fbpx
ಸಮಾಚಾರ

ಹುಟ್ಟುಹಬ್ಬದ ಸಂಭ್ರಮದಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್.

ಕರುನಾಡ ಚಕ್ರವರ್ತಿ ಡಾ.ಶಿವರಾಜ್ ಕುಮಾರ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 58ನೇ ವಸಂತಕ್ಕೆ ಕಾಲಿಡುತ್ತಿರುವ ಅಣ್ಣಾವ್ರ ಮಗ ಶಿವಣ್ಣ ಸದ್ಯ ಲಂಡನ್ ನಲ್ಲಿ ಇರುವುದರಿಂದ ಅವರ ಅನುಪಸ್ಥಿತಿಯಲ್ಲಿ ಅಭಿಮಾನಿಗಳು ಅದ್ದೊರಿಯಾಗಿ ಹುಟ್ಟುಹಬ್ಬ ಆಚರಿಸುತ್ತಿದ್ದಾರೆ.

 

 

 

View this post on Instagram

 

🤗🤗🤗

A post shared by Dr.Shivarajkumar (@dr.shivarajkumar) on

 

ಶಿವರಾಜ್‍ಕುಮಾರ್ ಕೇಕ್ ಕತ್ತರಿಸುವ ಮೂಲಕ ತಮ್ಮ ಕುಟುಂಬದ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ. ಈ ವೇಳೆ ನಟ ಪುನೀತ್ ರಾಜ್‍ಕುಮಾರ್ ಅವರು ಕೂಡ ತಮ್ಮ ಅಣ್ಣನ ಹುಟ್ಟುಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ವಿಶೇಷ ಎಂದರೆ ಈ ಹುಟ್ಟುಹಬ್ಬದಂದು ಶಿವಣ್ಣ ಅಧಿಕೃತವಾಗಿ ಫೇಸ್‍ಬುಕ್ ಹಾಗೂ ಟ್ವಿಟ್ಟರ್ ಖಾತೆಯನ್ನು ತೆರೆದಿದ್ದಾರೆ. ಈ ಬಗ್ಗೆ ಅವರು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕುವ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದಾರೆ.

ಶಿವಣ್ಣ ಅವರು ಕಳೆದ ಆರು ತಿಂಗಳಿನಿಂದ ಭುಜದ ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಕೆಲ ದಿನಗಳ ಹಿಂದೆಯಷ್ಟೇ ಶಸ್ತ್ರ ಚಿಕಿತ್ಸೆಗಾಗಿ ಲಂಡನ್‍ಗೆ ತೆರಳಿದ್ದರು. ಗುರುವಾರ ಅವರ ಶಸ್ತ್ರಚಿಕಿತ್ಸೆ ಯಶ್ವಸಿಯಾಗಿ ನಡೆದಿತ್ತು.

copying or reproducing the above content in any format without approval is criminal offence and will be prosecuted in Bengaluru court © ಸುವರ್ಣಾನುಡಿ

Click to comment
To Top