ಸಮಾಚಾರ

ಗಿನ್ನೆಸ್ ದಾಖಲೆ ಮಾಡಿದ ಡಾ.ಮೊಹಮ್ಮದ್ ರೇಲಾರಿಂದ ಇಂದು ಶ್ರೀಗಳಿಗೆ ಚಿಕಿತ್ಸೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಶ್ರೀ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮಿಜಿ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ಏರ್ ಅಂಬುಲೆನ್ಸ್ ಮೂಲಕ ಅವರನ್ನು ಚೆನ್ನೈಗೆ ಕರೆದೊಯ್ಯಲಾಗುತ್ತಿದೆ. ಲಿವರ್ (ಯಕೃತ್) ಕಸಿ ಶಸ್ತ್ರಚಿಕಿತ್ಸೆಯಲ್ಲಿ ಗಿನ್ನೆಸ್ ದಾಖಲೆ ಬರೆದಿರುವ ಡಾ.ಮೊಹಮ್ಮದ್ ರೇಲಾ ಅವರು ಇಂದು ಸಿದ್ದಗಂಗಾ ಶ್ರೀಗಳಿಗೆ ಚೆನ್ನೈನಲ್ಲಿ ಚಿಕಿತ್ಸೆ ನೀಡಲಿದ್ದಾರೆ.

ಝೀರೋ ಟ್ರಾಫಿಕ್ ಮೂಲಕ ಶ್ರೀ ಶಿವಕುಮಾರ ಸ್ವಾಮಿಜಿ ಅವರನ್ನು ಬೆಂಗಳೂರಿಗೆ ಕರೆತರಲಾಗುತ್ತಿದ್ದು, ಐ ಕ್ಯಾಟ್ ಏರ್ ಅಂಬುಲೆನ್ಸ್ ನಲ್ಲಿ ಚೆನ್ನೈ ಗೆ ಪ್ರಯಾಣ ಬೆಳೆಸಲಿದ್ದಾರೆ. ಶತಾಯುಷಿ, ನಡೆದಾಡುವ ದೇವರು ಎಂದೇ ಖ್ಯಾತಿಗಳಿಸಿದ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಹೃದಯದಲ್ಲಿ ಅಳವಡಿಸಲಾದ 11 ಸ್ಟೆಂಟ್ ಗಳನ್ನು ಬದಲಿಸುವ ಅಗತ್ಯವಿದೆ. ಹಾಗಾಗಿ ಅವರನ್ನು ಚೆನ್ನೈ ಆಸ್ಪತ್ರೆಗೆ ಕರೆದೊಯ್ಯಲು ಸಿದ್ಧತೆ ನಡೆಸಲಾಗಿದೆ..

ಐದು ದಿನಗಳ ಹಿಂದೆ ಬಿಜಿಎಸ್ ಆಸ್ಪತ್ರೆಯಲ್ಲಿ ಎರಡು ಸ್ಟಂಟ್ ಅಳವಡಿಕೆ ಬಳಿಕ ಮಠಕ್ಕೆ ಹಿಂದಿರುಗಿದ್ದ ಸ್ವಾಮೀಜಿ ಆರೋಗ್ಯವಾಗಿದ್ದರು. ಆದರೆ, ಬುಧವಾರ ರಾತ್ರಿ ಸ್ವಲ್ಪ ಜ್ವರ ಕಾಣಿಸಿಕೊಂಡಿದ್ದರಿಂದ ಬಿಜಿಎಸ್ ಆಸ್ಪತ್ರೆ ಹಾಗೂ ನಗರದ ಸಿದ್ಧಗಂಗಾ ಆಸ್ಪತ್ರೆ ವೈದ್ಯರ ತಂಡ ಚಿಕಿತ್ಸೆ ನೀಡಿತ್ತು.

ಇನ್ನು ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದು ಆರೋಗ್ಯ ವಿಚಾರಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top