fbpx
ಸಮಾಚಾರ

ಕೇವಲ 10 ರೂಪಾಯಿಗೆ ಚಿಕಿತ್ಸೆ ನೀಡುತ್ತಿದ್ದ ಡಾ.ಬಾಬುರಾವ್ ವಿಧಿವಶ.

ರೋಗಿಗಳನ್ನು ಎಂತಹ ಸಂಧರ್ಭದಲ್ಲೂ ಅವರಿಗೆ ಚಿಕಿತ್ಸೆ ನೀಡಿ ಪ್ರಾಣಾಪಾಯದಿಂದ ಪಾರು ಮಾಡುತ್ತಿದ್ದ ಕೊಪ್ಪಳದ ಹಿರಿಯ ವೈದ್ಯರೊಬ್ಬರು ಶನಿವಾರ ಕೊನೆಯುಸಿರೆಳೆದಿದ್ದಾರೆ. ವಿಷ ಜಂತುಗಳ ಕಡಿತಕ್ಕೆ, ಮತ್ತು ವಿಷವನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳಲು ಪ್ರಯತ್ನಿಸಿದವರಿಗೆ ಚಿಕಿತ್ಸೆ ನೀಡಿ ಪ್ರಾಣಾಪಾಯದಿಂದ ಪಾರು ಮಾಡ್ತಿದ್ದ ಡಾ. ಪಿ. ಬಾಬುರಾವ್ ನಿನ್ನೆ ಕೊನೆಯುಸಿರೆಳೆದಿದ್ದಾರೆ. ಕೇವಲ 10 ರೂಪಾಯಿ ಪಡೆದು ಚಿಕಿತ್ಸೆ ಕೊಡ್ತಿದ್ದ ಬಾಬುರಾವ್​ ಬಡವರ ಪಾಲಿಗೆ ದೇವರೇ ಆಗಿದ್ದರು.

ಕೊಪ್ಪಳದ ಗಂಗಾವತಿ ತಾಲೂಕಿನ ಶ್ರೀರಾಮನಗರದಲ್ಲಿ ವೈದ್ಯ ವೃತ್ತಿಯನ್ನು ಆರಂಭಿಸಿದ್ದು, ಹೈದರಾಬಾದ್ ಕರ್ನಾಟಕದಲ್ಲಿ ಹೆಸರುವಾಸಿಯಾಗಿದ್ದರು. ಹೈದರಾಬಾದ್ ಕರ್ನಾಟಕ, ಉತ್ತರ ಕರ್ನಾಟಕದ ಮೂಲೆ ಮೂಲೆಯಿಂದ ಇವರ ಹತ್ತಿರ ಚಿಕಿತ್ಸೆ ಪಡೆಯಲು ಜನ ಆಗಮಿಸುತ್ತಿದ್ದರು. 1975ರಲ್ಲಿ ಶ್ರೀರಾಮನಗರಕ್ಕೆ ಆಗಮಿಸಿದ ಬಾಬುರಾವ್ ಅವರು ಅಂದಿನಿಂದ ಕೇವಲ 10 ರೂಪಾಯಿ ಮಾತ್ರ ಪಡೆದು ಚಿಕಿತ್ಸೆ ನೀಡುತ್ತಿದ್ದರು.

ಜನರು ಹುಬ್ಬಳ್ಳಿ ಧಾರವಾಡ,ರಾಯಚೂರಿನಿಂದ ಬಂದು ಇಲ್ಲಿ ಚಿಕಿತ್ಸೆ ಪಡೆದುಕೊಂಡು ಹೊಗ್ತಿದ್ರು. ಇದೀಗ ಅವರ ಅಗಲಿಕೆಯಿಂದ ಇಡೀ ಶ್ರೀರಾಮನಗರವೇ ಕಂಬನಿ‌ ಮಿಡಿಯತ್ತಿದೆ. ವ್ಯಾಪಾರಿಗಳು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಬಾಬುರಾವ್ ಅವರ ಅಂತಿಮ ಯಾತ್ರೆಯಲ್ಲಿ ಪಾಲ್ಗೊಂಳುತ್ತಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top