fbpx
ಸಮಾಚಾರ

ಮುಖ್ಯಮಂತ್ರಿ ಗದ್ದುಗೆ ಮೇಲೆ ನಾನು ಕಣ್ಣಿಟ್ಟಿಲ್ಲ – ಮಾಜಿ ಸಿಎಂ ಸಿದ್ದರಾಮಯ್ಯ

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಮೈತ್ರಿ ಸರಕಾರದಲ್ಲಿ ಯಾವುದೇ ಬಿಕ್ಕಟ್ಟಿನ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ.

ಇತ್ತೀಚಿಗೆ ಆಪರೇಷನ್ ಬಿಜೆಪಿ ಬಗ್ಗೆ ಎಲ್ಲೆಡೆ ಮಾತಾಡಿದ್ದು, ಸಹಜವಾಗಿ ಮೈತ್ರಿ ಸರ್ಕಾರದ ಒಗ್ಗಟ್ಟಿನ ಬಗ್ಗೆ ಬಿಸಿ ಬಿಸಿ ಚರ್ಚೆಯಾಗುತ್ತಿದೆ. ಇದೀಗ ಇದರ ಕುರಿತು ಮಾತನಾಡಿರುವ ಸಿದ್ದರಾಮಯ್ಯ ಏನು ಹೇಳಿದ್ದಾರೆ ಮುಂದೆ ಓದೋಣ ಬನ್ನಿ :

 

 

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನಾಗಿ ಶಾಸಕರನ್ನು ನಿಯಂತ್ರಿಸುವ ಹೊಣೆಗಾರಿಕೆ ತಮ್ಮ ಮೇಲಿದ್ದು, ಅದನ್ನು ನಿಭಾಯಿಸುವುದಾಗಿ ತಿಳಿಸಿದ್ದಾರೆ .

‘ಅಷ್ಟೇ ಅಲ್ಲದೆ ಕಾಂಗ್ರೆಸ್ ಶಾಸಕರನ್ನು ತಾವಲ್ಲದೆ ಜೆಡಿಎಸ್ ನಾಯಕರು ನಿಯಂತ್ರಿಸಲಿ ಎಂದು ನಿರೀಕ್ಷಿಸಲು ಸಾಧ್ಯವೆ? ಎಂದು ಮಾಧ್ಯಮದವರನ್ನು ಮರು ಪ್ರಶ್ನಿಸಿದ್ದಾರೆ .

ಹಾಗೂ ‘ಮೈತ್ರಿ ಸರಕಾರದಲ್ಲಿ ಯಾವುದೇ ಬಿಕ್ಕಟ್ಟಿಲ್ಲ. ಇಲ್ಲದ ಬಿಕ್ಕಟ್ಟನ್ನು ಸೃಷ್ಟಿಸಲು ಮಾಧ್ಯಮಗಳು ಹವಣಿಸುತ್ತಿವೆ’ ಎಂದು ಸಿದ್ದರಾಮಯ್ಯ ದೂಷಿಸಿದರು.

ಅಂದಹಾಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಪದತ್ಯಾಗಕ್ಕೆ ಸಿದ್ಧ ಎಂದು ಹೇಳಿರುವುದು ತಮ್ಮ ಗಮನಕ್ಕೆ ಬಂದಿಲ್ಲ ಎಂದ ಸಿದ್ದರಾಮಯ್ಯ ನವರು , ಹಾಗಿದ್ದರೂ ಅವರ ಜತೆ ಮಾತುಕತೆ ನಡೆಸುವುದಾಗಿ ಹೇಳಿದರು.

ಅಲ್ಲದೆ ಮುಖ್ಯಮಂತ್ರಿ ಗದ್ದುಗೆ ಮೇಲೆ ತಾವು ಕಣ್ಣಿಟ್ಟಿಲ್ಲ ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

ನಮ್ಮಲ್ಲಿ ಜನಪ್ರಿಯ

To Top