fbpx
ಸಮಾಚಾರ

ಸರ್ಕಾರ ತರಲೆತ್ನಿಸುತಿದೆ ಹೊಸ ನಿಯಮ -ಕಾಲೇಜು ವಿದ್ಯಾರ್ಥಿಗಳೇ ಇನ್ಮುಂದೆ ನೀವು ಕಾಲೇಜಿಗೆ ವಾಹನಗಳನ್ನು ತರುವ ಹಾಗಿಲ್ಲ

ಉನ್ನತ ಶಿಕ್ಷಣ ಇಲಾಖೆ ನಿಯಮವನ್ನು ಜಾರಿಗೊಳಿಸಲು ಯತ್ನಿಸುತ್ತಿದ್ದು, ಈ ನಿಯಮವನ್ನು ವಿದ್ಯಾರ್ಥಿಗಳು ಯಾವ ರೀತಿಯಲ್ಲಿ ಸ್ವೀಕರಿಸುತ್ತಾರೆ ಎಂಬುದನ್ನು ಕಾದು ನೋಡಬೇಕಾಗಿದೆ. ಈಗಾಗಲೇ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ತಮ್ಮ ಇಲಾಖೆ ಅಧಿಕಾರಿಗಳ ಬಳಿ ಈ ನಿಯಮದ ಜಾರಿಯಿಂದ ಆಗುವ ಸಾಧಕ-ಬಾಧಕಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

ಯಾವ ನಿಯಮ?

ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಗೆ ಬರುವ ಪದವಿ ಹಾಗೂ ಪದವಿಪೂರ್ವ ವಿದ್ಯಾರ್ಥಿಗಳ ಹಿತದೃಷ್ಟಿಯಿಂದಾಗಿ, ಇನ್ನುಮುಂದೆ ವಿದ್ಯಾರ್ಥಿಗಳು ಕಾಲೇಜಿಗೆ ಬರುವಾಗ ಯಾವುದೇ ವಾಹನಗಳನ್ನು ತರುವಂತಿಲ್ಲ ಎಂಬ ಆದೇಶ ಹೊರಡಿಸಲು ಮುಂದಾಗುತ್ತಿದೆ. ಈಗಾಗಲೇ ಉನ್ನತ ಶಿಕ್ಷಣ ಇಲಾಖೆ ಈ ವಿಷಯದ ಬಗೆಗಿನ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಮುಖ್ಯಮಂತ್ರಿಗಳ ಮುಂದಿಟ್ಟಿದ್ದಾರೆ ಎನ್ನಲಾಗುತ್ತಿದೆ.

ರಾಜ್ಯದಲ್ಲಿರುವ ಎಲ್ಲಾ ಪದವಿ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪೈಕಿ ಆಂದಾಜು 22 ಲಕ್ಷ ವಾಹನಗಳು ಪ್ರತಿನಿತ್ಯ ರಸ್ತೆಗಿಳಿಯುತ್ತಿದ್ದು. ಇದರ ಮುಂದುವರೆದ ಭಾಗವಾಗಿ ಬೆಂಗಳೂರು, ಮೈಸೂರು, ಮಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಬಳ್ಳಾರಿ, ಕಲ್ಬುರ್ಗಿ ಸೇರಿದಂತೆ ಮಹಾನಗರಗಳಲ್ಲಿ ಟ್ರಾಫಿಕ್ ಕಿರಿಕಿರಿಯಾಗುತ್ತಿದೆ. ಇತ್ತ ಸಾಮಾನ್ಯ ಜನರ ಜೊತೆಗೆ ವಿದ್ಯಾರ್ಥಿಗಳು ಕೂಡ ವಾಹನಗಳನ್ನು ರಸ್ತೆಗಿಳಿಸೋದ್ರಿಂದ ಸಂಚಾರ ದಟ್ಟಣೆಯ ತೀವ್ರ ಸಮಸ್ಯೆ ಎದುರಿಸುತ್ತಿದ್ದೇವೆ ಎಂಬುದನ್ನು ಅರಿತಿರುವ ಇಲಾಖಾಧಿಕಾರಿಗಳು ಸಚಿವರ ಮುಂದೆ ಈ ನಿಯಮವನ್ನು ಸೂಚಿಸಿದ್ದಾರೆ ಎನ್ನಲಾಗಿದೆ.

ಅಷ್ಟೇ ಅಲ್ಲದೆ, ವಿದ್ಯಾರ್ಥಿಗಳು ದ್ವಿಚಕ್ರ ವಾಹನಗಳಲ್ಲಿ ವೀಲ್ಹಿಂಗ್ ಮಾಡುವುದು, ಪೈಪೋಟಿಯಲ್ಲಿ ವಾಹನಗಳನ್ನು ಖರೀದಿ ಮಾಡುವುದು, ರಸ್ತೆಗಳಲ್ಲಿ ರೇಸ್​ ಹೋಗುವುದು, ವಾಯುಮಾಲಿನ್ಯಕ್ಕೆ ಬ್ರೇಕ್ ಹಾಕಬಹುದು ಎಂಬ ಕಾರಣಗಳನ್ನ ಯೋಜನೆಯ ಜಾರಿಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಈ ನಿಯಮ ಕೇವಲ ಮಹಾನಗರಗಳಲ್ಲಿ ಮಾತ್ರವಲ್ಲದೇ ಗ್ರಾಮಗಳಿಗೂ ಅನ್ವಯವಾಗುವಂತೆ ಮಾಡಿದರೆ ಅನುಕೂಲವಾಗುತ್ತದೆ ಎಂಬ ವಿಚಾರಗಳು ಕೇಳಿ ಬರುತ್ತಿವೆ.

ಮುಖ್ಯವಾಗಿ ಕಾಲೇಜು ವಿದ್ಯಾರ್ಥಿಗಳು ಸಾರ್ವಜನಿಕ ಸಂಚಾರ ವ್ಯವಸ್ಥೆಯನ್ನು ಬಳಸಿದ್ದೆ ಆದಲ್ಲಿ, ಅದರಿಂದ ಸರ್ಕಾರಕ್ಕೂ ಆದಾಯ ಬರುತ್ತದೆ ಎಂಬ ವಿಚಾರವನ್ನು ಪ್ರಸ್ತಾವನೆಯಲ್ಲಿ ಸೇರಿಸಲಾಗಿದೆ ಎನ್ನಲಾಗುತ್ತಿದೆ.

ಹಾಗಾದರೆ ಪ್ರಸ್ತಾವನೆಗೆ ಸಿಗುತ್ತದೆಯೇ ಅನುಮೋದನೆ?

ಉನ್ನತ ಶಿಕ್ಷಣ ಇಲಾಖೆ ಪ್ರಸ್ತಾವನೆ ಸಿಎಂ ಬಳಿ ರವಾನೆಯಾಗಿದ್ದು, ಇದಕ್ಕೆ ಮುಖ್ಯಮಂತ್ರಿಗಳು ಏನು​ ಹೇಳುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಈಗಾಗಲೇ ಸಚಿವ ಜಿ.ಟಿ.ದೇವೇಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ ಬಳಿ ಈ ವಿಚಾರವನ್ನು ಪ್ರಸ್ತಾಪಿಸಿದ್ದು, ಸಿಎಂ ರವರು ಕೂಡ ಒಪ್ಪಿಗೆ ಸೂಚಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top