fbpx
ಸಮಾಚಾರ

ರಜಿನಿಕಾಂತ್ ಪ್ರಕಾರ ಈ ಕಾರಣಕ್ಕಾಗಿ ರಾಹುಲ್ ರಾಜೀನಾಮೆ ನೀಡಬಾರದಂತೆ.

ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಅನುಭವಿಸಿದ್ದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರಕ್ಕೆ ಮುಂದಾಗಿದ್ದಾರೆ. ಇದು ಸೂಕ್ತ ಕ್ರಮವಲ್ಲ. ಪ್ರಜಾಪ್ರಭುತ್ವದಲ್ಲಿ ಬಲಿಷ್ಠ ಸರ್ಕಾರವಷ್ಟೇ ಅಲ್ಲ, ಪ್ರಬಲ ವಿಪಕ್ಷದ ಅಗತ್ಯವೂ ಇದೆ ಎಂದು ಖ್ಯಾತ ಸೂಪರ್ ಸ್ಟಾರ್ ನಟ ರಜನಿಕಾಂತ್ ಹೇಳಿದ್ದಾರೆ.

ಇತ್ತೀಚೆಗಷ್ಟೇ ತಮ್ಮದೇ ನೂತನ ಪಕ್ಷದ ಮೂಲಕ ರಾಜಕೀಯಕ್ಕೆ ಪ್ರವೇಶ ಮಾಡಿರುವ ರಜನಿಕಾಂತ್ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಬೆನ್ನಿಗೆ ನಿಂತಿದ್ದು, ಚುನಾವಣೆಯಲ್ಲಿ ಸೋತ ಮಾತ್ರಕ್ಕೆ ರಾಹುಲ್ ಗಾಂಧಿ ರಾಜಿನಾಮೆ ನಿರ್ಧಾರ ತಳೆಯುವುದು ಸರಿಯಲ್ಲ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರು ತಾವು ಸಮರ್ಥ ನಾಯಕರು ಎಂಬುದನ್ನು ಸಾಬೀತು ಮಾಡಬೇಕು. ಈ ನಿಟ್ಟಿನಲ್ಲಿ ನಡೆಯಬೇಕೇ ಹೊರತು ರಾಜೀನಾಮೆ ನೀಡಬಾರದು ಎಂದು ಕಿವಿಮಾತು ಹೇಳಿದ್ದಾರೆ.

 

 

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top