ದೇವರು

ದೇವಸ್ಥಾನಕ್ಕೆ ಹೋಗಿದ್ದ ತಕ್ಷಣ ಘಂಟೆ ಬಾರಿಸುವ ಅಭ್ಯಾಸ ನಮ್ಮದು ಆದರೆ ಅದರ ಹಿಂದಿನ ವೈಜ್ಞಾನಿಕ ಕಾರಣ ಏನು ಅಂತ ಗೊತ್ತಾ ?

ಹಿಂದೂ ಸಂಪ್ರದಾಯಗಳ ಪ್ರಕಾರ ದೇವಾಲಗಳಿಗೆ ಹೋಗುವಾಗ ದೇವಸ್ಥಾನದ ನಿಯಮಗಳನ್ನು ಪಾಲಿಸಲಾಗುತ್ತದೆ. ಅವುಗಳಲ್ಲಿ ಒಂದು ದೇವಸ್ಥಾನವನ್ನು ಪ್ರವೇಶಿಸುವ ಮೊದಲು ಕಾಲುಗಳನ್ನು ತೊಳೆದುಕೊಳ್ಳಬೇಕು. ಮತ್ತು ದೇವಸ್ಥಾನದ ಪ್ರಾಂಗಣದಿಂದ (ಆವರಣದಿಂದ) ಕಲಶಕ್ಕೆ ನಮಸ್ಕಾರ ಮಾಡಬೇಕು. ಹೀಗೆ ಅನೇಕ ನಿಯಮಗಳನ್ನು ಪಾಲಿಸಲಾಗುತ್ತದೆ. ಇದರಲ್ಲಿ ಒಂದು ಜನರು ದೇವಾಲಯಗಳಿಗೆ ಭೇಟಿ ನೀಡಿದಾಗ ಗರ್ಭಗುಡಿಯನ್ನು ಪ್ರವೇಶಿಸುವ ಮೊದಲು ಘಂಟೆಯನ್ನು ಬಾರಿಸುತ್ತಾರೆ. ಹೀಗೆ ಘಂಟೆ ಬಾರಿಸುವ ಹಿಂದೆ ಒಂದು ವೈಜ್ಞಾನಿಕ ಕಾರಣವಿದೆ.

 

 

 

ಶಾಸ್ತ್ರದ ಪ್ರಕಾರ ಘಂಟೆಯ ಸದ್ದು ಎಲ್ಲಾ ರೀತಿಯ ದುಷ್ಟ ಶಕ್ತಿಗಳಿಂದ ನಮ್ಮನ್ನು ಕಾಪಾಡುತ್ತದೆಯಂತೆ. ಜೊತೆಗೆ ಇದು ದೇವರಿಗೆ ಅಪ್ಯಾಯಮಾನಕರವಾದ ಸದ್ದಾಗಿರುತ್ತದೆ. ವೈಜ್ಞಾನಿಕವಾಗಿ ಇದನ್ನು ವಿವರಿಸಬೇಕೆಂದರೆ ಇದು ನಮ್ಮ ಏಕಾಗ್ರತೆಯನ್ನು ದೇವರ ಕ್ರಿಯೆಯಲ್ಲಿ ತಲ್ಲೀನಗೊಳ್ಳುವಂತೆ ಮಾಡುತ್ತದೆ. ಘಂಟೆಯನ್ನು ಸಾಮಾನ್ಯವಾಗಿ ಹಿತ್ತಾಳೆಯಿಂದ ತಯಾರಿಸುತ್ತಾರೆ. ದೇವಾಲಯ ಪ್ರವೇಶಿಸುವ ಭಕ್ತರು ಘಂಟೆ ಬಾರಿಸಿದಾಗ ಅವರಲ್ಲಿ ಭಕ್ತಿ ಭಾವ ಮೂಡುತ್ತದೆ. ಜೊತೆಗೆ ಆರತಿ ವೇಳೆ ನಿರಂತರವಾಗಿ ಘಂಟೆ ಬಾರಿಸುವುದರಿಂದ ಏಕಾಗ್ರತೆ ಮೂಡುತ್ತದೆ ಎಂಬ ಕಾರಣಕ್ಕೆ ಘಂಟೆ ಮೊಳಗಿಸಲಾಗುತ್ತದೆ ಎನ್ನಲಾಗಿದೆ.

 

 

 

ಆನಾದಿ ಕಾಲದಿಂದಲೂ ದೇವಾಲಯಗಳಲ್ಲಿ ಘಂಟಾನಾದ ಮೊಳಗುತ್ತಿದ್ದು. ಈ ಘಂಟೆಯನ್ನು ಯಾವ ಪ್ರಕಾರ ಮಾಡಿರುತ್ತಾರೆ ಎಂದರೆ ಇದು ನಮ್ಮ ಬಲ ಮತ್ತು ಎಡ ಮೆದುಳಿನ ನಡುವೆ ಅನ್ಯೋನ್ಯತೆಯನ್ನು ತರಲು ಸಾಧ್ಯವಾಗುತ್ತದೆಯಂತೆ. ನಾವು ಯಾವಾಗ ಘಂಟೆಯನ್ನು ಹೊಡೆಯುತ್ತೇವೆಯೋ, ಆಗ ಅದು ಕನಿಷ್ಟ 7 ಸೆಕೆಂಡ್‍ಗಳ ಕಾಲ ಪ್ರತಿ ಧ್ವನಿಸುತ್ತದೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top