fbpx
ಸಮಾಚಾರ

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಮೀಸಲಾತಿ: ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಹಾಗೂ ಸರ್ಕಾರಿ ಸ್ವಾಮ್ಯದ ಎಲ್ಲ ಉದ್ದಿಮೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿ ನೀಡಬೇಕು ಎಂಬ ಕೂಗು ಪದೇ ಪದೇ ಕೇಳಿಬರುತ್ತಿರುತ್ತದೆ. ಇದೀಗ ಅದಕ್ಕೆ ಸಂಭಂದಿಸಿದಂತೆ ಸಿಹಿ ಸುದ್ದಿ ಸಿಕ್ಕಿದೆ. ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದಂತೆ ಕೊನೆಗೂ ಅಧಿಸೂಚನೆ ಹೊರಡಿಸಲಾಗಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಿರಂತರ ಪ್ರಯತ್ನದ ಬಳಿಕ ಸರೋಜಿನಿ ಮಹಿಷಿ ವರದಿಯನ್ನು ಪರಿಷ್ಕರಿಸಿ ಸರ್ಕಾರಕ್ಕೆ ಸಲ್ಲಿಸಿತ್ತು. ಅದರ ಆಧಾರದ ಮೇಲೆ ನಿಯಮಾವಳಿಗಳನ್ನು ಸಿದ್ಧಪಡಿಸಿ ಸಾರ್ವಜನಿಕ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿದೆ.

ಮುಂಬರುವ ಅಧಿವೇಶನದಲ್ಲಿ ವಿಧೇಯಕ ಮಂಡಿಸಲಾಗುವುದು ಎಂಬ ಮಾಹಿತಿ ಲಭ್ಯವಾಗಿದೆ. ಸರ್ಕಾರದಿಂದ ವಿವಿಧ ಸೌಲಭ್ಯಗಳು, ತೆರಿಗೆ ಸೇರಿ ವಿವಿಧ ರಿಯಾಯ್ತಿಗಳನ್ನು ಪಡೆಯುತ್ತಿದ್ದರೆ ಅಂತಹ ಖಾಸಗಿ ಉದ್ದಿಮೆಗಳು ಅರ್ಹತೆ, ಅನುಭವ ಹಾಗೂ ಇತರೆ ಅಗತ್ಯಗಳಿಗೆ ಒಳಪಟ್ಟು 15 ವರ್ಷಗಳಿಂದ ಕರ್ನಾಟಕದಲ್ಲಿ ವಾಸವಾಗಿರುವ, ಕನ್ನಡವನ್ನು ಓದಲು ಮತ್ತು ಬರೆಯಲು ಸಮರ್ಥವಾಗಿರುವವರನ್ನು ಮಾತ್ರವೇ ನೇಮಕಾತಿ ಮಾಡಿಕೊಳ್ಳಬೇಕೆಂದು ಹೇಳಿದೆ.

ಇನ್ನು ಸರ್ಕಾರದಿಂದ ಯಾವುದೇ ಸೌಲಭ್ಯ ಪಡೆಯದಿರುವ ಉದ್ದಿಮೆಗಳು 10 ವರ್ಷದಿಂದ ಕರ್ನಾಟಕದಲ್ಲಿ ವಾಸವಾಗಿರುವ ಕನ್ನಡವನ್ನು ಓದಲು ಮತ್ತು ಬರೆಯಲು ಬರುವ ಕನ್ನಡಿಗರನ್ನು ಮಾತ್ರವೇ ನೇಮಕ ಮಾಡಿಕೊಳ್ಳಬೇಕೆಂದು ಹೇಳಿದೆ. ಕೈಗಾರಿಕಾ ಸಂಸ್ಥೆಗಳಲ್ಲಿ ಅಂಗವಿಕಲರಿಗೆ ಹುದ್ದೆಗಳಲ್ಲಿ ಶೇ. 5 ಮೀಸಲಾತಿ ನೀಡುವುದಕ್ಕೂ ಅವಕಾಶ ಕಲ್ಪಿಸಲಾಗಿದೆ.

ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ನೀಡಲು ಸರ್ಕಾರ ಕರ್ನಾಟಕ ಕೈಗಾರಿಕಾ ಉದ್ಯೋಗ ನಿಯಮ 1961ಕ್ಕೆ ತಿದ್ದುಪಡಿ ತರುತ್ತಿದೆ.. ಎಲ್ಲವು ಅಂದುಕೊಂಡಂತೆ ನಡೆದರೆ ಸದ್ಯದಲ್ಲೇ ಕನ್ನಡಿಗರ ಹೋರಾಟಕ್ಕೆ ಜಯ ಸಿಗಲಿದೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top