fbpx
ಸಮಾಚಾರ

ಸುಮಲತಾ ಬಿಜೆಪಿ ಸೇರುತ್ತಾರಾ ಎಂಬ BSY ಹೇಳಿದ್ದೇನು?

ಮಂಡ್ಯದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಗೆ ತೀವ್ರ ಹಿನ್ನಡೆಯುಂಟಾಗಿದ್ದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಗೆಲುವಿನ ನಗೆ ಬೀರಿದ್ದಾರೆ. ಸುಮಲತಾ ಅಂಬರೀಷ್‌ ಸುಮಾರು 1 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯ ಗಳಿಸಿ ನಿಖಿಲ್ ಗೆ ಸೋಲುಣಿಸಿದ್ದಾರೆ.

ಸುಮಲತಾ ಗೆಲುವಿನ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಸಂತಸ ವ್ಯಕ್ತಪಡಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿರುವ BSY ” ಸುಮಲತಾ ಮಂಡ್ಯದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ವಿರುದ್ಧ 1.25 ಮತಗಳ ಅಂತರದಲ್ಲಿ ಗೆಲುವು ಪಡೆದಿದ್ದಾರೆ. ಬಿಜೆಪಿ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದಾಗ ಆದ ಸಂತೋಷಕ್ಕಿಂತಲೂ ಸುಮಲತಾ ಅವರ ಗೆಲುವಿನ ಸುದ್ದಿ ತುಂಬಾ ಖುಷಿ ಕೊಟ್ಟಿದೆ” ಎಂದು ಹೇಳಿದರು..

ಬಿಜೆಪಿಗೆ ಬಂದರೆ ಸ್ವಾಗತ; ನಾವಾಗೇ ಅವರನ್ನು ಕರೆಯಲ್ಲ
ಇನ್ನು ಸುಮಲತಾ ಬಿಜೆಪಿಗೆ ಬರುತ್ತಾರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು “ಸುಮಲತಾ ಬಿಜೆಪಿಗೆ ಬಂದರೆ ಸ್ವಾಗತ. ಆದರೆ ನಾವಾಗಿಯೇ ಅವರನ್ನು ಬನ್ನಿ ಎಂದು ಕರೆಯಲ್ಲ” ಎಂದು ಹೇಳಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top