ಸಮಾಚಾರ

“ಟಿಪ್ಪು ಆಳ್ವಿಕೆಯಲ್ಲಿ ಹಿಂದುಗಳು ಪ್ರಮುಖ ಹುದ್ದೆಯಲ್ಲಿದ್ದರು” ಮಾಜಿ ಸಿಎಂ ಸಿದ್ದರಾಮಯ್ಯ.

ಭಾರೀ ವಿವಾದಕ್ಕೀಡಾಗಿರುವ ಟಿಪ್ಪು ಜಯಂತಿ ಕಾರ್ಯಕ್ರಮವನ್ನು ಸರ್ಕಾರ ಮಾಡಿಯೇ ತೀರುತ್ತೇವೆ ಅಂತ ಹೇಳಿರುವ ರಾಜ್ಯ ಸರ್ಕಾರ ಇದೀಗ ಆಚರಣೆಗೂ ರೆಡಿಯಾಗಿದೆ. ಇನ್ನು ರಾಜ್ಯದಲ್ಲಿ ಟಿಪ್ಪು ಜಯಂತಿ ಆಚರಣೆಗೆ ತೀವ್ರ ವಿರೋಧ ವ್ಯಕ್ತಪಡಿಸಿ ರಾಜಕೀಯ ಬಣ್ಣ ಬಳಿಯುತ್ತಿರುವ ಬಿಜೆಪಿ ವಿರುದ್ಧ ಮಾಜಿ ಮುಖ್ಯಮಂತ್ರಿ ಹಾಗೂ ಸಮ್ಮಿಶ್ರ ಸರ್ಕಾರ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಟಿಪ್ಪು ಜಯಂತಿಯ ಸಂಧರ್ಭದಲ್ಲಿ ಮಾತನಾಡಿರುವ ಸಿದ್ದರಾಮಯ್ಯ, ‘ಟಿಪ್ಪು ಸುಲ್ತಾನ್ ಹಿಂದು ವಿರೋಧಿ ಎಂಬುದು ಶುದ್ಧ ಸುಳ್ಳು.. ಅವರ ಕಾಲದಲ್ಲಿ ಹಲವು ಹಿಂದುಗಳು ಪ್ರಮುಖ ಹುದ್ದೆಯಲ್ಲಿದ್ದರು ಎಂಬುದನ್ನು ಇತಿಹಾಸವೇ ಹೇಳುತ್ತದೆ. ರಾಜ್ಯದ ಜನರಿಗೆ ಟಿಪ್ಪು ಜಯಂತಿಯ ಶುಭಾಶಯಗಳು’ ಎಂದಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮೂಲಕ ಟಿಪ್ಪುವನ್ನು ಕೊಂಡಾಡಿದ್ದಾರೆ. ಅಷ್ಟೇ ಅಲ್ಲದೆ ಟಿಪ್ಪು ಜಯಂತಿ ವಿರೋಧಿಗಳಿಗೆ ಫುಲ್‍ಕ್ಲಾಸ್ ತೆಗೆದುಕೊಂಡಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಟ್ವೀಟ್’ಗಳು ಈ ರೀತಿ ಇವೆ.

 

Tweet.1:
“ಟಿಪ್ಪು ಬಗ್ಗೆ ತಿಳಿದುಕೊಳ್ಳಬೇಕಾಗಿರುವುದು ವೈರಿಗಳಾಗಿದ್ದ ಬ್ರಿಟಿಷ್ ಇತಿಹಾಸಕಾರರಿಂದಲ್ಲ. ಟಿಪ್ಪು ಬಗ್ಗೆ ಮೈಸೂರು ಭಾಗದಲ್ಲಿ ಲಾವಣಿಗಳಿವೆ. ಅವುಗಳಲ್ಲಿ ಟಿಪ್ಪುವಿನ ದೇಶಪ್ರೇಮ,ಜಾತ್ಯತೀತ ಧೋರಣೆ,ಅಭಿವೃದ್ದಿಯ ಕಲ್ಪನೆಗಳ ಮಾಹಿತಿ ಇದೆ. ಈ ಲಾವಣಿ, ಪದ,ಹಾಡುಗಳೇನಿಜವಾದ ಇತಿಹಾಸ.”

Tweet.2:
“ರಾಜ್ಯ ಸರ್ಕಾರ ಆಚರಿಸುತ್ತಿರುವುದು ಯಾವುದೇ ಒಂದು ಧರ್ಮಕ್ಕೆ ಸೇರಿದ ನಾಯಕನ ಜಯಂತಿಯಲ್ಲ. ಒಬ್ಬ ದೇಶಪ್ರೇಮಿ, ಜಾತ್ಯತೀತ, ಮತ್ತು ಜನಪರ ಅರಸನಾಗಿದ್ದ ಟಿಪ್ಪುವಿನ ಜಯಂತಿ ಆಚರಿಸುತ್ತಿದ್ದೇವೆ. ಟಿಪ್ಪು ಅವರನ್ನು ಒಂದು ಧರ್ಮಕ್ಕೆ ಸೀಮಿತಗೊಳಿಸುವುದು ಟಿಪ್ಪುವಿಗೆ ಮಾತ್ರವಲ್ಲ ಈ ನಾಡಿಗೆ ಬಗೆವ ದ್ರೋಹ.”

Tweet.3:
“ಟಿಪ್ಪು ಸ್ವಾತಂತ್ರ್ಯ ಹೋರಾಟಗಾರನಲ್ಲ, ಒಂದು ಸಂಸ್ಥಾನದ ರಾಜ ಎನ್ನುವ ವಾದ ಹುಟ್ಟಿಕೊಂಡಿದೆ.
ಇಂತಹ ಮೊಂಡುವಾದದವರು ಕಿತ್ತೂರು ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ,ವೀರ ಸಿಂಧೂರ ಲಕ್ಷ್ಮಣ,ರಾಣಿ ಅಬ್ಬಕ್ಕದೇವಿ ಸೇರಿದಂತೆ ಬ್ರಿಟಿಷರ ವಿರುದ್ದ ಹೋರಾಡಿ ಪ್ರಾಣಾರ್ಪಣೆ ಮಾಡಿದವರನ್ನು ಯಾವ ಗುಂಪಿಗೆ ಸೇರಿಸುತ್ತಾರೆ?”

Tweet.4:
“ಟಿಪ್ಪು ಯುದ್ಧದ ವೇಳೆ ಜನರನ್ನು ಸಾಯಿಸಿದ್ದ ಲೂಟಿ ಮಾಡಿದ್ದ ಎನ್ನುವುದು ವಿರೋಧಿಗಳ ಆರೋಪ. ಟಿಪ್ಪು ಕಾಲದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಇರಲಿಲ್ಲ, ಟಿಪ್ಪು ಪ್ರಜಾತಾಂತ್ರಿಕವಾಗಿ ಆಯ್ಕೆಯಾದವನ್ನಲ್ಲ. ಆತ ಒಬ್ಬ ರಾಜ. ಆ ಕಾಲದಲ್ಲಿ ಯುದ್ದಧರ್ಮಕ್ಕೆ ತಕ್ಕಂತೆ ನಡೆದುಕೊಂಡಿದ್ದ”

 

 

 

 

 

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top