fbpx
ಸಮಾಚಾರ

“ನಡೆದಾಡುವ ದೇವರು ಶಿವಕುಮಾರಸ್ವಾಮೀಜಿ ಅವರಿಗೆ ಭಾರತ ರತ್ನ ನೀಡಬೇಕು” ಮಲ್ಲಿಕಾರ್ಜುನ ಖರ್ಗೆ ಆಗ್ರಹ.

ನಡೆದಾಡುವ ದೇವರೆಂದೇ ಪ್ರಸಿದ್ಧಿಯಾಗಿರುವ ಶ್ರೀ ಸಿದ್ದಗಂಗಾ ಶ್ರೀಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್‌ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ರವರು “ಶ್ರೀಗಳಿಗೆ ಕೊಂಚ ಉಸಿರಾಟದ ತೊಂದರೆ ಇದೆ. ವಿಶೇಷವಾಗಿ ಶಸ್ತ್ರಚಿಕಿತ್ಸೆ ಆದ ಬಳಿಕ ಉಸಿರಾಟಕ್ಕೆ ತೊಂದರೆಯಾಗಿದೆ. ಆದರೂ, ವೈದ್ಯರು ಉತ್ತಮ ರೀತಿಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ. ಶ್ರೀಗಳು ಗುಣಮುಖರಾಗುತ್ತಾರೆ ಎನ್ನುವ ಭರವಸೆ ಇದೆ. ಶ್ರೀಗಳು ಸಮಾಜಕ್ಕೆ ವಿಶೇಷ ಕೊಡುಗೆ ನೀಡಿದ್ದಾರೆ. ವಿದ್ಯಾದಾನ ಮಾಡುವ ಶಕ್ತಿ ಅವರಿಗಿದೆ” ಎಂದು ತಿಳಿಸಿದರು.

ಅಷ್ಟೇ ಅಲ್ಲದೆ, ” ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಪಕ್ಷ ದ ನಾಯಕನಾಗಿ ಕೇಂದ್ರಕ್ಕೆ ಪತ್ರ ಬರೆಯುತ್ತೇನೆ. ಶ್ರೀಗಳಿಗೆ ಭಾರತ ರತ್ನ ನೀಡುವಂತೆ ಪಕ್ಷಾತೀತವಾಗಿ ಒತ್ತಾಯಿಸಬೇಕಿದೆ,” ಎಂದೂ ಸುದ್ದಿಗಾರರೊಂದಿಗೆ ತಮ್ಮ ಅಭಿಪ್ರಾಯವನ್ನು ಹಂಚಿಕೊಂಡರು.

ಒಟ್ಟಿನಲ್ಲಿ ಅಸಾಧ್ಯವಾದುದನ್ನೆಲ್ಲ ಸಾಧಿಸಿ, ಅನೇಕ ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿರುವ, ಅಪಾರ ಸಾಮಾಜಿಕ ಕಳಕಳಿ ಹೊಂದಿ ಸಿದ್ಧಗಂಗೆಗೆ ಭೇಟಿಕೊಡುವ ಸಾವಿರಾರು ಭಕ್ತರಿಗೆ ಪ್ರತಿನಿತ್ಯ ತ್ರಿವಿಧ ದಾಸೋಹ ವ್ಯವಸ್ಥೆಯನ್ನು ಜಾರಿಗೆ ತಂದಿರುವ, ಲೆಕ್ಕವಿರದಷ್ಟು ಸತ್ಕಾರ್ಯಗಳನ್ನು ಎಸೆಗಿರುವ ಶ್ರೀ ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳಿಗೆ ಭಾರತ ರತ್ನ ಸಿಗಲಿ ಎಂಬುದು ಪ್ರತಿಯೊಬ್ಬರ ಒಕ್ಕೊರಲಿನ ಬೇಡಿಕೆಯಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top