ಸಮಾಚಾರ

ಅನಿತಾ ಕುಮಾರಸ್ವಾಮಿ ಮನವಿ ಮಾಡಿಕೊಂಡರೂ ಕ್ಯಾರೇ ಎನ್ನದ ಸಿದ್ದು- ನಿಖಿಲ್ ನಾಮಪತ್ರ ಸಲ್ಲಿಕೆಗೆ ಹೋಗಲ್ಲ ಅಂದ್ರು ಮಾಜಿ ಸಿಎಂ.

ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿರುವ ಜೆಡಿಎಸ್‌ ಶಾಸಕಿ ಅನಿತಾ ಕುಮಾರಸ್ವಾಮಿ ಪುತ್ರ ನಿಖಿಲ್‌ ಪರ ಪ್ರಚಾರಕ್ಕೆ ಆಗಮಿಸುವಂತೆ ಆಹ್ವಾನಿಸಿದ್ದಾರೆ. ಜತೆಗೆ ಮಂಡ್ಯದಲ್ಲಿ ಮುನಿಸಿಕೊಂಡಿರುವ ಕಾಂಗ್ರೆಸ್‌ ಮುಖಂಡರು ನಿಖಿಲ್‌ ಪರ ಕೆಲಸ ಮಾಡುವಂತೆ ಸೂಚಿಸಬೇಕೆಂದು ವಿನಂತಿಸಿಕೊಂಡಿದ್ದಾರೆ.

ನಿನ್ನೆ ಸಂಜೆ ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಭೇಟಿಯಾಗಿದ್ದ ಶಾಸಕಿ ಅನಿತಾ ಕುಮಾರಸ್ವಾಮಿ ತಮ್ಮ ಮಗ ನಿಖಿಲ್ ಕುಮಾರಸ್ವಾಮಿ ಸೋಮವಾರ ಮಂಡ್ಯ ಲೋಕಸಭಾ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸುವಾಗ ತಾವೂ ಹಾಜರಿರಬೇಕೆಂದು ಮನವಿ ಮಾಡಿಕೊಂಡಿದ್ದರು. ಆದರೆ, ಅವರ ಮನವಿಯ ನಂತರವೂ ಸಿದ್ದರಾಮಯ್ಯ ನಾಳೆಯ ನಾಮಪತ್ರ ಸಲ್ಲಿಕೆ ವೇಳೆ ಪಾಲ್ಗೊಳ್ಳುತ್ತಿಲ್ಲ.

ನಿಖಿಲ್ ನಾಮಪತ್ರ ಸಲ್ಲಿಕೆ ವೇಳೆ ನಾನು ಜೊತೆ ಇರೋಕೆ ಆಗುವುದಿಲ್ಲ. ನಿನ್ನೆ ಅವರ ತಾಯಿ ಅನಿತಾ ನನ್ನನ್ನು ಭೇಟಿ ಮಾಡಿ, ನನ್ನ ಮಗನಿಗೆ ಆಶೀರ್ವಾದ ಮಾಡಿ ಅಂತ ಕೇಳಿಕೊಂಡಿದ್ದರು. ಆದರೆ, ನಾಳೆ ನಾಮಪತ್ರ ಸಲ್ಲಿಕೆ ವೇಳೆ ಜೊತೆ ಇರೋಕೆ ಆಗೋಲ್ಲ‌. ನಾನು ನಾಳೆ ಮೈಸೂರಿನಲ್ಲಿ ಇರುತ್ತೇನೆ. ನಂತರ ಚಿತ್ರದುರ್ಗಕ್ಕೆ ತೆರಳುತ್ತೇನೆ. ಎಲ್ಲ ಕಡೆ ನಾಮಪತ್ರ ಸಲ್ಲಿಕೆಗೆ ಹೋಗೋಕೆ ಆಗೋಲ್ಲ ಎಂದಿದ್ದಾರೆ.

ಈ ಮೂಲಕ ಕಳೆದ ಚುನಾವಣೆಯ ಸೋಲಿನ ಕಹಿ ಘಟನೆಯನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮರೆತಿಲ್ಲವೆಂದು ಕಾಣುತ್ತಿದ್ದು, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಕುಟುಂಬದ ಮನವಿಗೆ ಸಿದ್ದರಾಮಯ್ಯ ಕ್ಯಾರೇ ಎಂದಿಲ್ಲ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

ನಮ್ಮಲ್ಲಿ ಜನಪ್ರಿಯ

To Top