fbpx
ಸಮಾಚಾರ

ರೈಲು ವಿಳಂಬದಿಂದ ನೀಟ್​ ಪರೀಕ್ಷೆಯಿಂದ ವಂಚಿತರಾದ ವಿದ್ಯಾರ್ಥಿಗಳಿಗೆ 20ರಂದು ಮರು ಪರೀಕ್ಷೆ.

ಭಾನುವಾರದಂದು ಹಂಪಿ ಎಕ್ಸ್ ಪ್ರೆಸ್ ಪ್ರಯಾಣದಲ್ಲಿ ವಿಳಂಬವಾದ ಕಾರಣ ಪರೀಕ್ಷೆ ತಪ್ಪಿಸಿಕೊಂಡಿದ್ದ ಸುಮಾರು 500 ವಿದ್ಯಾರ್ಥಿಗಳಿಗೆ ಗೂಡ್ ನ್ಯೂಸ್ ಒಂದು ಸಿಕ್ಕಿದ್ದು ಪರೀಕ್ಷೆ ಬರೆಯಲು ಮತ್ತೊಂದು ಅವಕಾಶ ನೀಡಲಾಗಿದೆ. ಕರ್ನಾಟಕದ ನೂರಾರು ವಿದ್ಯಾರ್ಥಿಗಳಿಗೆ ಮೇ 20ರಂದು ಭಾನುವಾರ ಮತ್ತೊಮ್ಮೆ ಬರೆಯುವ ಅವಕಾಶ ದೊರೆಯಲಿದೆ.

ಮೇ 20ರ ಸೋಮವಾರ ಬೆಳಗ್ಗೆ 10ರಿಂದ 1 ಗಂಟೆವರೆಗೆ ಮರು ಪರೀಕ್ಷೆ ನಡೆಸಲು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್‌ಟಿಎ) ತೀರ್ಮಾನಿಸಿದೆ. ಈ ಸಂಬಂಧ ಬೆಂಗಳೂರಿನಲ್ಲಿ ನಾಲ್ವರು ಸಮನ್ವಯಕಾರರನ್ನು (ಕೋ-ಆರ್ಡಿನೇಟರ್ಸ್‌) ನೇಮಕ ಮಾಡಲಾಗಿದ್ದು, ಪರೀಕ್ಷೆಯಿಂದ ವಂಚಿತರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ. ಈ ಅಭ್ಯರ್ಥಿಗಳಿಗೆ ಹೊಸದಾಗಿ ಪ್ರವೇಶ ಪತ್ರಗಳನ್ನು ಎನ್‌ಟಿಎ ವಿತರಣೆ ಮಾಡಲಿದೆ.

ಕಳೆದ ಭಾನುವಾರ ಮೇ 5ರಂದು ದೇಶದ್ಯಾಂತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್​ಗಳಿಗೆ ನಡೆಯುವ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೀಟ್​) ನಡೆಸಲಾಗಿತ್ತು. ಕರ್ನಾಟಕದಲ್ಲಿ ಬೆಂಗಳೂರು, ಮಂಗಳೂರು, ಕಲಬುರಗಿ ಮತ್ತು ಬೆಳಗಾವಿ ಕೇಂದ್ರಗಳಲ್ಲಿ ಏಕಕಾಲದಲ್ಲಿ ಪರೀಕ್ಷೆ ನಡೆದಿತ್ತು. ಬೆಂಗಳೂರು ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಂಡಿದ್ದ ಉತ್ತರ ಕರ್ನಾಟಕದ ವಿದ್ಯಾರ್ಥಿಗಳು ರೈಲು ವಿಳಂಬದಿಂದ ಈ ಪರೀಕ್ಷೆ ಬರೆಯುವಲ್ಲಿ ವಿಫಲರಾಗಿದ್ದರು. ಹಂಪಿ ಎಕ್ಸ್​ಪ್ರೆಸ್​ ರೈಲು ತಡವಾಗಿ ಬಂದ ಪರಿಣಾಮ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಯಿಂದ ವಂಚಿತರಾಗಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top