ಮನೋರಂಜನೆ

ಕೆಜಿಎಫ್-2ನಲ್ಲಿ ಇರಲಿದ್ದಾರಂತೆ ಬಾಲಿವುಡ್ ಬ್ಯಾಡ್ ಬಾಯ್ ಸಂಜಯ್ ದತ್.

ಪ್ರೇಕ್ಷಕರ ವಲಯದಲ್ಲಿ ಭಾರಿ ಕುತೂಹಲ ಹುಟ್ಟುಹಾಕಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಕೆಜಿಎಫ್​ ಚಿತ್ರದ ಟ್ರೇಲರ್​ ಬಿಡುಗಡೆಯಾಗಿದೆ. ಟ್ರೈಲರ್ ನೋಡಿ ಸಿನಿ ಪ್ರಿಯರು ಕ್ಲೀನ್ ಬೌಲ್ಡ್ ಆಗಿದ್ದು ಎಲ್ಲೆಡೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ..

ಎಲ್ಲರಿಗೂ ಗೊತ್ತಿರೋ ಹಾಗೆ ಕೆಜಿಎಫ್ ಸಿನಿಮಾ ಬಹುಕೋಟಿ ವೆಚ್ಚದ ಸಿನಿಮಾ. ಸುಮಾರು 70ಕೋಟಿ ವೆಚ್ಚದಲ್ಲಿ ಈ ಸಿನಿಮಾ ತಯಾರಾಗಿದ್ದು ಏಕಕಾಲದಲ್ಲಿ ಐದು ಭಾಷೆಗಳಲ್ಲಿ ತೆರೆಗೆ ಬರಲು ಸಿದ್ಧವಾಗಿದೆ.. ಚಾಪ್ಟರ್-1 ಮತ್ತು ಚಾಪ್ಟರ್-2 ರೂಪದಲ್ಲಿ ಎರಡು ಕಂತುಗಳಲ್ಲಿ ‘ಕೆಜಿಎಫ್’ ಬಿಡುಗಡೆಯಾಗುತ್ತಿದೆ. ಮೊದಲ ಭಾಗದಲ್ಲಿ ರಾಕಿಯ ಬಾಲ್ಯ ಮತ್ತು ಭೂಗತ ಲೋಕದಲ್ಲಿ ಆತ ಗ್ಯಾಂಗ್​ಸ್ಟರ್ ಆಗಿ ಗುರುತಿಸಿಕೊಳ್ಳಲು ಕಾರಣವೇನು ಎಂಬುದನ್ನು ನಿರ್ದೇಶಕ ಪ್ರಶಾಂತ್ ನೀಲ್ ತೋರಿಸಲಿದ್ದಾರಂತೆ.

ಆ ನಂತರ ಚಾಪ್ಟರ್‌ 2. “ಕೆಜಿಎಫ್ -ಚಾಪ್ಟರ್‌-2’ನಲ್ಲಿ ಬಾಲಿವುಡ್‌ ನಟ ಸಂಜಯ್‌ ದತ್‌ ಕಾಣಿಸಿಕೊಳ್ಳುವ ಸಾಧ್ಯತೆಗಳು ಹೆಚ್ಚಾಗಿದೆ. KGFಚಾಪ್ಟರ್‌ 2 ನಲ್ಲಿ ಬರುವ ಪ್ರಮುಖ ಪಾತ್ರವೊಂದನ್ನು ಮಾಡುವಂತೆ ಕೇಳಿಕೊಂಡಿದೆ. ಚಾಪ್ಟರ್‌ 2ನಲ್ಲಿ ಪ್ರಮುಖ ಪಾತ್ರವೊಂದಿದ್ದು, ಆ ಪಾತ್ರವನ್ನು ಸಂಜಯ್‌ ದತ್‌ ಮಾಡಿದರೆ ಚೆಂದ ಎಂಬ ಕಾರಣಕ್ಕೆ ಚಿತ್ರತಂಡ ಅವರನ್ನು ಕೇಳಿಕೊಂಡಿದೆ. ಜೊತೆಗೆ ಈಗಾಗಲೇ “ಕೆಜಿಎಫ್’ಗೆ ಹಿಂದಿಯಲ್ಲೂ ದೊಡ್ಡ ಮಟ್ಟದಲ್ಲಿ ಮಾರುಕಟ್ಟೆ ಸೃಷ್ಟಿಯಾಗಿದ್ದು, ಸಂಜಯ್‌ ದತ್‌ ಕೂಡಾ ಚಿತ್ರದ ಬಗ್ಗೆ ಆಸಕ್ತಿ ತೋರಿದ್ದಾರೆನ್ನಲಾಗಿದೆ.

ಹೊಂಬಾಳೆ ಪ್ರೊಡಕ್ಷನ್ಸ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರಕ್ಕೆ ಉಗ್ರಂ ಖ್ಯಾತಿಯ ಪ್ರಶಾಂತ್ ನೀಲ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇದೂ ಕೂಡಾ ಈ ಚಿತ್ರದ ಆಕರ್ಷಣೆಗಳಲ್ಲೊಂದು. ಇನ್ನುಳಿದಂತೆ ರವಿ ಬಸ್ರೂರು ಸಂಗೀತ ನಿರ್ದೇಶನ ಮಾಡುತ್ತಿದ್ದು ಭುವನ್ ಗೌಡ ಅವರ ಕ್ಯಾಮರಾ ಕೈಚಳಕ ಚಿತ್ರಕ್ಕಿದೆ..

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top