fbpx
ಸಮಾಚಾರ

ಅಂಜಲಿ ನಿಂಬಾಳ್ಕರ್ ಪತಿ ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ರನ್ನು ಟಾರ್ಗೆಟ್ ಮಾಡಿದ ದೋಸ್ತಿ ಸರ್ಕಾರ.

ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ರಾಜೀನಾಮೆ ನೀಡುವ ನಿರ್ಧಾರದಿಂದ ಹಿಂದೆ ಸರಿಯದ ಕಾರಣ ದೋಸ್ತಿ ಸರ್ಕಾರ, ಆಕೆಯ ಪತಿಯನ್ನು ಟಾರ್ಗೆಟ್ ಮಾಡಿದೆ ಎಂದು ಮೂಲಗಳು ತಿಳಿಸಿವೆ. ಸಿಐಡಿ, ಆರ್ಥಿಕ ಅಪರಾಧಗಳ ವಿಭಾಗದ ಪೊಲೀಸ್ ಮಹಾನಿರೀಕ್ಷಕರಾಗಿದ್ದ ಹೇಮಂತ್ ನಿಂಬಾಳ್ಕರ್ ಅವರನ್ನು ತಕ್ಷಣ ಜಾರಿಗೆ ಬರುವಂತೆ ಭ್ರಷ್ಟಾಚಾರ ನಿಗ್ರಹ ದಳ[ಎಸಿಬಿ] ಐಜಿಪಿಯಾಗಿ ವರ್ಗ ಮಾಡಲಾಗಿದೆ.

ಭ್ರಷ್ಟಾಚಾರ ನಿಗ್ರಹ ದಳ[ಎಸಿಬಿ] ಐಜಿಪಿಯಾಗಿದ್ದ ಎಂ.ಚಂದ್ರಶೇಖರ್ ಅವರನ್ನು ಸಿಐಡಿ, ಆರ್ಥಿಕ ಅಪರಾಧಗಳ ವಿಭಾಗದ ಪೊಲೀಸ್ ಮಹಾನಿರೀಕ್ಷಕರಾಗಿ ವರ್ಗಾವಣೆ ಮಾಡಲಾಗಿದೆ. ಈ ಮೂಲಕ ರಾಜಿನಾಮೆ ನಿರ್ಧಾರದಿಂದ ಹಿಂದೆ ಸರಿಯುವಂತೆ ಕಾಂಗ್ರೆಸ್ ಅಂಜಲಿ ನಿಂಬಾಳ್ಕರ್ ಮೇಲೆ ಒತ್ತಡ ಹೇರುತ್ತಿದೆ.

ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್​ ಅವರು ತಮ್ಮ ಶಾಸಕಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ಬಲವಾಗಿ ಹಬ್ಬಿರುವ ಬೆನ್ನಲ್ಲೇ ಬುಧವಾರ ರಾಜ್ಯ ಸರ್ಕಾರ ಅವರ ಪತಿ ಹೇಮಂತ್ ನಿಂಬಾಳ್ಕರ್ ಅವರನ್ನು ಐಜಿಪಿ ಹುದ್ದೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ದೋಸ್ತಿ ಸರಕಾರ ಅಳಿವು ಉಳಿವಿನ ಸಂದರ್ಭದಲ್ಲಿ ಇದ್ದರೂ ನಿರಂತರವಾಗಿ ವರ್ಗಾವಣೆ ಪರ್ವ ಮಾತ್ರ ಹಾಗೆ ಮುಂದುವರಿದೆ.

ಇನ್ನು 2 ದಿನಗಳ ಹಿಂದೆಯೇ ರಾಜಿನಾಮೆ ನೀಡಲು ಅಂಜಲಿ ನಿರ್ಧರಿಸಿದ್ದರು, ಆದರೆ ಸಮ್ಮಿಶ್ರ ಸರ್ಕಾರದ ಮುಖಂಡರು ರಾಜಿನಾಮೆ ನೀಡುವುದನ್ನು ತಡೆ ಹಿಡಿದಿದ್ದರು, ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನಿಂದ ಸ್ಪರ್ಧಿಸಲು ಅಂಜಲಿ ನಿರ್ಧರಿಸಿದ್ದಾರೆ.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top