fbpx
ಸಮಾಚಾರ

“ನಾಲ್ಕೂವರೆ ವರ್ಷ ಕಾದಿದ್ದೇವೆ, ಸರ್ಕಾರ ಬಿದ್ದರೂ ಪರವಾಗಿಲ್ಲ, ಮಂದಿರ ಕಟ್ಟಿ” ಪೇಜಾವರಶ್ರೀ.

“ ಕೇಂದ್ರದಲ್ಲಿ ನರೇಂದ್ರ ಮೋದಿ ಸರ್ಕಾರ ಅಧಿಕಾರಕ್ಕೆ ಬಂದು ಬರೋಬ್ಬರಿ ನಾಲ್ಕೂವರೆ ವರ್ಷ ಆಯ್ತು.. ಆದರೆ ಇನ್ನು ರಾಮ ಮಂದಿರ ನಿರ್ಮಾಣವಾಗಿಲ್ಲ. ನಾಲ್ಕು ವರ್ಷಗಳಲಿಂದ ನಾವು ಕಾದಿದ್ದೇವೆ. ಈಗ ಒತ್ತಾಯ ಮಾಡುತ್ತಿದ್ದೇವೆ. ಈಗಲಾದರೂ ಕೇಂದ್ರ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳುವುದು ಉತ್ತಮ, ಸರ್ಕಾರ ಬಿದ್ದರೂ ಪರವಾಗಿಲ್ಲ, ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ವಿಚಾರದಲ್ಲಿ ಕೇಂದ್ರ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಳ್ಳಬೇಕು” ಎಂದು ಪೇಜಾವರದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಉಡುಪಿ ಜಿಲ್ಲೆಯ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರಿಗೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಮಾತನಾಡಿದ ಶ್ರೀಗಳು, “ಪ್ರಧಾನಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದು ನಾಲ್ಕೂವರೆ ವರ್ಷ ಕಳೆದಿದೆ. ಇನ್ನೂ ರಾಮ ಮಂದಿರ ನಿರ್ಮಾಣದ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ನಾವು ಕಾದಿದ್ದೇವೆ, ಈಗ ಮಂದಿರ ನಿರ್ಮಾಣ ಮಾಡುವಂತೆ ಒತ್ತಾಯ ಮಾಡುತ್ತಿದ್ದೇವೆ” ಎಂದು ಹೇಳಿದರು.

“ರಾಮ ಮಂದಿರ ಸಮಸ್ಯೆ ಬಗೆಹರಿಸಲು ಮೂರು ಮಾರ್ಗಗಳಿವೆ, ಸಂಯುಕ್ತ ಅಧಿವೇಶನದ ಮೂಲಕ ಸಮಸ್ಯೆ ಬಗೆಹರಿಸಬಹುದು. ಲೋಕಸಭೆ- ರಾಜ್ಯಸಭೆ ಅಧಿವೇಶನದಲ್ಲಿ ತೀರ್ಮಾನಿಸಬಹುದು. ಇಲ್ಲವೇ ಮಂದಿರ ವಿಚಾರದಲ್ಲಿ ಕೇಂದ್ರ ಸರ್ಕಾರ ಸುಗ್ರೀವಾಜ್ಞೆಯನ್ನು ಹೊರಡಿಸಲಿ. ಮೋದಿ ಸರ್ಕಾರಕ್ಕೆ ಸಂಪೂರ್ಣ ಬಹುಮತವಿದೆ. ದಿಟ್ಟ ನಿರ್ಧಾರ ಕೈಗೊಳ್ಳಬಹುದು” ಎಂದು ಶ್ರೀಗಳು ಹೇಳಿದರು

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top