fbpx
ಸಮಾಚಾರ

52 ವರ್ಷಗಳ ನಂತರ ಇತಿಹಾಸ ಸೃಷ್ಠಿಸಿದ ಸುಮಲತಾ.

ಮಂಡ್ಯದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಪುತ್ರ ನಿಖಿಲ್ ಗೆ ತೀವ್ರ ಹಿನ್ನಡೆಯುಂಟಾಗಿದ್ದು ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಷ್ ಗೆಲುವಿನ ನಗೆ ಬೀರಿದ್ದಾರೆ. ಮುಖ್ಯಮಂತ್ರಿ ಪುತ್ರನೇ ಅಭ್ಯರ್ಥಿಯಾದ ನಂತರ ಇಡೀ ಸರಕಾರವೇ ಮಂಡ್ಯದಲ್ಲಿ ಪ್ರಚಾರಕ್ಕೆ ನಿಂತಿತು. ಖುದ್ದು ಎಚ್‌ಡಿ ಕುಮಾರಸ್ವಾಮಿ ಇಡೀ ಕ್ಷೇತ್ರದ ಉಸ್ತುವಾರಿ ವಹಿಸಿಕೊಂಡು ಪ್ರಚಾರ ನಡೆಸಿದರು. ಎಲ್ಲ ಸವಾಲುಗಳನ್ನು ಮೆಟ್ಟಿ ನಿಂತ ಸುಮಲತಾ ಅಂಬರೀಷ್‌ ಸುಮಾರು 90 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯ ಗಳಿಸಿ ನಿಖಿಲ್ ಗೆ ಸೋಲುಣಿಸಿದ್ದಾರೆ.

ಹೈವೋಲ್ಟೇಜ್ ಕಣದಲ್ಲಿ ಅಭೂತಪೂರ್ವ ಜಯ ಸಾಧಿಸುವುದಲ್ಲದೆ ಸುಮಲತಾ ತಾನು ಚುನಾವಣೆಯಲ್ಲಿ ಗೆಲ್ಲುವ ಮೂಲಕ 52 ವರ್ಷಗಳ ನಂತರ ಪಕ್ಷೇತರ ಅಭ್ಯರ್ಥಿಯೊಬ್ಬರು ರಾಜ್ಯದಿಂದ ಸಂಸತ್​ಗೆ ಪ್ರವೇಶಿಸಲು ಸಿದ್ಧರಾದಂತಾಗಿದೆ.. ಕರ್ನಾಟಕದಿಂದ ಪಕ್ಷೇತರರಾಗಿ ಸ್ಪರ್ಧಿಸಿ ಸಂಸತ್ತಿಗೆ ಆಯ್ಕೆಯಾದವರ ಪೈಕಿ ಸುಮಲತಾ ಮೂರನೇಯವರು. ಆದರೆ, ಕಳೆದ 52 ವರ್ಷಗಳ ಚುನಾವಣಾ ಇತಿಹಾಸದಲ್ಲಿ ಪಕ್ಷೇತರವಾಗಿ ನಿಂತು ಗೆದ್ದ ಮೊಟ್ಟ ಮೊದಲ ಮಹಿಳಾ ಅಭ್ಯರ್ಥಿ ಎಂಬ ಹೆಗ್ಗಳಿಕೆ ಪಡೆದುಕೊಂಡಿದ್ದಾರೆ.

ಇದಕ್ಕೂ ಮುನ್ನ ಮೈಸೂರು ರಾಜ್ಯವಿದ್ದಾಗ ದುಬೇ ರಾಜರಾಮ್ ಗಿರಿಧರ್ ಲಾಲ್ ಎಂಬುವರು ಬಿಜಾಪುರ ಉತ್ತರ ಲೋಕಸಭಾ ಕ್ಷೇತ್ರದಿಂದ 1957ರಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 1967ರಲ್ಲಿ ದಿನಕರ ದೇಸಾಯಿ ಅವರು ಕೆನರಾ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಸುಮಲತಾ ಅವರ ವಿಚಾರಕ್ಕೆ ಬಂದರೆ ಪಕ್ಷೇತರ ಅಭ್ಯರ್ಥಿಯಾಗಿ ಕರ್ನಾಟಕದಿಂದ ಸಂಸತ್ ಪ್ರವೇಶಿಸುತ್ತಿರುವ ಮೊದಲ ಮಹಿಳಾ ಅಭ್ಯರ್ಥಿಯಾಗಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top