ಉದ್ಯೋಗ

14033 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ರೈಲ್ವೆ ಇಲಾಖೆ

ರೈಲ್ವೇ ನೇಮಕಾತಿ ಮಂಡಳಿ 14033 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಸಲ್ಲಿಸಿ :

ಅರ್ಜಿಸಲು ಕೊನೆಯ ದಿನಾಂಕ : ಜನವರಿ 31 ರ ತನಕ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾದ ಅವಕಾಶವನ್ನು ಕಲ್ಪಿಸಲಾಗಿದೆ.

ಖಾಲಿ ಇರುವ ಹುದ್ದೆಗಳು :

ಜ್ಯೂನಿಯರ್ ಇಂಜಿನಿಯರ್ 13034, ಜ್ಯೂನಿಯರ್ ಇಂಜಿನಿಯರ್ (information technology) 49, Depot material superintendent 456, Chemical and metallurgical assistant 494 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ವಯೋಮಿತಿ :

ಈ ಮೇಲಿನ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 1/1/2019ಕ್ಕೆ ಅನ್ವಯವಾಗುವಂತೆ 18 ರಿಂದ 33 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ವೇತನ ಶ್ರೇಣಿ :

35,400 (ಲೆವಲ್ 6 ಆಫ್ 7ನೇ ಸಿಪಿಸಿ ಪೇ ಮ್ಯಾಟ್ರಿಕ್ಸ್).

ಆಯ್ಕೆ ವಿಧಾನ :

ಅಭ್ಯರ್ಥಿಗಳನ್ನು ಎರಡು ಹಂತದ ಕಂಪ್ಯೂಟರ್ ಪರೀಕ್ಷೆ, ದಾಖಲೆಗಳ ಪರಿಶೀಲನೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಶುಲ್ಕ :

ಸಾಮಾನ್ಯ ವರ್ಗದವರಿಗೆ 500 ರೂ., ಎಸ್‌ಸಿ/ಎಸ್‌ಟಿ/ಓಬಿಸಿ/ಅಂಗವಿಕಲ/ಮಾಜಿ ಸೈನಿಕರಿಗೆ 250 ರೂ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

 
ಅರ್ಹ ಅಭ್ಯರ್ಥಿಗಳು ತಮಗೆ ಸೂಕ್ತವೆನಿಸಿದ ಹುದ್ದೆಗಳಿಗೆ ಅರ್ಜಿ ಸಲ್ಲಿಸಬೇಕೆಂದು ಕೋರಲಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top