನೆ

ಕನ್ನಡದಲ್ಲೇ ಬರುತ್ತಾ ಸೈರಾ..? ಇಲ್ಲಿದೆ ಉತ್ತರ

ಕನ್ನಡ ಚಿತ್ರರಂಗದಲ್ಲಿ ಪರಭಾಷಾ ಚಿತ್ರಗಳ ಡಬ್ಬಿಂಗ್ ಬಗೆಗಿನ ಚರ್ಚೆ, ವಾದ ವಿವಾದ ಚಾಲ್ತಿಗೆ ಬಂದು ವರ್ಷಗಳೇ ಕಳೆದಿವೆ. ಪರಭಾಷಾ ಚಿತ್ರಗಳನ್ನು ಕನ್ನಡಕ್ಕೆ ಡಬ್ಬಿಂಗ್ ಮಾಡುವ ವಿಚಾರವಾಗಿ ಮತ್ತೆ ಬಿಸಿ ಬಿಸಿ ಚರ್ಚೆ ಆರಂಭವಾಗಿದೆ. ಪರ ವಿರೋಧಗಳ ಕಾದಾಟ ಕಾವೇರಿಕೊಂಡಿದೆ. ಇಂಥಾ ಸಂದರ್ಭದಲ್ಲಿ ಬಹು ನಿರೀಕ್ಷಿತ ತೆಲುಗಿನ ‘ಸೈರಾ ನರಸಿಂಹ ರೆಡ್ಡಿ’ ಚಿತ್ರವನ್ನೂ ಕನ್ನಡಕ್ಕೆ ಡಬ್‌ ಆಗಲಿದೆಯೇ ಎಂಬ ಅನುಮಾನ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿದೆ.

 

 

ಮೆಗಾಸ್ಟಾರ್​ ಚಿರಂಜೀವಿ ಮುಖ್ಯ ಭೂಮಿಕೆಯಲ್ಲಿ ನಟಿಸುತ್ತಿರುವ ‘ಸೈರಾ ನರಸಿಂಹರೆಡ್ಡಿ’ ಚಿತ್ರದಲ್ಲಿ ಕನ್ನಡ ಸ್ಟಾರ್ ಕಿಚ್ಚ ಸುದೀಪ್ ಅವರು​ ಅವುಕು ರಾಜ್ಯದ ರಾಜನಾಗಿ ನಟಿಸುತ್ತಿದ್ದಾರೆ. ಮೊನ್ನೆಯಷ್ಟೇ ಅವರ ಫಸ್ಟ್​ ಲುಕ್​ ರಿವೀಲ್ ಆಗಿದ್ದು, ಅಭಿಮಾನಿಗಳಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ. ಹೀಗಾಗಿ, ಇದು ಸ್ಯಾಂಡಲ್ ವುಡ್ ಅಭಿಮಾನಿಗಳಿಗೂ ಚಿತ್ರದ ಮೇಲೆ ಒಂದು ರೀತಿ ಕುತೂಹಲ ಮನೆಮಾಡಿದೆ., ಹಾಗಾಗಿ ಈ ಚಿತ್ರ ಕನ್ನಡಕ್ಕೆ ಡಬ್ ಆಗಬೇಕು ಎಂಬ ಕೂಗು ಕೇಳಿಬಂದಿದೆ.. ಅದಕ್ಕೆ ಪೂರವಾಗಿ ನಿರ್ಮಾಪಕ ರಾಮ್ ಚರಣ್ ಕೂಡ ಚಿತ್ರ ಕನ್ನಡಕ್ಕೆ ಡಬ್ ಆಗಲಿದೆ ಎಂಬ ಸುಳಿವು ನೀಡಿದ್ದಾರೆ..

ತೆಲುಗು ಭಾಷೆಯಲ್ಲಿ ನಿರ್ಮಾಣವಾಗುತ್ತಿರುವ ‘ಸೈರಾ’ ಚಿತ್ರ ಕನ್ನಡಕ್ಕೂ ಡಬ್ ಆಗಲಿದೆ ಎಂದು ನಿರ್ಮಾಪಕ ರಾಮ್​ ಚರಣ್​ ತೇಜ್ ಅವರೇ ಅಧಿಕೃತವಾಗಿ ಪ್ರಕಟಿಸಿದ್ದಾರೆ. ಸದರಿ ಸಿನಿಮಾ ತೆಲುಗು ಜೊತೆಯಲ್ಲಿ ಕನ್ನಡ, ತಮಿಳು ಹಾಗೂ ಮಲಯಾಳಂ ಭಾಷೆಯಲ್ಲಿಯೂ ಏಕಕಾಲಕ್ಕೆ ತೆರೆಗೆ ತರುವ ಪ್ಲಾನ್ ನಲ್ಲಿ ಚಿತ್ರತಂಡವಿದೆ. ಹಾಗೊಮ್ಮೆ ಇದು ಕಾರ್ಯರೂಪಕ್ಕೆ ಬಂದಿದ್ದೇ ಆದರೆ ಸೈರಾ ಸಿನಿಮಾವನ್ನು ಕನ್ನಡಿಗರು ಕೂಡ ಮಾತೃ ಭಾಷೆಯಲ್ಲಿ ಕಣ್ತುಂಬಿಕೊಳ್ಳುವ ಸೌಭಾಗ್ಯ ದೊರೆಯಲಿದೆ.

ಅಂದಹಾಗೆ ಈ ಚಿತ್ರವನ್ನು ಚಿರಂಜೀವಿ ಅವರ ಮಗ ರಾಮ್ ಚರಣ್ ಅವರೇ ನಿರ್ಮಾಣ ಮಾಡುತ್ತಿದ್ದು ಖ್ಯಾತ ನಿರ್ದೇಶಕ ಸುರೇಂದರ್ ರೆಡ್ಡಿ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದಲ್ಲಿ ಬೇರೆ ಬೇರೆ ಭಾಷೆಗಳ ನಟರದ್ದೊಂದು ಮಹಾ ಸಂಗಮವಾಗಲಿರೋದು ಅಸಲೀ ಕುತೂಹಲ! ಬೇರೆ ಭಾಷೆಗಳ ಸ್ಟಾರ್ ನಟರು ಇದರಲ್ಲಿ ನಟಿಸುತ್ತಿರೋದು ಪ್ರೇಕ್ಷಕರನ್ನು ಮತ್ತಷ್ಟು ಕುತೂಹಲಕ್ಕೀಡು ಮಾಡಿದೆ. ಚಿರಂಜೀವಿ ಜೊತೆಗೆ, ಕಿಚ್ಚ ಸುದೀಪ್, ಅಮಿತಾಬ್ ಬಚ್ಚನ್, ವಿಜಯ್ ಸೇತುಪತಿ, ನಯನತಾರ ಮುಂತಾದವರು ನಟಿಸುತ್ತಿದ್ದಾರೆ..

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top