fbpx
ಸಮಾಚಾರ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಿಗ್ ಬಾಸ್ ಖ್ಯಾತಿಯ ‘ಜಗನ್’

ಜೋಶ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಖ್ಯಾತಿ ಮತ್ತು ಜನಪ್ರಿಯತೆ ಗಳಿಸಿದ್ದ ನಟ ಜಗನ್ (ಜಗನ್ನಾಥ್ ಚಂದ್ರಶೇಖರ್) ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಬಹುಕಾಲದ ಗೆಳತಿಯನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಜಗನ್ ಮೂರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದ ಆತ್ಮೀಯ ಗೆಳತಿ ರಕ್ಷಿತಾ ಮುನಿಯಪ್ಪ ಅವರ ಜೊತೆ ನೆನ್ನೆ ಸಾಂಸಾರಿಕ ಜೀವನಕ್ಕೆ ಕಾಲಿಟ್ಟರೆ. ಬೆಂಗಳೂರಿನ ವೆಸ್ಟ್ ಆಫ್ ಕಾರ್ಡ್ ರೋಡ್ ನಲ್ಲಿರುವ ಕನ್ವೆಂಷನ್ ಹಾಲ್‍ನಲ್ಲಿ ಈ ಜೋಡಿಯ ಮದುವೆ ನಡೆದಿದ್ದು ಗುರುಹಿರಿಯರು ನಿಶ್ಚಯಿಸಿದ್ದ ಮುಹೂರ್ತದಲ್ಲಿ ಜಗನ್ ಅವರು ಹಿಂದೂ ಸಂಪ್ರಯದಾಯದ ಪ್ರಕಾರ ಮಾಂಗಲ್ಯಧಾರಣೆ ಮಾಡಿದ್ದಾರೆ.

 

 

ದುಬೈನ ಕಾಲೇಜೊಂದರಲ್ಲಿ ರಕ್ಷಿತಾ ಮುನಿಯಪ್ಪ ವ್ಯಾಸಂಗ ಮುಗಿಸಿದ್ದು, ರಕ್ಷಿತಾ ಮತ್ತು ಜಗನ್ ಕಳೆದ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು. ತಾವು ಪ್ರೀತಿ ಮಾಡುತ್ತಿದ್ದ ಬಗ್ಗೆ ಮನೆಯಲ್ಲಿ ತಿಳಿಸಿದ್ದಾರೆ. ಇವರಿಬ್ಬರ ಪ್ರೀತಿಗೆ ಕುಟುಂಬದವರು ಸಮ್ಮತಿಸಿ ಈಗ ಎರಡು ಕುಟುಂಬದವರು ಒಪ್ಪಿ ಜಗನ್-ರಕ್ಷಿತಾ ಮದುವೆ ಮಾಡಿದ್ದಾರೆ. ಮೂರು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿ ನಿಶ್ಚಿತಾರ್ಥ ಜನವರಿ 28ಕ್ಕೆ ಈ ನಡೆದಿತ್ತು. ಮೇ26 ರಂದು ಆರತಕ್ಷತೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಸ್ನೇಹಿತರು, ಸಂಬಂಧಿಗಳು, ಕಿರುತೆರೆ ಹಾಗೂ ಚಿತ್ರರಂಗದ ಗಣ್ಯರು ಭಾಗಿಯಾಗಲಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top