fbpx
ಸಮಾಚಾರ

ಹಾಸನದ ನೂತನ ಸಂಸದ ಪ್ರಜ್ವಲ್ ರೇವಣ್ಣ ರಾಜೀನಾಮೆ: ತಾತನಿಗಾಗಿ ಗೆದ್ದ ಕ್ಷೇತ್ರದ ತ್ಯಾಗ.

ಮೈತ್ರಿ ಅಭ್ಯರ್ಥಿಯಾಗಿ ಹಾಸನದಿಂದ ಸ್ಪರ್ಧಿಸಿ ಬಿಜೆಪಿಯ ಎ.ಮಂಜು ಅವರನ್ನು ಸೋಲಿಸಿದ್ದ ಪ್ರಜ್ವಲ್​ ರೇವಣ್ಣ ಈಗ ಅಚ್ಚರಿಯ​ ಹೇಳಿಕೆ ನೀಡಿದ್ದಾರೆ. ಕಾರ್ಯಕರ್ತರು ಹಿರಿಯ ನಾಯಕರು ಆಶೀರ್ವಾದ ಪಡೆದು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದಿದ್ದಾರೆ.

ಸಂಸದರಾಗಿ ಆಯ್ಕೆಯಾದ ಬಳಿಕ ಪ್ರಜ್ವಲ್ ರೇವಣ್ಣ ಮೊದಲ ಸುದ್ದಿಗೋಷ್ಟಿ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಪ್ರಜ್ವಲ್ ರೇವಣ್ಣ ರಾಜೀನಾಮೆ ವಿಚಾರವಾಗಿ ಮಾತನಾಡಿದ್ದಾರೆ. ರಾಜೀನಾಮೆ ವಿಚಾರ ಪ್ರಸ್ತಾಪಿಸದ ಪ್ರಜ್ವಲ್ ರೇವಣ್ಣ ದೇವೇಗೌಡರು ಸೋತಿರುವುದಕ್ಕೆ ನನಗೆ ನೋವಾಗಿದೆ. ಹೋರಾಟವೇ ಜೀವನ ಎಂದುಕೊಂಡಿದ್ದ ಗೌಡರಿಗೆ ಸೋಲಾಗಿದೆ. ನಾನು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಮತ್ತೆ ದೇವೇಗೌಡರಿಗೆ ಶಕ್ತಿ ತುಂಬುವುದು ನನ್ನ ಉದ್ದೇಶ. ಹಾಸನ ಜಿಲ್ಲೆಯ ಜನರು ತಪ್ಪು ತಿಳಿಯಬಾರದು. ನಾನು ರಾತ್ರಿ ಇಡೀ ಚಿಂತಿಸಿ ಒಂದು ನಿರ್ಧಾರಕ್ಕೆ ಬಂದಿದ್ದೇನೆ. ರಾಜೀನಾಮೆ ಬಗ್ಗೆ ಯಾರೊಂದಿಗೂ ಚರ್ಚೆ ಮಾಡಿಲ್ಲ ಇದು ನನ್ನ ಮನಸ್ಸಿನ ನಿರ್ಧಾರ ಎಂದಿದ್ದಾರೆ

ತಾತ ದೇವೇಗೌಡರು ಮೊಮ್ಮಗ ಪ್ರಜ್ವಲ್‌ಗಾಗಿ ತಮ್ಮ ಭದ್ರಕೋಟೆ ಹಾಸನ ಕ್ಷೇತ್ರವನ್ನು ಬಿಟ್ಟುಕೊಟ್ಟು ತಾವು ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಆದರೆ ಜನತೆ ದೇವೇಗೌಡರಿಗೆ ಸೋಲುಣಿಸಿದ್ದಾರೆ. ಬಹಳ ನಿರೀಕ್ಷೆ ಇಟ್ಟುಕೊಂಡಿದ್ದ ಮಂಡ್ಯದಲ್ಲೂ ಜೆಡಿಎಸ್ ಪ್ರತಿಷ್ಠೆ ಮಣ್ಣುಪಾಲಾಗಿದೆ. ಹೀಗಾಗಿ ತಾವು ಗೆದ್ದರೂ ಸಂಭ್ರಮಿಸಲಾಗದ ಸ್ಥಿತಿ ಪ್ರಜ್ವಲ್ ರೇವಣ್ಣ ಅವರದ್ದಾಗಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top