fbpx
ಮನೋರಂಜನೆ

ಈ ಕಾರಣಕ್ಕಾಗಿ ರಾಕಿಂಗ್ ಸ್ಟಾರ್ ಯಶ್ ಈ ವರ್ಷ ಹುಟ್ಟುಹಬ್ಬ ಆಚರಿಸಿಕೊಳ್ಳುವುದಿಲ್ಲವಂತೆ.

ಆದಾಯ ತೆರಿಗೆ ಅಧಿಕಾರಿಗಳ ದಾಳಿಯ ಶಾಕ್‌ನಿಂದ ಚೇತರಿಸಿಕೊಂಡಿರುವ ರಾಕಿಂಗ್ ಸ್ಟಾರ್ ಯಶ್‌ ಈಗ ಅಭಿಮಾನಿಗಳಿಗೆ ಶಾಕ್‌ ನೀಡಿದ್ದಾರೆ. ಜನವರಿ 8ರಂದು ನಟ ಯಶ್‌ ಜನ್ಮದಿನ. ಆದರೆ ಈ ಬಾರಿ ಜನ್ಮದಿನ ಆಚರಿಸಿಕೊಳ್ಳದಿರಲು ಯಶ್‌ ನಿರ್ಧರಿಸಿದ್ದಾರೆ. ಕಳೆದ ವರ್ಷಾಂತ್ಯದಲ್ಲಿ ನಮ್ಮನ್ನಗಲಿದ ರೆಬೆಲ್ ಸ್ಟಾರ್ ಅಂಬರೀಷ್ ಅವರ ನೆನಪಿನಾರ್ಥವಾಗಿ ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುವುದಿಲ್ಲ ಎಂದು ಯಶ್ ಹೇಳಿದ್ದಾರೆ.

ಈ ಬಗ್ಗೆ ಟ್ವಿಟರ್ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿರುವ ನಟ ಯಶ್ “ಜನವರಿ 8ರಂದು ನನ್ನ ಹುಟ್ಟುಹಬ್ಬ. ಕಳೆದ ಕೆಲವು ವರ್ಷಗಳಿಂದ ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸುತ್ತಾ ಬಂದಿದ್ದಾರೆ. ಆದರೆ ಈ ವರ್ಷ ಜನ್ಮದಿನವನ್ನು ಆಚರಿಸುತ್ತಿಲ್ಲ. ಇದಕ್ಕೆ ಅಭಿಮಾನಿಗಳು ಸಹಕಾರ ನೀಡಬೇಕು” ಎಂದು ಮನವಿ ಮಾಡಿಕೊಂಡಿದ್ದಾರೆ.

ನಮ್ಮ ಕುಟುಂಬದ ಹಿರಿಯರಾದ ರೆಬಲ್ ಸ್ಟಾರ್ ಅಂಬರೀಷ್ ಅವರು ಕೆಲ ದಿನಗಳ ಹಿಂದಷ್ಟೇ ನಮ್ಮನ್ನ ಅಗಲಿದ್ದಾರೆ. ಅವರಿಗೆ ಗೌರವ ಸೂಚಿಸುವ ಉದ್ದೇಶದಿಂದ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ. ಯಾರು ಅನ್ಯತಾ ಭಾವಿಸಬೇಡಿ ಎಂದು ಕೇಳಿಕೊಂಡಿದ್ದಾರೆ. ಅಭಿಮಾನಿಗಳನ್ನು ಭೇಟಿ ಮಾಡುವ ಅವಕಾಶ ಈ ಬಾರಿ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಆದರೆ ಕೆಜಿಎಫ್‌ ಚಿತ್ರ ಅಭೂತಪೂರ್ವ ಯಶಸ್ಸು ಗಳಿಸಲು ಎಲ್ಲರೂ ಸಹಕರಿಸಿದ್ದೀರಿ. ಇದಕ್ಕೆ ಎಲ್ಲರಿಗೂ ಥ್ಯಾಂಕ್ಸ್‌ ಎಂದು ಯಶ್‌ ಹೇಳಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top