fbpx
ಸಮಾಚಾರ

“ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿ ಹಾಕಿದೆ” ಜೆಡಿಎಸ್ ನಾಯಕರ ವಿರುದ್ಧ ಸಿಡಿದ ಸಿದ್ದರಾಮಯ್ಯ.

ಲೋಕಸಭಾ ಚುನಾವಣೆ ಫಲಿತಾಂಶದ ಬಳಿಕ ರಾಜ್ಯದ ಮೈತ್ರಿ ಸರಕಾರದ ಅಸ್ತಿತ್ವದ ಬಗ್ಗೆ ಪ್ರಶ್ನೆಗಳು ಎದ್ದಿರುವ ನಡುವೆಯೇ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷದ ಇಬ್ಬರು ಪ್ರಮುಖ ನಾಯಕರು ನೇರಾನೇರ ವಾಕ್ಸಮರಕ್ಕೆ ಇಳಿದಿದ್ದಾರೆ. ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಅವರು, ಸಿದ್ದರಾಮಯ್ಯ ಅವರ ಹಿಂದಿನ ಸರಕಾರದ ಕಾರ್ಯ ನಿರ್ವಹಣೆಯ ಬಗ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಇದನ್ನು ಕಾಂಗ್ರೆಸ್‌ ತೀವ್ರವಾಗಿ ಆಕ್ಷೇಪಿಸಿದೆ.

ಸಿದ್ದರಾಮಯ್ಯರನ್ನ ಕಾಂಗ್ರೆಸ್​ಗೆ ಕರೆತಂದು ಸಿಎಂ ಆಗುವಂತೆ ಮಾಡಿದ್ದು ನಾನು, ಮತ್ತೊಮ್ಮೆ ಸಿಎಂ ಆಗಲಿ ಎಂದು ಕೆಲವರು ಚೇಲಾಗಿರಿ ಪ್ರದರ್ಶಿಸುತ್ತಿದ್ದಾರೆ ಎಂಬ ಹೆಚ್.ವಿಶ್ವನಾಥ್ ಹೇಳಿಕೆಗೆ ಸಿದ್ದರಾಮಯ್ಯ ಟ್ವಿಟರ್​ನಲ್ಲಿ ಉತ್ತರ ನೀಡಿದ್ದಾರೆ.

 

 

ಟ್ವೀಟ್ 1: ಜೆಡಿಎಸ್ ಅಧ್ಯಕ್ಷ ಎಚ್.ವಿಶ್ವನಾಥ್ ಹೊಟ್ಟೆಕಿಚ್ಚಿನ ಮಾತುಗಳನ್ನು ಸಮನ್ವಯ ಸಮಿತಿ ಸಭೆಯಲ್ಲಿ ಪ್ರಸ್ತಾಪಿಸುತ್ತೇನೆ. ಮೊದಲು ಜಿ.ಟಿ.ದೇವೇಗೌಡ,ಈಗ ವಿಶ್ವನಾಥ್… ಮುಂದೆ ಯಾರು ಗೊತ್ತಿಲ್ಲ. ನನ್ನನ್ನು ಗುರಿಯಾಗಿಸಿದ ಇಂತಹ ಬೇಜವಾಬ್ದಾರಿ ಹೇಳಿಕೆಗಳ ಬಗ್ಗೆ ಜೆಡಿಎಸ್ ವರಿಷ್ಠರು ಗಮನ ಹರಿಸುವುದು ಒಳಿತು.

 

 

ಟ್ವೀಟ್ 2: ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಎಚ್.ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ವಿವರವಾಗಿ ಪ್ರತಿಕ್ರಿಯಿಸಲಾರೆ. ವಿಶ್ವನಾಥ್ ಇಂತಹ ಕಿಡಿಗೇಡಿತನದ ಹೇಳಿಕೆಗಳಿಗೆ ಕುಖ್ಯಾತರು. ಅವರಿಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top