fbpx
ಸಮಾಚಾರ

ಆಲ್ ರೌಂಡರ್ ರವೀಂದ್ರ ಜಡೇಜಾ ದಂಪತಿ ಪ್ರಧಾನಿ ಮೋದಿಯನ್ನು ಭೇಟಿಯಾಗಿದ್ದೇಕೆ?

ಭಾರತೀಯ ಕ್ರಿಕೆಟ್ ತಂಡದ ಆಲ್‍ರೌಂಡರ್ ರವೀಂದ್ರ ಜಡೇಜಾ ಪತ್ನಿ ಸಮೇತ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ.. ಆಸೀಸ್ ಟೂರ್ನಿಯ ಪ್ರವಾಸದ ಸಿದ್ಧತೆಯಲ್ಲಿರುವ ಜಡೇಜಾ ಮಂಗಳವಾರ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ಈ ವಿಚಾರವನ್ನು ಪ್ರಧಾನಿ ಮೋದಿ ಅವರು ಟ್ವೀಟ್ ಮಾಡಿ ಜಡೇಜಾ ಹಾಗೂ ರಿವಾಬಾ ಸೋಲಂಕಿ ಅವರನ್ನು ಭೇಟಿ ಮಾಡಲಾಯಿತು ಎಂದು ತಿಳಿಸಿದ್ದಾರೆ.

 

 

ಮೋದಿ ಅವರ ಭೇಟಿಯ ಫೋಟೋವನ್ನು ರವೀಂದ್ರ ಜಡೇಜಾ ಕೂಡ ಟ್ವೀಟ್ ಮಾಡಿದ್ದು, ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದು ಹೆಮ್ಮೆಯ ವಿಚಾರವಾಗಿದೆ ಎಂದು ತಿಳಿಸಿದ್ದಾರೆ. ಈ ವೇಳೆ ಪುಷ್ಪಗುಚ್ಛ ನೀಡಿ ಶುಭಾಶಯ ತಿಳಿಸಿದ್ದಾರೆ. ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರವೀಂದ್ರ ಜಡೇಜಾ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದು ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಗಿದೆ..

 

 

ಸದ್ಯ ಆಸ್ಟ್ರೇಲಿಯಾ ವಿರುದ್ದ ನಡೆಯುತ್ತಿರುವ ಸೀಮಿತ ಓವರುಗಳ ಪಂದ್ಯಗಳಿಗೆ ಆಯ್ಕೆಯಾಗುವಲ್ಲಿ ಜಡೇಜಾ ವಿಫಲರಾಗಿದ್ದು ಟೆಸ್ಟ್ ತಂಡದಲ್ಲಿ ಮಾತ್ರ ಸ್ಥಾನ ಪಡೆದಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top