fbpx
ಸಮಾಚಾರ

ಬಿಬಿಎಂಪಿ ಮೇಯರ್, ಆಯುಕ್ತರಿಗೆ ಧನ್ಯವಾದ ಹೇಳಿದ ವೀರೇಂದ್ರ ಹೆಗ್ಗಡೆ.

ಧರ್ಮಸ್ಥಳದಲ್ಲಿ ನೀರಿನ ಅಭಾವ ನೀಗಿಸುವ ಸಲುವಾಗಿ ಬಿಬಿಎಂಪಿ ವತಿಯಿಂದ ನೀರಿನ ವ್ಯವಸ್ಥೆ ಮಾಡಿಕೊಟ್ಟಿದ್ದಕ್ಕೆ ಬಿಬಿಎಂಪಿಗೆ ಧರ್ಮಾದಿಕಾರಿ ವೀರೇಂದ್ರ ಹೆಗ್ಗಡೆ ಧನ್ಯವಾದ ತಿಳಿಸಿದ್ದಾರೆ.

ಈ ಬಗ್ಗೆ ಬಿಬಿಎಂಪಿ ಮೇಯರ್ ಗಂಗಾಂಬಿಕೆ ಹಾಗೂ ಆಯುಕ್ತ ಮಂಜುನಾಥ್ ಪ್ರಸಾದ್ ಗೆ ಪತ್ರ ಬರೆದಿರುವ ಹೆಗ್ಗಡೆ, ಕುಡಿಯುವ ನೀರನ್ನು ಪೂರೈಸಿದ್ದಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ. ಮಂಗಳವಾರ 75 ಸಾವಿರ ಲೀಟರ್ ನೀರು ಬಿಬಿಎಂಪಿ ನೌಕರರ ಸಂಘ ಧರ್ಮಸ್ಥಳಕ್ಕೆ ಕಳುಹಿಸಿತ್ತು. ಹೀಗಾಗಿ ನೀರಿನ ಸಮಸ್ಯೆಗೆ ಸ್ಪಂದಿಸಿದಕ್ಕೆ ಧರ್ಮಾಧಿಕಾರಿ ಧನ್ಯವಾದ ತಿಳಿಸಿದ್ದಾರೆ. ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿದ್ದೀರಿ. ಇದಕ್ಕೆ ನಾನು ಆಭಾರಿಯಾಗಿದ್ದೇನೆ ಎಂದಿದ್ದಾರೆ. ಅಲ್ಲದೆ ಸಮಾಜ ಸೇವೆ ಮಾಡಿದ ನಿಮಗೆ ಮಂಜುನಾಥ ಸ್ವಾಮಿ ಒಳ್ಳೆಯದನ್ನ ಮಾಡಲಿ ಎಂದು ಹರಸಿದ್ದಾರೆ.

ಧರ್ಮಸ್ಥಳದಲ್ಲಿ ನೀರಿನ ಅಭಾವವಿರುವುದರಿಂದ ಬಿಬಿಎಂಪಿ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ 75 ಸಾವಿರ ಲೀಟರ್‌ ನೀರು ಕಳುಹಿಸಿಕೊಡಲಾಗಿತ್ತು. ಬೇಸಿಗೆಯಿಂದಾಗಿ ಕುಡಿಯುವ ನೀರಿನ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿ ಭಕ್ತರಿಗೆ ಮತ್ತು ಅಡುಗೆಗೆ ಶುದ್ಧವಾದ ನೀರನ್ನು ಕಳುಹಿಸಲಾಗುತ್ತಿದೆ

ಧರ್ಮಸ್ಥಳದಲ್ಲಿ ನೀರಿನ ಅಭಾವ:
6 ದಿನಗಳ ಹಿಂದೆ ಪತ್ರಿಕಾ ಪ್ರಕಟಣೆ ಹೊರಡಿಸಿದ್ದ ಹೆಗ್ಗಡೆಯವರು, ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕೂಡ ನೀರಿನ ಅಭಾವ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ನೇತ್ರಾವತಿ ನದಿಯಲ್ಲಿ ನೀರಿನ ಹರಿವು ತೀವ್ರ ರೀತಿಯಲ್ಲಿ ಕಡಿಮೆಯಾಗುತ್ತಿದೆ. ಧರ್ಮಸ್ಥಳಕ್ಕೆ ಬರುವ ಯಾತ್ರಾರ್ಥಿಗಳ ಉಪಯೋಗಕ್ಕೆ ಅಧಿಕ ಪ್ರಮಾಣದ ನೀರು ಬೇಕಾಗುತ್ತದೆ. ಆದ್ದರಿಂದ ಭಕ್ತಾದಿಗಳು ಹಾಗೂ ಪ್ರವಾಸಿಗರು ತಮ್ಮ ಪ್ರವಾಸವನ್ನು ಕೆಲವು ದಿನಗಳ ಕಾಲ ಮುಂದೂಡಿ ಸಹಕರಿಸುವಂತೆ ಪ್ರಕಟಣೆಯಲ್ಲಿ ಮನವಿ ಮಾಡಿದ್ದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top