fbpx
ಸಮಾಚಾರ

ನೋಟಿಸ್​​ಗೂ ಕ್ಯಾರೇ ಎನ್ನದ ರೋಷನ್​​ ಬೇಗ್- KPCC ಏಟಿಗೆ ಎದುರೇಟು.

ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹಾಗೂ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ದ ಪಕ್ಷ ವಿರೋಧಿ ಹೇಳಿಕೆ ನೀಡಿದ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ರೋಷನ್ ಬೇಗ್ ಗೆ ಕೇಳಿ ನೋಟೀಸ್ ಜಾರಿ ಮಾಡಲಾಗಿತ್ತು. ಆದರೆ ನೋಟಿಸ್ ಗೆ ಜಗ್ಗದ ಭೇಗ್ ಕಾಂಗ್ರೆಸ್ ಗೆ ತಿರುಗೇಟು ನೀಡಿದ್ದಾರೆ.

ನೋಟಿಸ್ ಬಗ್ಗೆ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಬೇಗ್ ಕೆಪಿಸಿಸಿಗೆ ತಿರುಗೇಟು ನೀಡಿದ್ದಾರೆ. “ಸ್ವಪಕ್ಷ ನಾಯಕರ ವಿರುದ್ಧ ನಾನು ಮಾಡಿರುವ ಆರೋಪದ ಬಗ್ಗೆ ಸ್ಪಷ್ಟನೆ ನೀಡುವಂತೆ ಕಾಂಗ್ರೆಸ್​ ನೋಟಿಸ್​ ಜಾರಿಗೊಳಿಸಿದೆ. ಈ ನೋಟಿಸ್​​ಗೆ ನಾನು ಕ್ಯಾರೇ ಎನ್ನುವುದಿಲ್ಲ. ಕನಿಷ್ಠ ಪಕ್ಷ ಇದನ್ನು ಓದಲಿಕ್ಕೂ ಹೋಗುವುದಿಲ್ಲ. ನಾನು ಯಾರ ಬಗ್ಗೆ ಆರೋಪ ಮಾಡಿದ್ದೀನೋ, ಅದೇ ನಾಯಕರ ಆದೇಶದ ಮೇರೆಗೆ ನೋಟಿಸ್​​ ನೀಡಲಾಗಿದೆ. ಇದಕ್ಕೆ ನಾವು ಹೆದರುವುದಿಲ್ಲ. ನನ್ನ ಹೇಳಿಕೆಗೆ ನಾನು ಈಗಲೂ ಬದ್ದವಾಗಿದ್ದೇನೆ ” ಎಂದು ಭೇಗ್ ಟ್ವೀಟ್ ಮಾಡಿದ್ದು ಈ ಮೂಲಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯನವರಿಗೆ ಶಾಸಕ ರೋಷನ್​​ ಬೇಗ್​​​ ತಿರುಗೇಟು ನೀಡಿದ್ದಾರೆ.

 

 

 

 

ರೋಷನ್ ಹೇಳಿದ್ದು ಏನು?
ಲೋಕಸಭಾ ಚುನಾವಣಾ ಪ್ರಚಾರದ ಬಗ್ಗೆ ತೀರಾ ಅಸಮಾಧಾನ ವ್ಯಕ್ತಪಡಿಸಿದ ಬೇಗ್, ಒಂದು ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಸೋತರೆ ಅದಕ್ಕೆ ಸಿದ್ದರಾಮಯ್ಯ ಮತ್ತು ದಿನೇಶ್ ಗುಂಡೂರಾವ್ ಅವರೇ ನೇರ ಕಾರಣ.. ವೇಣುಗೋಪಾಲ್‌ ಅವರಂತಹ ಬಫೂನ್, ಸಿದ್ದರಾಮಯ್ಯ ಅವರಂತಹ ಅಹಂಕಾರಿ ಮತ್ತ ದಿನೇಶ್ ಗುಂಡೂರಾವ್ ಅವರಂತಹ ಪ್ಲಾಫ್ ಅಧ್ಯಕ್ಷರಿಂದ ಕಾಂಗ್ರೆಸ್ ಉದ್ಧಾರ ಆಗಲ್ಲ. ಚುನಾವಣಾ ನಾಯಕತ್ವ ವಹಿಸಿದ್ದ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯನವರೂ ಸಹ ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸಿಲ್ಲ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top