ಸಮಾಚಾರ

57 ವರ್ಷದ ಹಿಂದೆ ಕಾಂಗ್ರೆಸ್ ಪಕ್ಷವನ್ನು ಬಿಟ್ಟಿದ್ದಕ್ಕೆ ಕಾರಣ ಕೊಟ್ಟ ದೇವೇಗೌಡರು.

ಜೆಡಿಎಸ್ ಪಕ್ಷವನ್ನು ಕಟ್ಟಿ, ದೊಡ್ಡ ಮಟ್ಟದಲ್ಲಿ ಸಂಘಟಿಸಿ ಮುಖ್ಯಮಂತ್ರಿ, ಪ್ರಧಾನಿ ಮಂತ್ರಿ ಕೂಡ ಆಗಿದ್ದ ರಾಜಕೀಯ ಮುತ್ಸದ್ದಿ ಹೆಚ್.ಡಿ ದೇವೇಗೌಡ ಅವರು ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷದಲ್ಲೂ ಕೂಡ ಇದ್ದರು. 1953 ರಲ್ಲಿ ದೇವೇಗೌಡ ಅವರು ಕಾಂಗ್ರೆಸ್ ಪಕ್ಷ ಸೇರಿ ಒಂಬತ್ತು ವರ್ಷಗಳ ಕಾಲ ಕಾಂಗ್ರೆಸ್‌ನಲ್ಲಿದ್ದ ದೇವೇಗೌಡ ಅವರು 1962 ರಲ್ಲಿ ಕಾಂಗ್ರೆಸ್ ಪಕ್ಷ ತ್ಯಜಿಸಿದರು. ಇದೀಗ ತಾವು 57 ವರ್ಷದ ಹಿಂದೆ ಕಾಂಗ್ರೆಸ್ ಪಕ್ಷ ಬಿಟ್ಟಿದ್ದಕ್ಕೆ ಕಾರಣ ನೀಡಿದ್ದಾರೆ.

ಜಿಲ್ಲೆಯ ಮಳವಳ್ಳಿಯಲ್ಲಿ ಜೆಡಿಎಸ್​-ಕಾಂಗ್ರೆಸ್​​​ ಜಂಟಿ ಸಭೆಯಲ್ಲಿ ಮಾತನಾಡಿದ ದೇವೇಗೌಡ, “ಅಧಿಕಾರ ಪಡೆದ ಅಹಂನಲ್ಲಿ ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇನೆ ಎಂದು ಮೋದಿ ಹೇಳುತ್ತಿದ್ದಾರೆ. ನಾನು ಕೂಡ ಕಾಂಗ್ರೆಸ್​ನಲ್ಲೆ ಇದ್ದವನು ನಿಜಲಿಂಗಪ್ಪ ಅವರು ತಮಗೆ ಟಿಕೆಟ್ ಕೊಡದಿದ್ದಕ್ಕೆ ಅಲ್ಲಿಂದ ಹೊರಬಂದೆ. ” ಎಂದು ಹೇಳಿದ್ದಾರೆ.

ಹಾಸನದ ಹೊಳೆನರಸೀಪುರದಿಂದ ಚುನಾವಣೆಗೆ ಸ್ಪರ್ಧಿಸಲು ದೇವೇಗೌಡ ಅವರು ಉತ್ಸುಕರಾಗಿದ್ದರು, ಆದರೆ ಕಾಂಗ್ರೆಸ್ ಪಕ್ಷ ಅವರಿಗೆ ಟಿಕೆಟ್ ನೀಡಿರಲಿಲ್ಲ, ಹಾಗಾಗಿ ಅವರು ಕಾಂಗ್ರೆಸ್ ಪಕ್ಷ ತೊರೆದು ಪಕ್ಷೇತರರಾಗಿ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದರು, ಅದೇ ಕ್ಷೇತ್ರದಿಂದ ಸತತ ಆರು ಬಾರಿ ಅವರು ವಿಧಾನಸಭೆಗೆ ಆಯ್ಕೆ ಆಗಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment

ನಮ್ಮಲ್ಲಿ ಜನಪ್ರಿಯ

To Top