ಸಮಾಚಾರ

ಗ್ರೂಪ್ ‘ಸಿ’ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕೆಪಿಎಸ್‌ಸಿ- ಬೇಗ ಅರ್ಜಿ ಹಾಕಿ.

ಕರ್ನಾಟಕ ಲೋಕಸೇವಾ ಆಯೋಗ ತನ್ನ ಅಧಿಕೃತ ವೆಬ್ ಸೈಟ್ ನಲ್ಲಿ ಒಟ್ಟು ಗ್ರೂಪ್ ‘ಸಿ’ ಯ 46 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದ್ದು ಆಸಕ್ತರು ಶೀಘ್ರವೇ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 22/4/2019 ಕೊನೆಯ ದಿನ. ಹುದ್ದೆಗಳ ನೇಮಕಾತಿಯನ್ನು ಸ್ಮರ್ಧಾತ್ಮಕ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ನಡೆಸಲಾಗುತ್ತದೆ.

ಹುದ್ದೆ ಹೆಸರು: ಗ್ರೂಪ್ ‘ಸಿ’

ವಿದ್ಯಾರ್ಹತೆ : ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ 12ನೇ ತರಗತಿ, ಡಿಪ್ಲೋಮಾ, ಪದವಿ, ಬಿಇ/ಬಿಟೆಕ್ ಅಥವಾ ತತ್ಸಮಾನ ಅರ್ಹತೆ.

ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಕನಿಷ್ಠ 18 ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. ಇನ್ನು ಗರಿಷ್ಟ ವಯೋಮಿತಿ 35 ವರ್ಷ

ವೇತನ ಶ್ರೇಣಿ : 9,300 ರೂ ನಿಂದ 34,800 ರೂ.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಏಪ್ರಿಲ್ 22, 2019

ಅರ್ಜಿ ಶುಲ್ಕಗಳು:
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 600 ರೂ.
ಪ್ರವರ್ಗ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 300 ರೂ.
ಮಾಜಿ ಸೈನಿಕ ಅಭ್ಯರ್ಥಿಗಳಿಗೆ 50 ರೂ.
ಪ.ಜಾ/ಪ.ಪಂ/ಪ್ರವರ್ಗ -1/ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವಿಲ್ಲ.

ಹುದ್ದೆಯ ಕುರಿತ ಹೆಚ್ಚಿನ ಮಾಹಿತಿಗಾಗಿ ನೋಟಿಫಿಕೇಶನ್ ಓದಲು ಇಲ್ಲಿ ಕ್ಲಿಕ್ ಮಾಡಿ.

ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

ನಮ್ಮಲ್ಲಿ ಜನಪ್ರಿಯ

To Top