fbpx
ಸಮಾಚಾರ

“ನಾನು ಕ್ಲರ್ಕ್ ಎಂದು ನರೇಂದ್ರ ಮೋದಿ ಅವರಿಗೆ ಹೇಳಿದ್ಯಾರು? ನಾನು ಹೇಳಿದ್ದೇನಾ?” – ಸಿಎಂ ಕುಮಾರಸ್ವಾಮಿ

ದೆಹಲಿಯ ರಾಮಲೀಲಾ ಮೈದಾನದಲ್ಲಿ ನಡೆದ ಬಿಜೆಪಿ ಸಮಾವೇಶದ ಕೊನೆಯ ದಿನದ ಕಾರ್ಯಕ್ರಮದ ವೇಳೆ ಮಾತನಾಡಿದ್ದ ಶ್ರೀಯುತ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಕಾಂಗ್ರೆಸ್ ಶಮನ ಮಾಡಲು ಪ್ರಾದೇಶಿಕ ಪಕ್ಷಗಳು ಹುಟ್ಟಿಕೊಂಡಿವೆ. ತೆಲಂಗಾಣದಲ್ಲಿ ಟಿಡಿಪಿಯೊಂದಿಗೆ ಮಾಡಿಕೊಂಡಿದ್ದ ಕಾಂಗ್ರೆಸ್ ಮೈತ್ರಿ ವಿಫಲವಾಯ್ತು. ಕರ್ನಾಟಕದಲ್ಲಿ ಜೆಡಿಎಸ್ ಗೆ ಬೆಂಬಲ ಸೂಚಿಸಿ ಕಾಂಗ್ರೆಸ್ ಸರ್ಕಾರ ರಚನೆ ಮಾಡಿದೆ. ಆದರೆ ಸಿಎಂ ಕುಮಾರಸ್ವಾಮಿ ಅವರನ್ನು ಕಾಂಗ್ರೆಸ್ ಕ್ಲರ್ಕ್ ನಂತೆ ನಡೆಸಿಕೊಳ್ಳುತ್ತಿದೆ ಎಂದು ನನಗೆ ಅನ್ನಿಸುತ್ತದೆ ಎಂದು ಹೇಳಿಕೆ ನೀಡಿದ್ದರು.

ಪಿಎಂ ಮೋದಿ ರವರು ‘ಸಿಎಂ ಕುಮಾರಸ್ವಾಮಿಯವರನ್ನು ಕಾಂಗ್ರೆಸ್ ಕ್ಲರ್ಕ್ ನಂತೆ ನಡೆಸಿಕೊಳ್ಳುತ್ತಿದೆ’ ಎಂಬ ಹೇಳಿಕೆ ನೀಡುತಿದ್ದಂತೆ ಗರಂ ಆದ ಜೆಡಿಎಸ್ ಪಕ್ಷದವರು ಪ್ರಧಾನಿ ನರೇಂದ್ರ ಮೋದಿಯವರ ಈ ಹೇಳಿಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರದಲ್ಲಿ ಏರ್ಪಡಿಸಲಾಗಿದ್ದ ಜೆಡಿಎಸ್ ಕಾರ್ಯಕರ್ತರ ಸಭೆಯು ಜರಗುವ ಮುನ್ನ ಮಾಧ್ಯಮದವರೊಂದಿಗೆ ಸ್ವತಃ ಮಾತನಾಡಿದ ಸಿಎಂ ಕುಮಾರಸ್ವಾಮಿ ಅವರು, ” ನಾನು ಕ್ಲರ್ಕ್ ಎಂದು ನರೇಂದ್ರ ಮೋದಿ ಅವರಿಗೆ ಹೇಳಿದ್ಯಾರು? ನಾನು ಹೇಳಿದ್ದೇನಾ? ಮೋದಿ ಅವರು ಗೌರವಯುತ ಸ್ಥಾನದಲ್ಲಿದ್ದು, ಹೀಗೆ ಮಾತನಾಡುವುದು ಸರಿಯಲ್ಲ. ಪ್ರಧಾನಿಯಾಗಿ ಇಂತಹ ಕೀಳುಮಟ್ಟದ ಹೇಳಿಕೆ ನೀಡಿರುವುದು ಸರಿಯಲ್ಲ. ಇದರಿಂದ ಅವರ ವ್ಯಕ್ತಿತ್ವಕ್ಕೆ ಧಕ್ಕೆಯಾಗುತ್ತದೆ ಎಂದು ನೇರವಾಗಿ ನುಡಿದರು.

ಅದರೊಂದಿಗೆ ನಮ್ಮನ್ನ (ಜೆಡಿಎಸ್) ಕಂಡರೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭಯ ಉಂಟಾಗಿದೆ. ಹೀಗಾಗಿ ನನ್ನ ವಿರುದ್ಧ ಮಾತನಾಡಿದ್ದಾರೆ ಎಂದು ಸಿಎಂ ಕುಮಾರಸ್ವಾಮಿ ಯವರು ಪಿಎಂ ಮೋದಿ ವಿರುದ್ಧ ಹರಿಹಾಯ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top