fbpx
ಸಮಾಚಾರ

ಸರ್ಕಾರ್ ಆಗಿ ಕನ್ನಡಕ್ಕೆ ಬಂದ್ರು ಬಾಲಿವುಡ್ ತಾರೆ ಸುನಿಲ್ ಶೆಟ್ಟಿ.

ಅಭಿನಯ ಚಕ್ರವರ್ತಿ ಬಾದ್ ಷಾ ಕಿಚ್ಚ ಸುದೀಪ್ ಅವರ ಮುಖ್ಯಭೂಮಿಕೆಯಲ್ಲಿ ಮೂಡಿಬರುತ್ತಿಯುವ ಬಹುನಿರೀಕ್ಷಿತ ಪೈಲ್ವಾನ್ ಚಿತ್ರದ ಮೇಲಿನ ಕುತೂಹಲ ದಿನೇ ದಿನೇ ಹೆಚ್ಚುತ್ತಲೇ ಇದೆ. ಕನ್ನಡವೂ ಸೇರಿ ಒಟ್ಟು 5 ಭಾಷೆಗಳಲ್ಲಿ ತಯಾರಾಗುತ್ತಿರುವ ಈ ಸಿನಿಮಾ ಬಗ್ಗೆ ಸ್ವತಃ ಕಿಚ್ಚನ ಅಭಿಮಾನಿಗಳು ತಲೆಕೆಡಿಸಿಕೊಂಡು ಕೂತಿದ್ದರೇ ಮಾಮೂಲಿ ಪ್ರೇಕ್ಷಕರಲ್ಲೂ ವಿಭಿನ್ನ ಕ್ರೇಜ್ ಹುಟ್ಟುಹಾಕುತ್ತಿದೆ. ಈಗಾಗಲೇ ಸಾಮಾಜಿಕ ಜಾಲತಾಣಗಳಲ್ಲಿ ಲೀಕ್ ಆಗಿರುವ ಚಿತ್ರದ ಮೇಕಿಂಗ್ ಸ್ಟಿಲ್ಲುಗಳೇ ಪ್ರೇಕ್ಷಕರನ್ನು ರೋಮಾಂಚನಗೊಳಿಸುತ್ತಿದೆ

ಇಂಥಾ ಪೈಲ್ವಾನ್ ಸಿನಿಮಾ ಕಡೆಯಿಂದ ಇಂದು ಸಡನ್ ಗಿಫ್ಟ್ ಒಂದು ಸಿಕ್ಕಿದೆ. ಬಾಲಿವುಡ್ ಖ್ಯಾತ ನಟ ಸುನಿಲ್ ಶೆಟ್ಟಿ ಕನ್ನಡದ ‘ಪೈಲ್ವಾನ್’ ಸಿನಿಮಾದಲ್ಲಿ ನಟಿಸುತ್ತಿರುವುದು ಎಲ್ಲರಿಗೂ ತಿಳಿದ ಸಂಗತಿ. ಸದ್ಯ ಪೈಲ್ವಾನ್ ಚಿತ್ರತಂಡ ಸಿನಿಮಾದಲ್ಲಿ ಸುನಿಲ್ ಅವರ ಲುಕ್ ಹೇಗಿರಲಿದೆ ಎಂಬ ಕುತೂಹಲಕ್ಕೆ ತೆರೆ ಎಳೆದಿದ್ದು, ನಟ ಕಿಚ್ಚ ಸುದೀಪ್ ಫೋಟೋ ಟ್ವೀಟ್ ಮಾಡಿದ್ದಾರೆ.

 

 

ಪೋಸ್ಟರ್ ನಲ್ಲಿ ಬಿಳಿಪಂಚೆ ಹಾಗೂ ಬಿಳಿ ಅಂಗಿ ತೊಟ್ಟು ರಫ್ ಅಂಡ್ ಟಫ್ ಲುಕ್​ನಲ್ಲಿ ಸುನಿಲ್ ಶೆಟ್ಟಿ ದರ್ಶನ ಕೊಟ್ಟಿದ್ದಾರೆ. ಇನ್ನು ಚಿತ್ರದಲ್ಲಿ ಸರ್ಕಾರ್ ಎಂಬ ಪಾತ್ರದಲ್ಲಿ ಸುನೀಲ್ ಶೆಟ್ಟಿ ಅಬ್ಬರಿಸಲಿದ್ದಾರೆ. ಮತ್ತೊಂದು ವಿಶೇಷ ಅಂದರೆ, ಇದು ಸುನೀಲ್ ಶೆಟ್ಟಿ ನಟನೆಯ ಮೊದಲ ಕನ್ನಡ ಸಿನಿಮಾವಾಗಿದೆ. ಅಂದಹಾಗೆ ಮೂಲತಃ ಕರ್ನಾಟಕದ ಮಂಗಳೂರು ಮೂಲದ ತುಳು ಭಾಷಿಕರಾಗಿರುವ ಸುನೀಲ್ ಶೆಟ್ಟಿ ಬಾಲಿವುಡ್ ನಲ್ಲಿ ಜನಪ್ರಿಯತೆ ಪಡೆದಿದ್ದಾರೆ. ಸದ್ಯ ಅವರ ಪಾತ್ರದ ಕುರಿತ ಹೆಚ್ಚಿನ ಮಾಹಿತಿಯನ್ನ ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಚಿತ್ರದ ಫಸ್ಟ್ ಲುಕ್ ಟ್ವೀಟ್ ಮಾಡಿರುವ ಸುನಿಲ್ ಶೆಟ್ಟಿ, ಸಂತಸ ವ್ಯಕ್ತಪಡಿಸಿದ್ದಾರೆ.

 

 

ಪೈಲ್ವಾನ್ ಬಗ್ಗೆ:
ಪೈಲ್ವಾನ್ ಚಿತ್ರದ ಬಗ್ಗೆ ಹೇಳಬೇಕೆಂದರೆ ಮುಂಬೈ ಬೆಡಗಿ ಆಕಾಂಕ್ಷ ಸಿಂಗ್ ಸುದೀಪ್’ಗೆ ನಾಯಕಿಯಾಗಿ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದು ಬಾಲಿವುಡ್ ನಟ ಸುನಿಲ್ ಶೆಟ್ಟಿ, ಕರುಣ್ ದುಹಾನ್ ಸಿಂಗ್, ಸುಶಾಂತ್ ಸಿಂಗ್, ಅವಿನಾಶ್ ಸೇರಿದಂತೆ ಹಲವಾರು ಕಲಾವಿದರು ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. RRR ಮೋಶನ್ ಪಿಕ್ಚರ್ಸ್ ಬ್ಯಾನರ್ ನಲ್ಲಿ ತಯಾರಾಗುತ್ತಿರುವ ಪೈಲ್ವಾನ್ ಚಿತ್ರವನ್ನು ನಿರ್ದೇಶಕ ಕೃಷ್ಣಾ ಅವರ ಪತ್ನಿ ಸ್ವಪ್ನ ಕೃಷ್ಣಾ ನಿರ್ಮಾಣ ಮಾಡುತ್ತಿದ್ದು ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಮತ್ತು ಕರುಣಾಕರ್ ಅವರ ಕ್ಯಾಮೆರಾ ಕೈಚಳಕ ಚಿತ್ರಕ್ಕಿರಲಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top