fbpx
ಸಮಾಚಾರ

ಮಂಡ್ಯಕ್ಕೆ ಕಾವೇರಿ ನೀರಿನ್ನು ಹರಿಸಲಿ ಎಂದಿದ್ದ ಜೆಡಿಎಸ್​ ಶಾಸಕನ ಸವಾಲು ಸ್ವೀಕರಿಸಿದ ಸುಮಲತಾ.

ಮಂಡ್ಯ ಜಿಲ್ಲೆಯ ನೂತನ ಸಂಸದೆಯಾಗಿ ಆಯ್ಕೆಯಾಗಿರುವ ಸುಮಲತಾ ಅಂಬರೀಶ್​ ಅವರಿಗೆ ಜೆಡಿಎಸ್​ ಶಾಸಕರೊಬ್ಬರು ಹೊಸ ಜವಾಬ್ದಾರಿಯನ್ನು ವಹಿಸಿದ್ದಾರೆ. ಶ್ರೀರಂಗಪಟ್ಟಣದ ಜೆಡಿಎಸ್​ ಶಾಸಕ ರವೀಂದ್ರ ಶ್ರೀಕಂಠಯ್ಯ ‘ಮಂಡ್ಯ ಜಿಲ್ಲೆಯ ನಾಲೆಗಳಿಗೆ ನೀರು ಹರಿಸುವ ಹೊಣೆ ಸುಮಲತಾ ಅವರದ್ದು’ ಎಂಬ ಹೇಳಿಕೆ ನೀಡಿದ್ದಾರೆ.

ರವೀಂದ್ರ ಶ್ರೀಕಂಠಯ್ಯ ಹಾಕಿರುವ ಸವಾಲನ್ನು ಮಂಡ್ಯ ಕ್ಷೇತ್ರದ ನೂತನ ಸಂಸದೆ ಸುಮಲತಾ ಅಂಬರೀಶ್ ಸ್ವೀಕರಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪರ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸುಮಲತಾ ಅಂಬರೀಶ್ “ಕೆಲಸದ ವಿಚಾರದಲ್ಲಿ ಮಂಡ್ಯ ಜಿಲ್ಲೆಯ ರೈತರಿಗೆ ನಾನು ಮೊದಲು ಆದ್ಯತೆ ನೀಡುತ್ತೇನೆಂದು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇನೆ. ನಾಲೆಗಳಿಗೆ ನೀರು ಬಿಡುವ ಕುರಿತಾಗಿ ಎಲ್ಲರ ಮಾರ್ಗದರ್ಶನ ಪಡೆದುಕೊಂಡು ಕೆಲಸ ಮಾಡುತ್ತೇನೆ. ರೈತರ ಬೆಳೆಗಳಿಗೆ ಸರಿಯಾದ ಸಮಯದಲ್ಲಿ ನೀರು ಹರಿಸೋದು ನನ್ನ ಮೊದಲ ಕರ್ತವ್ಯವಾಗಿದೆ” ಎಂದು ಹೇಳಿದ್ದಾರೆ .

ಇದೇ ವೇಳೆ ಬಿಜೆಪಿ ಸೇರ್ಪಡೆಯ ಕುರಿತು ಮಾತನಾಡಿದ ಸುಮಲತಾ ಅಂಬರೀಶ್, “ಮಂಡ್ಯದ ಪ್ರಜ್ಞಾವಂತ ಮತದಾರರಿಂದ ಇದು ಸಾಧ್ಯವಾಗಿದೆ. ನನ್ನ ಗೆಲುವಿಗೆ ಎಲ್ಲ ಪಕ್ಷದವರೂ ಸಹಕಾರವಿದೆ. ಬಿಜೆಪಿ ಅಭ್ಯರ್ಥಿಯನ್ನು ನಿಲ್ಲಿಸದೇ ಸಹಕರಿಸಿದೆ. ಕ್ಷೇತರ ಅಭ್ಯರ್ಥಿಯಾಗಿ ಗೆದ್ದು ಬಿಜೆಪಿಗೆ ಸೇರ್ಪಡೆಗೊಳ್ಳುವುದಕ್ಕೆ ಅವಕಾಶವಿಲ್ಲ. ಆದರೆ, ನಿರ್ಧಾರಗಳಿಗೆ ಬಾಹ್ಯವಾಗಿ ಬೆಂಬಲಿಸಬಹುದು. ಮಂಡ್ಯ ಅಭಿವೃದ್ಧಿಗೆ ಯಾವುದು ಒಳಿತು ಎಂಬುದನ್ನು ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಸ್ಪಷ್ಟಪಡಿಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top