ಮಾಹಿತಿ

ನವೆಂಬರ್ 26ನ್ನು ಸಂವಿಧಾನ ದಿನವೆನ್ನಲು ಕಾರಣವೇನು?

ಭಾರತ ಸಂವಿಧಾನವು ಜಗತ್ತಿನಲ್ಲಿನ ಅತಿ ದೊಡ್ಡ ಸಂವಿಧಾನವಾಗಿದ್ದು. 448 ವಿಧಿಗಳು 12 ಪರಿಚ್ಛೇದಗಳು 101 ತಿದ್ದುಪಡಿಗಳನ್ನು ಹೊಂದಿದೆ. ಇಂಥ ಸಂವಿಧಾನ ಶಿಲ್ಪಿ ನಮ್ಮ ಡಾಕ್ಟರ್ ಬಿ ಆರ್ ಅಂಬೇಡ್ಕರ್ ರವರು.
ನಮ್ಮ ಸಂವಿಧಾನವು ಜನೆವರಿ 26 1950 ರಂದು ಇದನ್ನು ಜಾರಿ ಹಾಗೂ ಆ ದಿನವನ್ನು ಗಣರಾಜ್ಯ ದಿನ ಎಂದು ಘೋಷಿಸಲಾಯಿತು.

ಸಂವಿಧಾನ ಜಾರಿಗೆ ಬಂದ ದಿನವಾದ ಜನವರಿ 26 ನ್ನು ಸಂವಿಧಾನ ದಿನ ಎಂದು ಘೋಷಿಸದೆ ನವಂಬರ್ 26 ನ್ನು ಏಕೆ ಸಂವಿಧಾನ ದಿನವೆಂದು ಘೋಷಿದ್ದಾರೆ ಎಂಬ ಜಾಣ ಅನುಮಾನ ಬರದೇ ಇರದು?

ಸಂಸತ್ತಿನ ಶಾಸನ ಸಭೆಯಲ್ಲಿ ಅಂಬೇಡ್ಕರರು ಸಂವಿಧಾನವನ್ನು ಮಂಡಿಸಿ ಮಾತನಾಡಿದ ದಿನವನ್ನೇ ಈಗ ಸಂವಿಧಾನದ ದಿನ ಎಂದು ಆಚರಿಸಲಾಗುತ್ತಿದೆ.ಅಂಬೇಡ್ಕರರವರು ಅಂದು ನವಂಬರ್ 26ರಂದು ಶಾಸನ ಸಭೆಯಲ್ಲಿ ಮಾತನಾಡುತ್ತಾ “ಜನವರಿ 26, 1950ರಂದು ನಾವು ವೈರುಧ್ಯಗಳ ಬದುಕಿಗೆ ಕಾಲಿಡಲಿದ್ದೇವೆ.‌ ರಾಜಕೀಯದಲ್ಲಿ, ನಮಗೆ ಸಮಾನತೆಯಿರುತ್ತದೆ ಆದರೆ ಸಾಮಾಜಿಕ ಹಾಗೂ ಆರ್ಥಿಕ ಸಂರಚನೆಗಳಲ್ಲಿ ಅಸಮಾನತೆಯಿರುತ್ತದೆ; ಒಬ್ಬ ಮನುಷ್ಯ ಒಂದು ಮೌಲ್ಯ ಎಂಬ ತತ್ವವನ್ನು ನಿರಾಕರಿಸುತ್ತಲೇ ಹೋಗುತ್ತಿರುತ್ತೇವೆ. ಈ ವೈರುಧ್ಯಗಳ ಬದುಕನ್ನು ಎಷ್ಟು ದಿನ ಹೀಗೇ ಮುಂದುವರೆಸಿಕೊಂಡು ಹೋಗುತ್ತೇವೆ? ನಮ್ಮ ಸಾಮಾಜಿಕ ಮತ್ತು ಆರ್ಥಿಕ ಬದುಕಿನಲ್ಲಿ ಸಮಾನತೆಯ ನಿರಾಕರಣೆಯನ್ನು ಎಷ್ಟು ದಿನ ಹೀಗೇ ಮುಂದುವರೆಸುತ್ತೇವೆ? ಬಹಳ ಕಾಲ ಹೀಗೇ ಇದು ಮುಂದುವರೆಯಿತೆಂದರೆ ನಾವು ನಮ್ಮ ರಾಜಕೀಯ ಪ್ರಜಾಪ್ರಭುತ್ವವನ್ನೇ ತೊಂದರೆಗೆ ಸಿಲುಕಿಸುತ್ತಿದ್ದೇವೆ ಎಂದೇ ಅರ್ಥ. ನಾವು ಆದಷ್ಟು ಬೇಗನೇ ಈ ವೈರುಧ್ಯವನ್ನು ನಿವಾರಿಸಿಕೊಳ್ಳಬೇಕು. ಇಲ್ಲವಾದರೆ ಅಸಮಾನತೆಯಿಂದ ನರಳುತ್ತಿರುವವರು ಈ ಸಂವಿಧಾನ ರಚನಾ ಸಭೆಯು ಇಷ್ಟು ಶ್ರಮವಹಿಸಿ ಕಟ್ಟಿರುವ ಪ್ರಜಾಪ್ರಭುತ್ವದ ಸೌಧವನ್ನೇ ಪುಡಿಗಟ್ಟಿಬಿಡುತ್ತಾರಷ್ಟೆ” ಎನ್ನುವ ಎಚ್ಚರಿಕೆಯನ್ನು ಅಂಬೇಡ್ಕರ್ ರವರು ಶಾಸನ ಸಭೆಯ ಮುಂದೆ ಇಡುತ್ತಾರೆ.

ಆದರಿಂದ ಈ ದಿನವನ್ನೇ ಈ ದಿನವನ್ನು ಸಂವಿಧಾನ ದಿನವೆಂದು ಕರೆಯಲಾಗುತ್ತದೆ. ಅಂಬೇಡ್ಕರ್ ರವರು ಶಾಸನ ಸಭೆಯಲ್ಲಿ ಸಂವಿಧಾನದ ಕುರಿತು ಮಾತಾಡಿದ ಸ್ಮರಣಾರ್ಥ ಹಾಗೂ ಈ ದಿನ ಸಂವಿಧಾನ ಅಂಗೀಕಾರವಾದ ದಿನವಾದ್ದರಿಂದ ಈ ದಿನವನು ‘ಸಂವಿಧಾನ ದಿನ ‘ ಎಂದು ಆಚರಿಸಲಾಗುತ್ತದೆ ಮತ್ತು ಇದಕ್ಕೂ ಮೊದಲು ಈ ದಿನವನ್ನು ಕಾನೂನು ದಿನ ಎಂದು ಸಹ ಆಚರಿಸಲಾಗುತಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top