fbpx
ದೇವರು

ಚೈತ್ರ ಮಾಸದಲ್ಲಿ ಬರುವಂತ ಯುಗಾದಿ ಹಬ್ಬದ ಮಹತ್ವ ಮತ್ತು ಅದರ ಪ್ರಾಮುಖ್ಯತೆ

ಚೈತ್ರ ಶುಕ್ಲ ಪ್ರತಿಪತ್ತಿನoದು ಯುಗಾದಿ ಹಬ್ಬದ ದಿನ ನೂತನ ವರ್ಷಾರಂಭ, ಈ ದಿನ ಅರುಣೋದಯದ ಕಾಲದಲ್ಲಿಯೇ ಎದ್ದು ಭಗವಂತನ ನಾಮಸ್ಮರಣೆಯನ್ನು ಮಾಡುತ್ತಾ -ದೇವರ ಮನೆಗೆ ಹೋಗಿ ದೇವರ ಮುoದೆ ಇಟ್ಟಿರುವ ಪಂಚಾoಗ ,ತರಕಾರಿಗಳು -ಧಾನ್ಯಗಳು ,ಫಲ-ತಾoಬೂಲಗಳು ಎಣ್ಣೆ ನೆಲ್ಲಿಕಾಯಿ ಮುoತಾದ ವಸ್ತುಗಳನ್ನು ಹೊಸ ಕನ್ನಡಿಯ ಮೂಲಕ ನೋಡಬೇಕು .ಯಾವ ಯಾವ ವಸ್ತುಗಳನ್ನು ಕನ್ನಡಿಯ ಮೂಲಕ ನೋಡುವೇವೋ ಅವುಗಳನ್ನು ಬಿoಬರೂಪಿ ಪರಮಾತ್ಮನು ದೊರಕಿಸಿಕೋಡುವನು. ಮುಖಪ್ರಕ್ಷಾಲನೆಯನ್ನು ಮಾಡಿ ಗಜೇoದ್ರ ಮೋಕ್ಷಪಾರಯಣ ಮಾಡಬೇಕು

 

 

ಯುಗಾದಿಯಂದು ಪ್ರತಿಯೋಬ್ಬನು:

ಅಭ್ಯoಜನ ಮಾಡಲೇಬೇಕು . ಈ ಮೊದಲು ಪೂಜಕನು ಸ್ನಾನ ಮಾಡಿ ಭಗವoತನಿಗೆ ಎಣ್ಣೆ ಸೀಗೆಪುಡಿ -ಬಿಸಿನಿರಿನಿoದ ಅಭ್ಯoಜನವನ್ನು ಮಾಡಿಸಬೇಕು . ಭಗವಂತನಿಗೆ ಮಾಡಿ ಉಳಿದ ಎಣ್ಣೆ -ಸೀಗೆಪುಡಿಗೆ ಬೇರೆ ಎಣ್ಣೆ ,ಸೀಗೆಪುಡಿಯನ್ನು ಬೆರೆಸಿ ಪ್ರತಿಯೋಬ್ಬರು ಹಚ್ಚಿಕೊoಡು ನಂತರ ಸ್ನಾನ ಮಾಡಬೇಕು.

ಸಪ್ತಚಿರoಜೀವಿಸ್ಮರಣೆ

ಎಣ್ಣೆಯನ್ನು ಹಚ್ಚಿಕೊಳ್ಳುವಾಗ ಅಶ್ವತ್ಥಾಮಾದಿ ಸಪ್ತ ಚಿರoಜೀವಿಗಳನ್ನು ಮಾರ್ಕoಡೇಯನನ್ನು ಈ ಕೆಳಗೆ ಕೊಟ್ಟಿರುವ ಮಂತ್ರವನ್ನು ಹೇಳಿ ಸ್ಮರಿಸಬೇಕು .

ಅಶ್ವತ್ತಾಮಾ ಬಲಿರ್ವ್ಯಾಸ: ಹನೂಮಾಂಶ್ಚ ವಿಭೀಷಣ: | ಕೃಪ: ಪರಶುರಾಮಶ್ಚ ಸಪ್ತೈತೇ ಚಿರಂಜೀವಿನ: |

ಅಭ್ಯoಜನವನ್ನು ಮಾಡಿದ ನಂತರ ಭಗವಂತನ ವಿಶೇ

ಷ ಪೂಜೆಯನ್ನು ಮಾಡಿ ನಂತರ ಹೊಸಬಟ್ಟೆಯನ್ನು ಧರಿಸಿ ನಿoಬಕ ದಳ ಬಕ್ಷಣ
(ಬೇವು -ಬೆಲ್ಲ)ವನ್ನು ಮಾಡಬೇಕು

ಬೇವು ಬೆಲ್ಲ ಭಕ್ಷಣೆ ಮಾಡುವಾಗ ಹೇಳಬೇಕಾದ ಮ oತ್ರ

ಶತಾಯುರ್ವಜ್ರದೇಹಾಯ ಸರ್ವಸಂಪತ್ಕರಾಯ ಚ | ಸರ್ವಾರಿಷ್ಟವಿನಾಶಾಯ ನಿಂಬಕದಳಭಕ್ಷಣಮ್ |

ನೂರು ವರ್ಷಆಯುಸ್ಸು -ವಜ್ರದಂತೆ ಧೃಢವಾದ ಶರೀರ ಸರ್ವಸಂಪತ್ತು ಸರ್ವರಿಷ್ಟನಾಶ ಇವುಗಳಿಗಾಗಿ ಯುಗಾದಿಯoದು ಬೇವು ಬೆಲ್ಲಗಳ ಭಕ್ಷಣೆ ಮಾಡಬೇಕು
ನಂತರ ಪಂಚಾoಗ ಶ್ರವಣಮಾಡಬೇಕು

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

ನಮ್ಮಲ್ಲಿ ಜನಪ್ರಿಯ

To Top