fbpx
ಸಮಾಚಾರ

“ಅಂಬರೀಶ್​ ಪಾರ್ಥಿವ ಶರೀರವನ್ನ ಮಂಡ್ಯಕ್ಕೆ ತಗೊಂಡು ಹೋಗೋದು ಬೇಡ ಅಂತ ಸುಮಲತಾ ಹೇಳಿದ್ರು” ಸಿಎಂ ಕುಮಾರಸ್ವಾಮಿ.

ಇಂದು ಕೆ.ಆರ್​.ಪೇಟೆಯಲ್ಲಿ ಪುತ್ರ ನಿಖಿಲ್​ ಪರ ಪ್ರಚಾರ ನಡೆಸಿದ ಮುಖ್ಯಮಂತ್ರಿ ಎಚ್​. ಡಿ.ಕುಮಾರಸ್ವಾಮಿ ಸುಮಲತಾ ಅಂಬರೀಷ್ ಅವರ ವಿರುದ್ಧ ಹರಿಹಾಯ್ದಿದ್ದಾರೆ.

” ಅಂಬರೀಶ್ ಅವರನ್ನು ಮೊದಲು ಎಂಪಿ ಮಾಡಿದ್ದು ಜನತಾ ಪಕ್ಷ. ನಂತರ ಕಾಂಗ್ರೆಸ್ ಗೆ ಹೋದರು. ನಾನು ಅವರಿಗೆ ಏನು ಸಹಾಯ ಮಾಡಿದ್ದೇನೆ, ಅವರು ನನಗೆ ಏನು ಸಹಾಯ ಮಾಡಿದ್ದಾರೆ ಈಗ ಮಾತನಾಡುವುದು ಬೇಡ.”

“ಅಂಬರೀಶ್ ನಿಧನರಾದಾಗ ನನಗೆ ನನ್ನ ಮಗ ತಿಳಿಸಿದ. ಆಸ್ಪತ್ರೆಗೆ ಹೋದಾಗ ಅಲ್ಲಿ ಇಂದು ಚುನಾವಣೆ ನಡೆಸಲು ಬಂದವರು ಇರಲಿಲ್ಲ. ಈ ಸಂದರ್ಭದಲ್ಲಿ ಆ ತಾಯಿಗೆ ಕೇಳುತ್ತೇನೆ. ಆ ಸಣ್ಣ ಸೌಜನ್ಯದ ಕ್ರಿಯೆ ಅವರಿಗೆ ಇದೆಯಾ? ಅವರು ವಾಸ ಮಾಡುತ್ತಿದ್ದ ಮನೆಗೆ ಪಾರ್ಥಿವ ಶರೀರ ತೆಗೆದುಕೊಂಡು ಹೋಗಲು ವ್ಯವಸ್ಥೆ ಮಾಡಿದೆ. ಮಧ್ಯ ರಾತ್ರಿಯಲ್ಲಿ ಒಂದು ರೂಂ ಕ್ಲೀನ್ ಮಾಡಿಸಿ ಅವರು ಬಾಳಿದ ಮನೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದೆ.”

“ದೇಶದ ಇತಿಹಾಸದಲ್ಲಿ ಪಾರ್ಥಿವ ಶರೀರ ತೆಗೆದುಕೊಂಡು ಹೋಗಲು ಸೇನೆಯ ವಿಮಾನ ಕೊಡಲ್ಲ. ಅವತ್ತು ಈ ಅಭಿಮಾನಿಗಳು ಮನವಿ ಮಾಡಿಕೊಂಡರು ಎಂದು ನಾನು ಮಾಡಿಸಿದೆ.. ನಾನು ಒಬ್ಬ ಮುಖ್ಯಮಂತ್ರಿ ಆಗಿ ನಾನು ಅಲ್ಲಿ ಕೂರಲಿಲ್ಲ. ಅಂತ ದರ್ದು ನನಗೇನಿತ್ತು” ಎಂದು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

ನಮ್ಮಲ್ಲಿ ಜನಪ್ರಿಯ

To Top