fbpx
ಮಾಹಿತಿ

‘ಮತದಾರರ ಪಟ್ಟಿ’ಗೆ ತಮ್ಮ ಹೆಸರನ್ನು ಸೇರಿಸಲು ಬಯಸುವಿರಾ ಅಥವಾ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂಬುದನ್ನು ತಿಳಿಯಲಿಚ್ಚಿಸುವಿರಾ ? ಹಾಗಾದರೆ ಇಲ್ಲಿ ನೋಡಿ !

ಲೋಕ ಸಭಾ ಚುನಾವಣೆಗೆ ಪ್ರತಿಯೊಂದು ಪಕ್ಷವು ಭರದಿಂದ ಸಿದ್ಧತೆ ನಡೆಸುತ್ತಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಲೋಕ ಸಭಾ ಚುನಾವಣೆ ನಡೆಯಲಿದೆ .

ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಮಧ್ಯೆ, ಚುನಾವಣಾ ಆಯೋಗ ಇದಕ್ಕಾಗಿ ಸಕಲ ಸಿದ್ಧತೆ ಕೈಗೊಂಡಿದ್ದು, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಪೂರ್ಣಗೊಳಿಸಿದೆ ಎಡನು ತಿಳಿದು ಬಂದಿದೆ.

ಒಟ್ಟಿನಲ್ಲಿ ತಿಳಿದು ಬಂದಿರುವ ಮಾಹಿತಿಗಳ ಪ್ರಕಾರ ರಾಜ್ಯದಲ್ಲಿ ಒಟ್ಟು 5.03 ಕೋಟಿ ಮತದಾರರಿದ್ದು, ಈ ಪೈಕಿ 2,54,84,972 ಮಂದಿ ಪುರುಷ ಮತದಾರರರಾಗಿದ್ದರೆ, 2,48,46,976 ಮಹಿಳಾ ಮತದಾರರಾಗಿದ್ದಾರೆ. 4718 ತೃತೀಯ ಲಿಂಗಿ ಮತದಾರರು ಈ ಪಟ್ಟಿಯಲ್ಲಿದ್ದಾರೆ.

 

 

ಲೋಕಸಭಾ ಚುನಾವಣೆಯಲ್ಲಿ ಓಟು ಹಾಕುವದು ನಮ್ಮೆಲ್ಲರ ಕರ್ತವ್ಯವಾಗಿದ್ದು, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ ಮಾಡಲು ಇನ್ನೂ ಅವಕಾಶವಿದ್ದು, 2019 ರ ಜನವರಿ 1 ಕ್ಕೆ 18 ವರ್ಷ ತುಂಬಿದ ಯುವಜನತೆ ಇದರ ಸದುಪಯೋಗ ಪಡೆಯುವಂತೆ ತಿಳಿಸಲಾಗಿದ್ದು ಇದಕ್ಕಾಗಿ ಆಸಕ್ತರು ತಹಶೀಲ್ದಾರ್ ಕಚೇರಿ ಅಥವಾ www.voterreg.kar.nic.in ವೆಬ್ ಸೈಟ್ ನಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದಾದ ಅವಕಾಶವನ್ನು ಕಲ್ಪಿಸಲಾಗಿದೆ.

ಹಾಗೆಯೇ ಮತದಾರರ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂಬುದನ್ನು ಖಾತ್ರಿ ಪಡಿಸಿಕೊಳ್ಳಲು, ನೀವು www.ceo-karnataka.kar.nic.in ವೆಬ್ ಸೈಟ್ ಗೆ ಭೇಟಿ ನೀಡಿ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top