fbpx
ಸಮಾಚಾರ

“ಈ ಜನ್ಮದಲ್ಲಿ ರಾಹುಲ್ ಗಾಂಧಿ ಮದ್ವೆಯಾಗಲ್ಲ, ಸಿದ್ದರಾಮಯ್ಯ ಸಿಎಂ ಆಗಲ್ಲ” ಈಶ್ವರಪ್ಪ ವ್ಯಂಗ್ಯ.

ಸಿದ್ದರಾಮಯ್ಯ ಸಿಎಂ ಆಗಬೇಕು ಅಂತ ಕೂಗು ಎದ್ದಿರೋ ಬೆನ್ನಲ್ಲೇ ಮಾಜಿ ಉಪ ಮುಖ್ಯಮಂತ್ರಿ ಈಶ್ವರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ಮೂರ್ನಾಲ್ಕು ಜನ ನಾಯಕರ ಬಾಯಿಂದ ಸಿಎಂ ಆಗಬೇಕು ಅಂತ ಸಿದ್ದರಾಮಯ್ಯ ಹೇಳಿಕೆ ಕೊಡಿಸಿದ್ದಾರೆ. ಈ ಜನ್ಮದಲ್ಲಿ ರಾಹುಲ್ ಗಾಂಧಿ ಮದ್ವೆಯಾಗಲ್ಲ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲ್ಲ ಅಂತ ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ.

ಕುಂದಗೋಳ ತಾಲ್ಲೂಕಿನ ರಟ್ಟಿಗೇರಿ ಗ್ರಾಮದಲ್ಲಿ ಚುನಾವಣಾ ಪ್ರಚಾರ ನಡೆಸಿದ ವೇಳೆ ಅವರು, ಭಿಕ್ಷಕನೊಬ್ಬನ ಕಥೆ ಹೇಳಿದರು. ಅವರಂತೆಯೇ ಸಿದ್ದರಾಮಯ್ಯ ಕನಸು ಕಾಣುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು. ಈ ಜನ್ಮದಲ್ಲಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗೊಲ್ಲ, ರಾಹುಲ್ ಗಾಂಧಿ ಮದುವೆಯಾಗುವುದಿಲ್ಲ ಎಂದು ಈಶ್ವರಪ್ಪ ಗೇಲಿ ಮಾಡಿದರು.

ಮೈತ್ರಿ ಸರ್ಕಾರದ ಒಳಗೆ ಸಾಕಷ್ಟು ಭಿನ್ನಾಭಿಪ್ರಾಯಗಳಿವೆ. ಕಾಂಗ್ರೆಸ್ ಶಾಸಕರೆಲ್ಲರೂ ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿ ಎನ್ನುತ್ತಿದ್ದಾರೆ. ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆ ಎರಡೂ ಪಕ್ಷಗಳೂ ಹೇಗೆ ಕಿತ್ತಾಡುತ್ತವೆ ಎಂಬುದನ್ನು ಕಾದು ನೋಡಿ ಎಂದರು.

23ಕ್ಕೆ ಲೋಕಸಭಾ ಫಲಿತಾಂಶ ಬಂದ ಕೂಡಲೇ ರಾಜ್ಯದಲ್ಲಿ ಮೈತ್ರಿ ಸರ್ಕಾರ ಬಿದ್ದು ಹೋಗುತ್ತದೆ. ಆಗ ಕುಮಾರಣ್ಣ ನೀ ಎಲ್ಲಿದಿಯಪ್ಪ ಅಂತ ಸಿದ್ದರಾಮಯ್ಯ ಕೇಳ್ತಾರೆ. ಅದಕ್ಕೆ ಕುಮಾರಣ್ಣ, ನಾನು ರೆಸಾರ್ಟ್​ನಲ್ಲಿ ಟ್ರೀಟ್ಮೆಂಟ್ ತೆಗೆದುಕೊಳ್ತಿದ್ದೀನಿ ಅಂತಾ ಹೇಳ್ತಾರೆ ಎಂದು ವ್ಯಂಗ್ಯವಾಡಿದರು. ಮೇ 23ರಂದು ಲೋಕಸಭಾ ಚುನಾವಣೆ ಫಲಿತಾಂಶ ಬಂದ ಕೂಡಲೇ ರಾಜ್ಯದಲ್ಲಿನ ಸಮ್ಮಿಶ್ರ ಸರ್ಕಾರ ಬಿದ್ದುಹೊಗುತ್ತೆ, ನಂಜಪ್ ಅಧಿಕಾರಕ್ಕೆ ಬರುತ್ತದೆ ಎಂದು ಪುನರುಚ್ಚರಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top