fbpx
ಸಮಾಚಾರ

ದೇಶದಲ್ಲಿ ಪ್ರಚಾರದ ಗಾಳಿಪಟಗಳು ನೆಲಕ್ಕುರುತ್ತಿವೆ,” ಪಂಚರಾಜ್ಯಗಳ ಫಲಿತಾಂಶದ ಬಗ್ಗೆ ಮಾಜಿ ಸಿಎಂ ಸಿದ್ದು.

ದೇಶದ ಗಮನವನ್ನೇ ತನ್ನತ್ತ ಸೆಳೆದುಕೊಂಡಿದ್ದ ಪಂಚರಾಜ್ಯ ಚುನಾವಣೆ ಫಲಿತಾಂಶ ಹೊರಬೀಳುತ್ತಿರುವಂತೆಯೇ ಕೇಂದ್ರದಲ್ಲಿ ಆಡಳಿತರೂಢ ಭಾರತೀಯ ಜನತಾ ಪಕ್ಷಕ್ಕೆ ಭಾರಿ ಹಿನ್ನಡೆಯಾಗಿದೆ. ಈ ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಮತ್ತು ಪ್ರಧಾನಿ ನರೇಂದ್ರ ಮೋದಿಯನ್ನು ಪರೋಕ್ಷವಾಗಿ ಟೀಕಿಸಿದ್ದಾರೆ.

ಫಲಿತಾಂಶಗಳ ಬಗ್ಗೆ ಕರ್ನಾಟಕ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, “ಪ್ರಚಾರದ ಗಾಳಿಪಟಗಳು ನೆಲಕ್ಕುರುಳುತ್ತಿವೆ, ಎಂದು ಬಿಜೆಪಿಗೆ ಟೀಕಿಸಿದ್ದಾರೆ.
“ದೇಶದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಪ್ರಚಾರದ ಗಾಳಿಪಟಗಳು ನೆಲಕ್ಕುರುಳುತ್ತಿವೆ., ಇದು ಗೆದ್ದು ಬೀಗುವ ಸಮಯ ಅಲ್ಲ., ಸೈದ್ಧಾಂತಿಕವಾಗಿ ಗಟ್ಟಿಗೊಂಡು ನೆಲದಲ್ಲಿ ಕಾಲೂರಿ ಹೋರಾಟದಲ್ಲಿ ತೊಡಗಬೇಕಾದ ಕಾಲ.” ಎಂದು ಹೇಳಿಕೆ ನೀಡಿದ್ದಾರೆ. ಈ ಹೇಳಿಕೆಯನ್ನು ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ..

ಲೋಕಸಭೆ ಚುನಾವಣೆಗೆ ದಿಗ್ಸೂಚಿಯಾಗಿದ್ದ ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದೆ. ಮಧ್ಯಪ್ರದೇಶ, ರಾಜಸ್ತಾನ, ಛತ್ತೀಸಗಢ, ಮಿಜೋರಾಂ ಹಾಗೂ ತೆಲಂಗಾಣದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದೆ. ಛತ್ತೀಸಗಢದಲ್ಲಿ ಕಾಂಗ್ರೆಸ್ ಗೆ ಭರ್ಜರಿ ಬಹುಮತ ಸಿಕ್ಕಿದೆ. ಮಧ್ಯಪ್ರದೇಶ ಹಾಗೂ ರಾಜಸ್ತಾನದಲ್ಲೂ ಕಾಂಗ್ರೆಸ್ ಸರ್ಕಾರ ರಚಿಸುವ ಸಾಧ್ಯತೆ ಹೆಚ್ಚಿದೆ. ಈ ಎಲ್ಲಾ ರಾಜ್ಯಗಳಲ್ಲೂ ಬಿಜೆಪಿ ಆಡಳಿತದಲ್ಲಿತ್ತು ಇದು ಬಿಜೆಪಿಗೆ ಮುಖಬಂಗವಾಗಿದೆ.,

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top