fbpx
ಸಮಾಚಾರ

ನಿಖಿಲ್​ ನಿಜಕ್ಕೂ ಕುಡಿದು ರಂಪಾಟ ಮಾಡಿದ್ದರೇ? ವೈರಲ್​ ಆದ ಸುದ್ದಿಯ ಅಸಲಿಯತ್ತೇನು?

ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸೋಲನುಭವಿಸಿದ ಬೇಸರದಲ್ಲಿ ಮೈತ್ರಿ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ಮೈಸೂರಿನ ಹೋಟೆಲ್​ ಒಂದರಲ್ಲಿ ಕುಡಿದು ರಂಪಾಟ ಮಾಡಿದ್ದರು ಎಂದು ಕನ್ನಡದ ದಿನಪತ್ರಿಕೆಯೊಂದರಲ್ಲಿ ಪ್ರಕಟವಾದ ಸುದ್ದಿ ಸತ್ಯಕ್ಕೆ ದೂರವಾಗಿದ್ದು ಕಪೋಲಕಲ್ಪಿತ ಎಂದು ಸ್ವತಃ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

 

 

ಈ ಬಗ್ಗೆ ತಮ್ಮ ಅಧಿಕೃತ ಟ್ವಿಟರ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ “ಕನ್ನಡಪತ್ರಿಕೆಯೊಂದು ಇಂದು ನಿಖಿಲ್ ಕುಮಾರಸ್ವಾಮಿ ಕುರಿತು ಪ್ರಕಟಿಸಿದ ಸುದ್ದಿ ಅವಾಸ್ತವಿಕ ಹಾಗೂ ಕಪೋಲಕಲ್ಪಿತ. ನಿಖಿಲ್ ಚಾರಿತ್ರ್ಯ ವಧೆ ಮಾಡುವ ಈ ಸುದ್ದಿಯಿಂದ ಒಬ್ಬ ತಂದೆಯಾಗಿ ಅನುಭವಿಸಿದ ನೋವನ್ನು ಸಂಪಾದಕರ ಗಮನಕ್ಕೆ ತಂದಿದ್ದೇನೆ. ಮಾಧ್ಯಮಗಳು ಇಂಥ ಸುಳ್ಳುಸುದ್ದಿಗಳ ಮೂಲಕ ಭಾವನೆಗಳೊಂದಿಗೆ ಚೆಲ್ಲಾಟವಾಡದಿರಿ ಎನ್ನುವುದು ನನ್ನ ಕಳಕಳಿಯ ಮನವಿ,” ಎಂದು ಹೇಳಿದ್ದಾರೆ.

ಪತ್ರಿಕೆ ಪ್ರಕಟಿಸಿದ ಸುದ್ದಿ ಏನು?
“ಚುನಾವಣೆಯಲ್ಲಿ ಸೋತ ನಂತರ ನಿಖಿಲ್​ ಮೈಸೂರಿನ ರ್ಯಾಡಿಸನ್​ ಬ್ಲೂ ಹೋಟೆಲ್​ನಲ್ಲಿ ತಂಗಿದ್ದರು. ಈ ವೇಳೆ ಸೋಲಿನ ಬೇಸರದಿಂದ ಜೋರಾಗಿ ಗಲಾಟೆ-ರಂಪಾಟ ಮಾಡಿದ್ದರು. ಈ ವೇಳೆ ಹೋಟೆಲ್​ ಮ್ಯಾನೇಜರ್​ ಹಾಗೂ ಸಿಬ್ಬಂದಿ ಎಷ್ಟೇ ಸಮಾಧಾನ ಪಡಿಸಿದರೂ ಅವರ ವಿರುದ್ಧವೂ ವಾಗ್ದಾಳಿ ನಡೆಸಿ ಗಲಾಟೆ ಮಾಡಿದ್ದರು.​ ಅಜ್ಜ ದೇವೇಗೌಡರ ವಿರುದ್ಧವೂ ಅವರು ಕೂಗಾಡಿದ್ದರು,” ಎಂದು ಪತ್ರಿಕೆಯೊಂದು ಸುದ್ದಿ ಪ್ರಕಟಿಸಿತ್ತು.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸರು “ಆ ರೀತಿ ಘಟನೆಯೇ ನಡೆದಿಲ್ಲ ಎಂದು ಹೋಟೆಲ್​ನವರೇ ಸ್ಪಷ್ಟನೆ ನೀಡಿದ್ದಾರೆ. ಈ ಸುದ್ದಿಯಲ್ಲಿ ಹುರುಳಿಲ್ಲ. ಸುಳ್ಳು ಸುದ್ದಿಯನ್ನು ಪ್ರಕಟಿಸಲಾಗಿದೆ,” ಎಂದು ಸ್ಪಷ್ಟನೆ ನೀಡಿದ್ದಾರೆ. “

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top