ಮನೋರಂಜನೆ

2019 ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಮಾಧುರಿ ದೀಕ್ಷಿತ್ .

ಮುಂದಿನ 2019ರ ಲೋಕಸಭಾ ಚುನಾವಣೆ ಹತ್ತಿರವಾಗುತ್ತಲೇ ರಾಜ್ಯದಲ್ಲಿ ರಾಜಕೀಯ ಬಿರುಸು ಪಡೆಯುತ್ತಿವೆ. ಪ್ರತಿಷ್ಠೆಯ ಕಣವಾಗಿರುವ ಈ ಚುನಾವಣೆಯಲ್ಲಿ ಗೆಲ್ಲಲೇಬೇಕು ಎಂದು ಪಣತೊಟ್ಟಿರುವ ರಾಜಕೀಯ ಪಕ್ಷಗಳು ಯಾವ್ಯಾವ ಪ್ರಭಾವಿ ವ್ಯಕ್ತಿಗಳನ್ನ ಬುಟ್ಟಿಗೆ ಹಾಕಿಕೊಂಡರೆ ಗೆಲುವು ಸಲೀಸಾಗುತ್ತದೆ ಎಂಬ ಲೆಕ್ಕಾಚಾರದಲ್ಲಿವೆ. ಹೀಗಿರುವಾಗಲೇ ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ.

2019 ರ ಲೋಕಸಭಾ ಚುನಾವಣೆಯಲ್ಲಿ ಪುಣೆಯಿಂದ ಬಾಲಿವುಡ್ ನಟಿ ಮಾಧುರಿ ದೀಕ್ಷಿತ್ ಅವರನ್ನು ಬಿಜೆಪಿ ಕಣಕ್ಕಿಳಿಸುವ ಸಾಧ್ಯತೆ ಇದೆ ಎಂಬುದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಬಿಜೆಪಿಯ ’ಸಂಪರ್ಕ್‌ ಫಾರ್‌ ಸಮರ್ಥನ್‌’ ಕಾರ್ಯಕ್ರಮದ ಸಂದರ್ಭ, ಇದೇ ಜೂನ್‌ನಲ್ಲಿ ಮುಂಬೈನಲ್ಲಿರುವ ಮಾಧುರಿ ದೀಕ್ಷಿತ್‌ ನಿವಾಸಕ್ಕೆ ಭೇಟಿ ನೀಡಿದ್ದ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಶಾ; ನರೇಂದ್ರ ಮೋದಿ ಸರ್ಕಾರದ ಸಾಧನೆಗಳನ್ನು ವಿವರಿಸಿದ್ದರು. ಪುಣೆ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮಾಧುರಿ ಅವರ ಹೆಸರು ಅಂತಿಮ ಪಟ್ಟಿಯಲ್ಲಿದೆ ಎಂದು ಬಿಜೆಪಿ ಹಿರಿಯ ಮುಖಂಡರೊಬ್ಬರು ಪಿಟಿಐಗೆ ತಿಳಿಸಿದ್ದಾರೆ.

ಮಾಧುರಿ ದೀಕ್ಷಿತ್ ಅವರಿಗೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ನೀಡಲೇಬೇಕು. ಪುಣೆ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿದರೇ ಕಾಂಗ್ರೆಸ್​ಗೆ ಪ್ರಬಲ ಅಭ್ಯರ್ಥಿಯಾಗಲಿದ್ದಾರೆ. ಇದು ಬಿಜೆಪಿಗೆ ಉತ್ತಮ ಅವಕಾಶವಾಗಿದೆ. ಈಗಾಗಲೇ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದ್ದು, ಮಾಧುರಿ ದೀಕ್ಷಿತ್ ಅವರನ್ನು ಅಲ್ಲಿಂದಲೇ ಕಣಕ್ಕಿಳಿಸುವ ಬಗ್ಗೆ ಗಂಭೀರ ಚರ್ಚೆಗಳು ನಡೆದಿವೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top