fbpx
ಸಮಾಚಾರ

ಮೋದಿಯನ್ನು ಅಭಿನಂದಿಸಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್.

ಲೋಕಸಭಾ ಚುನಾವಣೆ 2019ರ ಅಭೂತಪೂರ್ವ ವಿಜಯ ಸಾಧಿಸಿರುವ ನರೇಂದ್ರ ಮೋದಿ ಅವರಿಗೆ ಪಾಕಿಸ್ತಾನದ ಪ್ರಧಾನಮಂತ್ರಿ ಇಮ್ರಾನ್ ಖಾನ್ ಅವರು ಅಭಿನಂದನೇ ಸಲ್ಲಿಸಿದ್ದಾರೆ..

‘ಚುನಾವಣಾ ವಿಜಯಕ್ಕಾಗಿ ನಾನು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ, ಬಿಜೆಪಿ ಮತ್ತು ಮಿತ್ರ ಪಕ್ಷಗಳಿಗೆ ಅಭಿನಂದಿಸುತ್ತೇನೆ’ ಎಂದು ಪಾಕಿಸ್ತಾನ ಪ್ರಧಾನಮಂತ್ರಿ ಇಮ್ರಾನ್ ಖಾನ್ ಟ್ವೀಟ್ ಮಾಡಿದ್ದಾರೆ. ಅದೇ ಸಮಯದಲ್ಲಿ, ದಕ್ಷಿಣ ಏಷ್ಯಾದಲ್ಲಿ ಶಾಂತಿ ಮತ್ತು ಪ್ರಗತಿಗಾಗಿ ಪ್ರಧಾನಿ ಮೋದಿ ಅವರೊಂದಿಗೆ ಕೆಲಸ ಮಾಡುವ ಇಂಗಿತವನ್ನು ಇಮ್ರಾನ್ ಖಾನ್ ವ್ಯಕ್ತಪಡಿಸಿದ್ದಾರೆ.

 

 

ಫೆಬ್ರವರಿ 14, 2019ರಂದು ಜಮ್ಮ ಮತ್ತು ಕಾಶ್ಮೀರದ ಪುಲ್ಮಾಮಾದಲ್ಲಿ ನಡೆದ ಭಯೋತ್ವಾದಕ ದಾಳಿ ಬಳಿಕ ಭಾರತ ಹಾಗೂ ಪಾಕಿಸ್ತಾನ ಸಂಬಂಧ ಹಳಸಿತ್ತು. ಆದರೆ ಚುನಾವಣೆ ಸಮೀಪಿಸುತ್ತಿದ್ದಂತೆ, ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್, ಮತ್ತೊಮ್ಮೆ ಮೋದಿ ಪ್ರಧಾನಿಯಾಗಲಿ ಎಂದು ಬಯಸಿದ್ದರು. ಇದು ಭಾರಿ ಸುದ್ದಿಯಾಗಿತ್ತು. ಇದೀಗ ಮೋದಿ ಹಾಗೂ ಬಿಜೆಪಿ ಗೆಲುವು ಖಚಿತವಾಗುತ್ತಿದ್ದಂತೆ, ಅಭಿನಂದನೆ ಸಲ್ಲಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top