fbpx
ಸಮಾಚಾರ

“ಮಿಥುನ್‌ ರೈ ತಲೆ ತೆಗೆಯುತ್ತೇವೆ” ಬಜರಂಗದಳ ಕಾರ್ಯಕರ್ತರಿಂದ ಬಹಿರಂಗ ಬೆದರಿಕೆ- ವಿಡಿಯೋ ವೈರಲ್.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಗೆದ್ದ ನಂತರ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಿಥುನ್ ರೈಗೆ ಬಹಿರಂಗ ಜೀವ ಬೆದರಿಕೆ ಹಾಕಿದ ಘಟನೆ ನಡೆದಿರುವ ಬಗ್ಗೆ ತಡವಾಗಿ ಬೆಳಕಿಗೆ ಬಂದಿದೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಿಥುನ್ ರೈಗೆ ಬಹಿರಂಗ ಜೀವ ಬೆದರಿಕೆ ಹಾಕಿದ ಘಟನೆ ನಡೆದಿರುವ ಬಗ್ಗೆ ತಡವಾಗಿ ಬೆಳಕಿಗೆ ಬಂದಿದೆ.

ಬಾವುಟ ಹಿಡಿದು ತಲೆಗೆ ಕೇಸರಿ ಪಟ್ಟಿ ಕಟ್ಟಿಕೊಂಡಿದ್ದ ಯುವಕನೊಬ್ಬ ಮಿಥುನ್‌ ರೈ ಅವರನ್ನು ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ. ಅಲ್ಲದೆ “ಭಜರಂಗದಳವನ್ನು ನಿಷೇಧಿಸುವ ಮಾತೆತ್ತಿದರೆ, ಕೈ, ಕಾಲು ಇರಲ್ಲ, ಮತ್ತೂ‌ ಮೀರಿದರೆ ತಲೆಯೂ ಇರಲ್ಲ” ಎನ್ನುವ ಬೆದರಿಕೆಯ ಘೋಷಣೆ ಕೂಗಿದ್ದಾರೆ. ನಡುಬೀದಿಯಲ್ಲಿ ಹೀಗೆ ಘೋಷಣೆ ಹಾಕಿದ್ದನ್ನು ಸಾರ್ವಜನಿಕರು ವಿಡಿಯೋ ಮಾಡಿದ್ದು ಈಗ ವೈರಲ್ ಆಗಿದೆ. ಈ ಕುರಿತು ಭಾರೀ ಆಕ್ರೋಶ ವ್ಯಕ್ತವಾಗುತ್ತಿದ್ದು ಬೆದರಿಕೆ ಒಡ್ಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಪೊಲೀಸರನ್ನು ಒತ್ತಾಯಿಸಲಾಗಿದೆ.

ಈ ಹಿಂದೆ ಚುನಾವಣೆ ಸಂದರ್ಭ ಮಿಥುನ್ ರೈ ಭಾಷಣ ಮಾಡುತ್ತಾ ತಾನು ಗೆದ್ದು ಬಂದಲ್ಲಿ ಬಜರಂಗದಳದ ಹುಟ್ಟಡಗಿಸುತ್ತೇನೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ಸಂಘಟನೆಯನ್ನು ನಿಷೇಧಿಸುತ್ತೇವೆಂದು ಹೇಳಿದ್ದರು. ಈ ವಿಚಾರ ಹಿಂದೂ ಸಂಘಟನೆಗಳ ಆಕ್ಷೇಪಕ್ಕೆ ಕಾರಣವಾಗಿತ್ತು. ಇದನ್ನೇ ತಮ್ಮ ವಿಜಯೋತ್ಸವ ಸಂದರ್ಭದಲ್ಲಿ ಬಳಸಿಕೊಂಡ ಕಾರ್ಯಕರ್ತರು ಮಿಥುನ್ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

 

 

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top