fbpx
ಸಮಾಚಾರ

“ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ” ಮಂಡ್ಯದಲ್ಲಿ ರೈತರ ಪ್ರತಿಭಟನೆ.

ತಮಿಳುನಾಡಿಗೆ 9.19 ಟಿಎಂಸಿ ಕಾವೇರಿ ‌ನೀರು ಬಿಡುಗಡೆ ಮಾಡುವಂತೆ ಕಾವೇರಿ ಪ್ರಾಧಿಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಜಿಲ್ಲಾ ರೈತಸಂಘದ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ರೈತಸಂಘ, ಕನ್ನಡಸೇನೆ ಕಾರ್ಯಕರ್ತರು ನಗರದ ವಿಶ್ವೇಶ್ವರಯ್ಯ ಪ್ರತಿಮೆ ಎದುರು ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಜನ–ಜಾನುವಾರುಗಳಿಗೆ ನೀರು ಬಿಡುವಂತೆ ಒತ್ತಾಯ ಮಾಡಿದ್ದೇವೆ. ಆದರೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ ನೀರು ಹರಿಸುವಂತೆ ತಿಳಿಸಿದೆ. ಸಂಕಷ್ಟ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ ನೀರು ಬಿಟ್ಟರೆ ಜಿಲ್ಲೆಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದರಿಂದ ಕೆಲ ಸಮಯ ಹೆದ್ದಾರಿ ಸಂಚಾರ ಅಸ್ತವ್ಯಸ್ಥಗೊಂಡಿತ್ತು. ಬಳಿಕ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ. ಇನ್ನು ಪಾಂಡವಪುರ, ಶ್ರೀರಂಗಪಟ್ಟಣದಲ್ಲೂ ಕೂಡ ರೈತರು ಪ್ರತಿಭಟನೆ ನಡೆಸಿದರು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top