fbpx
ಸಮಾಚಾರ

ಭಿಕ್ಷೆ ಬೇಡಿ ತನ್ನ ನಿಶ್ಶಕ್ತ ತಾಯಿಯನ್ನು ಸಲಹುತ್ತಿರುವ 3 ವರ್ಷದ ಮಗು- ರಕ್ಷಣೆಗೆ ಜಿಲ್ಲಾಡಳಿತ ಕ್ರಮ.

ಪುಟ್ಟ ಕಂದಮ್ಮಗಳನ್ನು ತಾಯಿ ಆರೈಕೆ ಮಾಡುವುದು ಸ್ವಾಭಾವಿಕ.. ಆದರೆ ಪ್ರಪಂಚದ ಪರಿವಿಯೇ ಇಲ್ಲದ 3 ವರ್ಷದ ಮಗುವೊಂದು ಭಿಕ್ಷೆ ಬೇಡಿ, ಕಂಡವರ ಬಳಿ ಆಹಾರ ಬೇಡಿ ಪಡೆದು ತನ್ನ ಅನಾರೋಗ್ಯ ತಾಯಿಯನ್ನು ಆರೈಕೆ ಮಾಡುತ್ತಿದೆ. ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ಕಳೆದ 4 ದಿನದಿಂದ ಈ ದೃಶ್ಯ ಅಲ್ಲಿದ್ದವರ ಮನಕಲಕುವಂತೆ ಮಾಡುತ್ತಿದೆ. ಇದೀಗ ಜಿಲ್ಲಾಡಳಿತ ಮಗುವಿನ ರಕ್ಷಣೆಗೆ ಕ್ರಮ ಕೈಗೊಂಡಿದೆ.

ಕುರಿತು ಪತ್ರಿಕೆಗಳಲ್ಲಿ ಪ್ರಕಟವಾದ ವರದಿಯನ್ನು ಗಮನಿಸಿದ ಸಿಎಂ ಆ ಮಹಿಳೆಯ ಹಾಗೂ ಬಾಲಕಿಯ ರಕ್ಷಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದರು.. ಅದರಂತೆ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ಮಹಿಳೆಗೆ ಸೂಕ್ತ ಚಿಕಿತ್ಸೆ ಕೊಡಿಸಿ ಸ್ವಾಧಾರ ಕೇಂದ್ರಕ್ಕೆ ಸೇರಿಸಲು ಕ್ರಮಕೈಗೊಂಡಿದ್ದಾರೆ.

ಮಹಿಳಾ‌ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಈರಣ್ಣ ಪಂಚಾಳ್ ಸೇರಿದಂತೆ ಇತರರು ಆಸ್ಪತ್ರೆಗೆ ಭೇಟಿ ನೀಡಿ ತಾಯಿಗೆ ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದ್ದಾರೆ. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯವರು ಮಗುವಿಗೆ ತಾತ್ಕಾಲಿಕವಾಗಿ ಫಾದರ್ ಸಂಸ್ಥೆಯಲ್ಲಿ ವ್ಯವಸ್ಥೆ ಕಲ್ಪಿಸಿದ್ದಾರೆ.

ಏನಿದು ಘಟನೆ:
ಕಾರಟಗಿ ತಾಲೂಕಿನ ಸಿದ್ದಾಪುರದ ದುರ್ಗಮ್ಮ ಎಂಬುವರು ಕಳೆದ ನಾಲ್ಕು ದಿನಗಳ ಹಿಂದೆ ತಲೆ ನೋವು ಹಾಗೂ ಹೊಟ್ಟೆ ನೋವು ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ದುರ್ಗಮ್ಮ ಅವರ ಪತಿ ಅರ್ಜುನ್ ತಮ್ಮ ಪತ್ನಿಯನ್ನು ಆಸ್ಪತ್ರೆಗೆ ಸೇರಿಸಿದ್ದರು. ನಾಳೆ ಬರುತ್ತೇನೆ ಎಂದು ಹೇಳಿ 3 ವರ್ಷದ ಮಗಳು ಭಾಗ್ಯಶ್ರೀಯನ್ನು ಜೊತೆಗೆ ಬಿಟ್ಟು ಹೋಗಿದ್ದನು. ಅದರೆ, ಆಸ್ಪತ್ರೆಯಲ್ಲಿ ಪತ್ನಿ, ಮಗಳನ್ನು ಬಿಟ್ಟು ಹೋದ ಅರ್ಜುನ್ ಮತ್ತೆ ವಾಪಸ್ಸು ಬರಲೇ ಇಲ್ಲ. ಹೀಗಾಗಿ ಅಸ್ವಸ್ಥ ತಾಯಿಗೆ ಬಾಲಕಿ ಭಾಗ್ಯಶ್ರೀ ಒಬ್ಬಂಟಿಯಾದ ಆಸರೆಯಾಗಿದ್ದಳು.

ಭಾಗ್ಯಶ್ರೀ ಆಸ್ಪತ್ರೆಯ ಆವರಣ ಸುತ್ತಮುತ್ತ ಭಿಕ್ಷೆ ಬೇಡುತ್ತಿದ್ದಾಳೆ. ಬಳಿಕ ಬಂದ ಹಣದಲ್ಲಿ ತಾಯಿಗೆ ಬೇಕಾದ ಎಳನೀರು, ಹಾಲು ಇನ್ನಿತರ ಪದಾರ್ಥಗಳನ್ನು ತಂದು ಕೊಡುತ್ತಿದ್ದಾಳೆ. ಊಟ ಮಾಡಿಸುವುದಲ್ಲದೇ ತಾಯಿಯ ತಲೆ ಬಾಚುವುದು, ಸ್ವಚ್ಛಗೊಳಿಸುವ ಕೆಲಸ ಕೂಡ ಭಾಗ್ಯಶ್ರೀ ಮಾಡುತ್ತಿದ್ದಾಳೆ. ತೀವ್ರ ಮಾನಸಿಕ ಖಿನ್ನತೆಗೆ ಒಳಗಾಗಿರುವ ತನ್ನ ತಾಯಿಗೆ ಭಿಕ್ಷೆ ಬೇಡಿ ದಿನನಿತ್ಯ ಊಟ ಮಾಡಿಸುವ ದೃಶ್ಯ ನೋಡುಗರ ಕಣ್ಣಂಚಿನಲ್ಲಿ ನೀರು ತರಿಸುತ್ತಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top