ಉದ್ಯೋಗ

ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನಿಸಿದೆ ಸೌತ್ ಇಂಡಿಯನ್ ಬ್ಯಾಂಕ್ – ಇಂದೇ ಅರ್ಜಿ ಸಲ್ಲಿಸಿ

ಸೌತ್ ಇಂಡಿಯನ್ ಬ್ಯಾಂಕ್ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ 16 ಡಿಸೆಂಬರ್ 2018 ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ.

ಸೌತ್ ಇಂಡಿಯನ್ ಬ್ಯಾಂಕ್ Probationary Officer ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ.ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ/12ನೇ ತರಗತಿ/ಎಚ್ಎಸ್‌ಸಿ& ಪದವಿಯನ್ನು ಶೇ 60 ರಷ್ಟು ಅಂಕಗಳೊಂದಿಗೆ ರೆಗ್ಯುಲರ್ ಕೋರ್ಸ್‌ನಲ್ಲಿ ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 25 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 30 ನವೆಂಬರ್‌ 2018ಕ್ಕೆ ಅನ್ವಯವಾಗುವಂತೆ

ಆಯ್ಕೆಯಾದ ಅಭ್ಯರ್ಥಿಗಳಿಗೆ 23700 – 42020 ಪ್ರತಿ ತಿಂಗಳ ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕ : ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 800 ರೂ., ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳು 200 ರೂ. ಶುಲ್ಕವನ್ನು ಪಾವತಿ ಮಾಡಬೇಕು.

ಅಭ್ಯರ್ಥಿಗಳನ್ನು ಆನ್‌ಲೈನ್ ಪರೀಕ್ಷೆ, ಗುಂಪು ಚರ್ಚೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ .

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top