fbpx
ಸಮಾಚಾರ

ಅಂಬರೀಷ್ ನಿಧನ- ರೈಲಿಗೆ ತಲೆಕೊಟ್ಟು ಅಂಬಿ ಅಭಿಮಾನಿ ಆತ್ಮಹತ್ಯೆ.

ಮಾಜಿ ಸಚಿವ, ನಟ ಅಂಬರೀಷ್ ನಿಧನದ ಹಿನ್ನಲೆಯಲ್ಲಿ ಮನನೊಂದ ಅವರ ಅಭಿಮಾನಿ ಹೊಟ್ಟೆಗೌಡನ ದೊಡ್ಡಿ ಗ್ರಾಮದ 52ವರ್ಷ ವಯಸ್ಸಿನ ತಮ್ಮಯ್ಯ ಭಾನುವಾರ ನಿಡಘಟ್ಟ ಬಳಿ ಬೆಂಗಳೂರು–ಮೈಸೂರು ಪ್ಯಾಸೆಂಜರ್‌ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈತನಿಗೆ ಪತ್ನಿ ಹಾಗೂ ಇಬ್ಬರು ಹೆಣ್ಣು ಮಕ್ಕಳಿದ್ದಾರೆ. ಈ ಸಂಬಂಧ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಂಡಿದ್ದಾರೆ.

ನೆನ್ನೆ ಬೆಳಗ್ಗೆ ಗ್ರಾಮದಲ್ಲಿ ಅಂಬರೀಶ್ ಅಭಿಮಾನಿಗಳ ಯುವಪಡೆಯೊಂದು ಶ್ರದ್ದಾಂಜಲಿ ಕಾರ್ಯಕ್ರಮ ಹಮ್ಮಿಕೊಂಡಿತ್ತು. ತಮ್ಮಯ್ಯ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಂಬರೀಶ್ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ನಂತರ ತೀವ್ರ ಮನನೊಂದು ನಿಡಘಟ್ಟ ಸಮೀಪ ರೈಲಿಗೆ ತಲೆ ಕೊಟ್ಟಿದ್ದಾರೆ. ಬೆಳಗ್ಗೆ 10 ಗಂಟೆಯಲ್ಲಿ ಮೈಸೂರಿನಿಂದ ಬೆಂಗಳೂರಿಗೆ ಹೋಗುತ್ತಿದ್ದ ಮಾಲ್ಗುಡಿ ಎಕ್ಸ್‍ಪ್ರೆಸ್ ರೈಲಿಗೆ ಸಿಕ್ಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪರಿಹಾರ ಭರವಸೆ: ಜೆಡಿಎಸ್‌ ತಾಲ್ಲೂಕು ಯುವ ಘಟಕದ ಅಧ್ಯಕ್ಷ ಸಿ.ಟಿ.ಶಂಕರ್ ಅವರು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ಜೊತೆ ದೂರವಾಣಿಯಲ್ಲಿ ಮಾತನಾಡಿ ಪರಿಹಾರಕ್ಕೆ ಮನವಿ ಮಾಡಿದ್ದಾರೆ.

ಅಂಬಿ ನಿಧನ:
ತೀವ್ರ ಉಸಿರಾಟದ ತೊಂದರೆ ಹಾಗೂ ಎದೆ ನೋವಿನಿಂದ ಶನಿವಾರ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದ ಅಂಬರೀಶ್, ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 10.15ರ ಸುಮಾರಿಗೆ ಕೊನೆಯುಸಿರೆಳೆದಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top